ವಿವಿಧ ಬೇಡಿಕೆಗಳ ಆಗ್ರಹದೊಂದಿಗೆ ಗ್ರಾಂ.ಪಂ ಸಿಬ್ಬಂದಿಗಳ ಮುಷ್ಕರ ಹಿನ್ನೆಲೆ!! ಸಿಬ್ಬಂದಿಗಳಿಲ್ಲದೆ ಬಿಕೋ ಎನ್ನುತ್ತಿರುವ ಪಂಚಾಯತ್-ಸಾರ್ವಜನಿಕರ ಪರದಾಟ!!

ಕಡಬ: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎನ್ನುವ ಆಗ್ರಹದೊಂದಿಗೆ ಪಂಚಾಯತ್ ಸಿಬ್ಬಂದಿಗಳು ಮುಷ್ಕರ ನಡೆಸಿದ್ದು, ಸಿಬ್ಬಂದಿಗಳಿಲ್ಲದೆ ಬಿಕೋ ಎನ್ನುತ್ತಿರುವ ಪಂಚಾಯತ್ ನಲ್ಲಿ ಸಾರ್ವಜನಿಕರು ಪರದಾಡುವಂತ ಪರಿಸ್ಥಿತಿ ಎದುರಾಗಿದೆ ಎನ್ನುವ ದೂರುಗಳು ಕೇಳಿಬಂದಿವೆ.

 

ರಾಜ್ಯಾದ್ಯಂತ ಎಲ್ಲಾ ಪಂಚಾಯತ್ ಸಿಬ್ಬಂದಿಗಳು ತಮ್ಮ ಹುದ್ದೆಯನ್ನು ‘ಸಿ’ ಮತ್ತು ‘ಡಿ’ ದರ್ಜೆಗೇರಿಸಿ, ಇತರರು ಪಡೆಯುವಂತಹ ಸೌಲಭ್ಯಗಳನ್ನು ಒದಗಿಸಬೇಕು ಹಾಗೂ ಇನ್ನಿತರ ಸರ್ಕಾರಿ ಸವಲತ್ತುಗಳು ಬೇಕು ಎನ್ನುವ ಆಗ್ರಹದೊಂದಿಗೆ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಬೆಳಗಾವಿಯಲ್ಲಿ ಧರಣಿ ನಿರತರಾಗಿದ್ದು, ಇತ್ತ ಪಂಚಾಯತ್ ನಲ್ಲಿ ಸಿಬ್ಬಂದಿಗಳಿಲ್ಲದೆ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ.

ಈ ಬಗ್ಗೆ ಸ್ಥಳೀಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಸಿಬ್ಬಂದಿಗಳ ಮನವಿ ಪುರಸ್ಕರಿಸಿ, ಕರ್ತವ್ಯಕ್ಕೆ ಹಾಜರಾಗಳು ಸರ್ಕಾರ ಸಹಕರಿಸಬೇಕು ಎಂದು ಪೆರಾಬೆ ಗ್ರಾಮ ಪಂಚಾಯತ್ ಸದಸ್ಯ ಫಯಾಜ್ ಸಿ.ಎಂ ಅವರು ಮಾಧ್ಯಮದ ಮೂಲಕ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Leave A Reply

Your email address will not be published.