ಕ್ರಿಸ್ ಮಸ್, ಹೊಸ ವರ್ಷ ಆಚರಣೆ- ಗೈಡ್ ಲೈನ್ಸ್ ಪ್ರಕಟ
ಇನ್ನೇನು ಕೆಲವೇ ದಿನಗಳಲ್ಲಿ ಕ್ರಿಸ್ಮಸ್ ಹಬ್ಬದ ಸಂಭ್ರಮ ಕಳೆ ಕಟ್ಟಲಿದೆ. ಹೀಗಾಗಿ, ಹಬ್ಬದ ಸಂಭ್ರಮದಲ್ಲಿ ರೂಲ್ಸ್ ಕಾಪಾಡುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಕೆಲವು ಸೂಚನೆಗಳನ್ನು ನೀಡಿದ್ದಾರೆ.
ಬೆಂಗಳೂರಿನಲ್ಲಿ ಕ್ರಿಸ್‌ಮಸ್, ಹೊಸ ವರ್ಷದ ಸಂದರ್ಭಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಆಯೋಜಕರಿಗೆ ಹಾಗೂ ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಬೆಂಗಳೂರು ಪೊಲೀಸರು ಕೆಲವು ಸೂಚನೆಗಳನ್ನು ನೀಡಿದ್ದಾರೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕ್ರಿಸ್‌ಮಸ್(Christmas), ಹೊಸ ವರ್ಷದ(New Year) ಕಾರ್ಯಕ್ರಮಗಳಿಗೆ ಭರದ ತಯಾರಿ ನಡೆಯುತ್ತಿವೆ. ಕೊರೊನಾ ಎಂಬ ಮಹಾಮಾರಿಯ ಹಿನ್ನೆಲೆ 2 ವರ್ಷಗಳ ಕಾಲ ಸಂಭ್ರಮಾಚರಣೆಗಳಿಗೆ ಬ್ರೇಕ್ ಹಾಕಲಾಗಿತ್ತು.
ಇದೀಗ, ಹೊಸ ಹುರುಪಿನಿಂದ ಹೊಸ ಆಲೋಚನೆಗಳ ಜೊತೆಗೆ ಅದ್ಧೂರಿಯಾಗಿ ಕ್ರಿಸ್‌ಮಸ್, ಹೊಸ ವರ್ಷ ಆಚರಿಸಲು ಬೆಂಗಳೂರಿನಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈ ಸಂಭ್ರಮಾಚರಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ತಡೆಯುವ ನಿಟ್ಟಿನಲ್ಲಿ ಸಿಟಿ ಪೊಲೀಸರು ನಿಗಾ ವಹಿಸಲು ಮುಂದಾಗಿದ್ದಾರೆ.
ಬೆಂಗಳೂರಿನಲ್ಲಿ ಕ್ರಿಸ್‌ಮಸ್, ಹೊಸ ವರ್ಷದ ಸಂದರ್ಭಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಆಯೋಜಕರು, ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಬೆಂಗಳೂರು ಪೊಲೀಸರು ಕೆಲವು ಸೂಚನೆಗಳನ್ನು ನೀಡಲಾಗಿದೆ.
ಕಾರ್ಯಕ್ರಮಕ್ಕೆ ಸಿಬ್ಬಂದಿ ಆಯೋಜನೆ ಮಾಡುವ ಸಂದರ್ಭ ಅವರ ಬಗ್ಗೆ ಸರಿಯಾಗಿ ಪರಿಶೀಲನೆ ಮಾಡುವ ಸಲುವಾಗಿ ಜೊತೆಗೆ ಮಹಿಳಾ ಸಿಬ್ಬಂದಿಯನ್ನು ನೇಮಿಸಿಕೊಂಡು ಅವರಿಗೆ ತರಬೇತಿ ನೀಡಿ ಸಾರಿಗೆ ವ್ಯವಸ್ಥೆ ಮಾಡುವಂತೆ ಆಯೋಜಕರಿಗೆ ಪೊಲೀಸರು ಸೂಚನೆ ನೀಡಿದ್ದಾರೆ.
ಪಬ್, ಹೋಟೆಲ್, ರೆಸ್ಟೋರೆಂಟ್ಗಳಲ್ಲಿ ಕ್ರಿಸ್ಮಸ್, ಹೊಸ ವರ್ಷಕ್ಕೆ ಕಾರ್ಯಕ್ರಮಗಳನ್ನು ಆಯೋಜಿಸಿದರೆ ಆ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಅನುಮತಿ ಪಡೆಯಲು ಸೂಚಿಸಲಾಗಿದೆ. ಇದರ ಜೊತೆಗೆ ಭದ್ರತಾ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ಪ್ರವೇಶ, ನಿರ್ಗಮನ ಮತ್ತು ಪಾರ್ಕಿಂಗ್ ಪ್ರದೇಶಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲು ಪೊಲೀಸರು ಸೂಚಿಸಿದ್ದಾರೆ.
ಶುಕ್ರವಾರ ಹೋಟೆಲ್, ರೆಸ್ಟೋರೆಂಟ್ ಮಾಲೀಕರೊಂದಿಗೆ ಸಭೆ ನಡೆಸಿದ ಪೊಲೀಸ್ ಇಲಾಖೆ ಕೆಲವು ಗೈಡ್ಲೈನ್ಸ್ ಹೊರಡಿಸಿದೆ. ತಾವು ಆಯೋಜಿಸುವ ಕಾರ್ಯಕ್ರಮದ ಭದ್ರತಾ ಸಿಬ್ಬಂದಿಯ ವಿರುದ್ಧ ಯಾವುದೇ ಕ್ರಿಮಿನಲ್ ಆರೋಪಗಳಿವೆಯೇ ಎಂದು ಪರಿಶೀಲನೆ ನಡೆಸಲು ಸೂಚಿಸಲಾಗಿದೆ. ಇದಕ್ಕಾಗಿ ಸೇವಾ ಸಿಂಧು ಆ್ಯಪ್ ಬಳಸಲು ಪೊಲೀಸರು ಸೂಚಿಸಿದ್ದಾರೆ ಎನ್ನಲಾಗಿದೆ.
ಪಾರ್ಟಿಗಳಲ್ಲಿ ಯಾವುದೇ ರಿತಿಯ ಶಸ್ತ್ರಾಸ್ತ್ರಗಳು, ಡ್ರಗ್ಸ್ ಅಥವಾ ಇತರ ನಿಷೇಧಿತ ವಸ್ತುಗಳಿಗೆ ಅವಕಾಶ ಕಲ್ಪಿಸದಂತೆ ಸೂಚಿಸಲಾಗಿದೆ. ಈವೆಂಟ್ ಆಯೋಜಕರು ಟ್ರಾವೆಲ್ ಏಜೆನ್ಸಿಗಳೊಂದಿಗೆ ಮಾತನಾಡಿಕೊಂಡು ಪಾರ್ಟಿಗೆ ಬಂದ ಅತಿಥಿ, ಸಿಬ್ಬಂದಿಗೆ ಸುರಕ್ಷಿತ ಸಾರಿಗೆ ವ್ಯವಸ್ಥೆಯನ್ನು ಮಾಡಲು ತಿಳಿಸಿದ್ದಾರೆ.
ಈ ಈವೆಂಟ್ನಲ್ಲಿ ಹೆಚ್ಚು ಜನರಿಗೆ ಅನುಮತಿ ನೀಡದೆ, ಹೆಚ್ಚು ಟಿಕೆಟ್ ಸೇಲ್ ಮಾಡದಂತೆ ಸೂಚನೆ ನೀಡಲಾಗಿದ್ದು, ಹೀಗೆ ಮಾಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಯಕ್ರಮ ಆಯೋಜಕರಿಗೆ ಪೊಲೀಸರು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಇದೆ ರೀತಿ, ಯಾವುದೇ ಅನುಮಾನಾಸ್ಪದ ಚಟುವಟಿಕೆ ಇಲ್ಲವೇ ವ್ಯಕ್ತಿಗಳ ಮೇಲೆ ಶಂಕೆ ವ್ಯಕ್ತವಾದರೂ ಕೂಡ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.