BEL Recruitment 2022: ಬಿಇಎಲ್‌ನಲ್ಲಿ BE/BTech ಪದವೀಧರರಿಗೆ ಉದ್ಯೋಗ | ಮಾಸಿಕ ವೇತನ ರೂ.50,000
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(Bharath Electronics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಕಾಂಕ್ಷಿಗಳಿಗೆ ಇಲ್ಲೊಂದು ಸುವರ್ಣಾವಕಾಶವಿದೆ. ಅರ್ಜಿ ಸಲ್ಲಿಸಲು ಜನವರಿ 7, 2023 ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್ ಮೂಲಕ ಈಗಲೇ ಅರ್ಜಿ ಸಲ್ಲಿಸಿ.
ಸಂಸ್ಥೆ : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
ಹುದ್ದೆ: ಪ್ರಾಜೆಕ್ಟ್ ಎಂಜಿನಿಯರ್-I
ಒಟ್ಟು : ಹುದ್ದೆ 14
ವೇತನ: ತಿಂಗಳಿಗೆ 40,000-50,000
ಉದ್ಯೋಗದ ಸ್ಥಳ :ಬೆಂಗಳೂರು
ವಿದ್ಯಾರ್ಹತೆ: ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ/ಎಲೆಕ್ಟ್ರಾನಿಕ್ಸ್ ಮತ್ತು ದೂರಸಂಪರ್ಕ/ಸಂವಹನ/ದೂರಸಂಪರ್ಕ, ಮೆಕ್ಯಾನಿಕಲ್, ಕೆಮಿಕಲ್ ಇಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.
ವಯೋಮಿತಿ: ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 1, 2022ಕ್ಕೆ ಗರಿಷ್ಠ 32 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳು- 3 ವರ್ಷ, ಎಸ್ಸಿ/ಎಸ್ಟಿ ಅಭ್ಯರ್ಥಿಗಳು- 5 ವರ್ಷ, PWD ಅಭ್ಯರ್ಥಿಗಳು-10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನ: ಪ್ರಾಜೆಕ್ಟ್ ಎಂಜಿನಿಯರ್-I ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 40,000-50,000 ಸಂಬಳ ಕೊಡಲಾಗುತ್ತದೆ.
ಅರ್ಜಿ ಶುಲ್ಕ:
ಎಸ್ಸಿ/ಎಸ್ಟಿ/PWD ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ
ಸಾಮಾನ್ಯ ಅಭ್ಯರ್ಥಿಗಳು- 472 ರೂ. ಪಾವತಿಸಬೇಕು.
ಅರ್ಜಿ ಪಾವತಿಸುವ ಬಗೆ- SBI ಕಲೆಕ್ಟ್
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ಬಗೆ: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
DGM (HR/MR,MS&ADSN)
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
ಜಾಲಹಳ್ಳಿ, P.O.,
ಬೆಂಗಳೂರು – 560013