ರಾಜ್ಯದ ‘ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್

ಗ್ರಾಮೀಣ ಓದುಗರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಹೌದು!! ರಾಜ್ಯದ 330 ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಪ್ರಸ್ತುತ 5,954 ಗ್ರಾಮ ಪಂಚಾಯಿತಿಗಳಿದ್ದು, 5575 ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಆರ್ಥಿಕ ಇಲಾಖೆಯು 330 ಗ್ರಾಮ ಪಂಚಾಯ್ತಿಗಳಲ್ಲಿ ಲಭ್ಯವಿರುವ ಕಟ್ಟಡಗಳಲ್ಲಿ ಗ್ರಾಮ ಪಂಚಾಯ್ತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳನ್ನು ಮಂಜೂರು ಮಾಡಲು ಸಹಮತಿ ನೀಡಿರುತ್ತದೆ ಎನ್ನಲಾಗಿದೆ.

ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡ ವಳಿಗಳನ್ನು ಹೊರಡಿಸಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಅಧೀನದಲ್ಲಿರುವ 5,633 ಗ್ರಾಮ ಪಂಚಾಯ್ತಿ ಗ್ರಂಥಾಲಯಗಳ ನಿರ್ವಹಣೆಯನ್ನು ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮ ಪಂಚಾಯಿತಿಗಳಿಗೆ ವರ್ಗಾಯಿಸಲಾಗುತ್ತದೆ.

ಈ ಹಿನ್ನೆಲೆಯಲ್ಲಿ ರಾಜ್ಯದ 330 ಗ್ರಾಮ ಪಂಚಾಯ್ತಿಗಳಲ್ಲಿ ಗ್ರಾಮ ಪಂಚಾಯ್ತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಲು ಆದೇಶ ಹೊರಡಿಸಿದ್ದಾರೆ.

Leave A Reply

Your email address will not be published.