ಗಳಿಕೆ ರಜೆ ನಗದೀಕರಣ ಕುರಿತು ಇಲ್ಲಿದೆ ಸರಕಾರಿ ನೌಕರರಿಗೆ ಮಹತ್ವದ ಮಾಹಿತಿ!!!
ಗಳಿಕೆ ರಜೆ ನಗದೀಕರಣ ಕುರಿತಂತೆ ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ನೀಡಿದೆ. 2023 ನೇ ಸಾಲಿನ ಅವಧಿಯಲ್ಲಿ ಗರಿಷ್ಠ 15 ದಿನಗಳಿಗೆ ಮೀರದ ಗಳಿಕೆ ರಜೆಯನ್ನು ನಗದೀಕರಣಗೊಳಿಸುವ ಸೌಲಭ್ಯವನ್ನು ಜಾರಿಗೊಳಿಸಿ ಆದೇಶಿಸಲಾಗಿದೆ.
ಕೆಲಸದ ಒತ್ತಡದಲ್ಲಿ ಕೊಂಚ ಬಿಡುವು ಸಿಕ್ಕಿದರೆ ಸಾಕಪ್ಪಾ!!! ಎಂದುಕೊಳ್ಳವವರೆ ಹೆಚ್ಚು. ಇತ್ತೀಚಿನ ದಿನಗಳಲ್ಲಿ ದಿನದ 24 ಗಂಟೆಯಲ್ಲಿ ಹೆಚ್ಚಿನ ಅವಧಿ ಆಫೀಸ್, ಕೆಲಸ ಎಂದು ಮನೆಯ ಕಡೆ ಹೆಚ್ಚು ಗಮನ ಕೊಡಲಾಗದೆ, ಮನೆಯವರೊಂದಿಗೆ ಕಾಲ ಕಳೆಯಲಾಗದೆ ಪರಿತಪಿಸುವಂತಾಗಿದೆ. ಆದರೆ, ಇದೀಗ, ನೌಕರರಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ.
2023 ನೇ ಸಾಲಿನ ಅವಧಿಯಲ್ಲಿ ಗರಿಷ್ಠ 15 ದಿನಗಳಿಗೆ ಮೀರದ ಗಳಿಕೆ ರಜೆಯನ್ನು ನಗದೀಕರಣಗೊಳಿಸುವ ಸೌಲಭ್ಯವನ್ನು ಜಾರಿಗೊಳಿಸಿ ಆದೇಶಿಸಲಾಗಿದೆ. ಈ ನಿಯಮವು ಎಲ್ಲ ವರ್ಗದ ಅಧಿಕಾರಿ/ನೌಕರರಿಗೆ ಅನ್ವಯವಾಗಲಿದ್ದು, ಗೆಜೆಟೆಡ್ ಅಧಿಕಾರಿಗಳ ವಿಷಯದಲ್ಲಿ 2023 ನೇ ಸಾಲಿನ ಗಳಿಕೆ ರಜೆ ನಗದೀಕರಣ ಸೌಲಭ್ಯ ಮಂಜೂರಾತಿ ಉದ್ದೇಶಕ್ಕಾಗಿ ಮಾತ್ರ HRMS ಸಕ್ಷಮ ರಜೆ ಮಂಜೂರಾತಿ ಪ್ರಾಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ.
2023 ರ ಜನವರಿ 1ರಿಂದ ವರ್ಷ ಮುಗಿಯುವುದರೊಳಗಾಗಿ ಯಾವುದೇ ತಿಂಗಳಿನಲ್ಲಿ ಗಳಿಕೆ ರಜೆ ನಗದೀಕರಣದ ಸೌಲಭ್ಯ ಪಡೆಯಬಹುದಾಗಿದ್ದು, ಇದಕ್ಕಾಗಿ ಒಂದು ತಿಂಗಳ ಮುಂಚಿತವಾಗಿ ನೋಟಿಸ್ ನೀಡುವುದು ಅವಶ್ಯಕವಾಗಿದೆ.