ಕೆಲಸ ಮುಗಿಸಿ ವಾಪಾಸು ಬರುತ್ತಿದ್ದ ಯುವಕನ ಬರ್ಬರ ಹತ್ಯೆ |

ಅಪರಾಧ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿರುವ ಘಟನೆಗಳು ನಡೆಯುತ್ತಲೇ ಇರುತ್ತದೆ. ಈಗ ಅಂತಹುದೇ ಒಂದು ಘಟನೆ ಬೆಂಗಳೂರಿನಲ್ಲಿ ನಿನ್ನೆ ಅಂದರೆ ಮಂಗಳವಾರ ರಾತ್ರಿ ನಡೆದಿದೆ. ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.

 

ಹೆಗಡೆನಗರ ನಿವಾಸಿ ಸಲ್ಮಾನ್ ಎಂಬಾತನೇ ಕೊಲೆಯಾದ ಯುವಕ. ತನ್ನ ತಂದೆಯ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು, ರಾತ್ರಿ 11 ಗಂಟೆಯ ವೇಳೆಗೆ ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಸಮಯದಲ್ಲಿ ಈ ಘಟನೆ ನಡೆದಿದೆ. ನಡುರಸ್ತೆಯಲ್ಲೇ ಸಲ್ಮಾನ್​ಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ, ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಸಿಸಿಟಿವಿಯನ್ನು ಪರಿಶೀಲಿಸುತ್ತಿದ್ದಾರೆ, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆಬೀಸಿದ್ದಾರೆ.

Leave A Reply

Your email address will not be published.