ಮಂಗಳೂರು : ಗಮನಿಸಿ ಸಾರ್ವಜನಿಕರೇ | ರಸ್ತೆ ಅಭಿವೃದ್ಧಿ ಕಾಮಗಾರಿ, ಪರ್ಯಾಯ ಮಾರ್ಗ – ಕಮಿಷನರ್ ಶಶಿಕುಮಾರ್ ಆದೇಶ

ಮಂಗಳೂರು : ರಸ್ತೆ ಅಭಿವೃದ್ದಿ ಕಾಮಗಾರಿ ನಡೆಸುತ್ತಿರೋದ್ರಿಂದ ಸಂಚಾರಕ್ಕಾಗಿ ಈಗಾಗಲೇ ಪರ್ಯಾಯ ಮಾರ್ಗಗಳ ವ್ಯವಸ್ಥೆಯನ್ನು ಸೂಚಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ಆದೇಶಿಸಿದ್ದಾರೆ.
ಸುದ್ದಿಗಾರರೊಂದಿಗೆ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ಮಾತನಾಡಿ, ನಗರದ ಜಪ್ಪು ಮಹಾಕಾಳಿ ಪಡ್ಪು ಕೆನರಾ ಪಿಂಟೋ ಗ್ಯಾರೇಜ್ ಬಳಿಯಿಂದ ನೇತ್ರಾವತಿ ರೈಲ್ವೆ ಲೆವೆಲ್ ಕ್ರಾಸಿಂಗ್‌ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವುದರಿಂದ ಈ ರಸ್ತೆಯಲ್ಲಿ ಮುಂದಿನ ಒಂದು ವರ್ಷ ಕಾಲ ವಾಹನ ಸಂಚಾರ ನಿಷೇಧಿಸಲಾಗಿದ್ದು, ತಾತ್ಕಾಲಿಕವಾಗಿ ಬದಲಿ ಸಂಚಾರ ವ್ಯವಸ್ಥೆ ಕಲ್ಪಿಸಿ ಎಂದಿದ್ದಾರೆ
ಮೋಟಾರ್ ವಾಹನ ಕಾಯಿದೆ1988ರ ಕಲಂ 115ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ 2022ರ ಡಿ.19ರಿಂದ 2023ನೇ ಡಿಸೆಂಬರ್ 19ರವರೆಗೆ ೧ ವರ್ಷ ಕಾಲ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ತಾತ್ಕಾಲಿಕ ರಸ್ತೆ
ಕಾಮಗಾರಿ ನಡೆಯುವ ವೇಳೆ ಜಪ್ಪು ಮಹಾಕಾಳಿ ಪಡ್ಡು ಕೆನರಾ ಪಿಂಟೋ ಗ್ಯಾರೇಜ್ ಬಳಿಯಿಂದ ನೇತ್ರಾವತಿ ರೈಲ್ವೆ ಕ್ರಾಸಿಂಗ್‌ವರೆಗೆ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಿದೆ. ಕಾಮಗಾರಿ ನಡೆಯುವ ವೇಳೆ ಮಂಗಳೂರು ನಗರದ ಮೋರ್ಗನ್ಸ್ ಗೇಟ್ ಮಹಾಕಾಳಿ ಪಡ್ಡು ಮುಖಾಂತರ ರಾಷ್ಟ್ರೀಯ ಹೆದ್ದಾರಿ-66 ಕಡೆಗೆ ಸಂಚರಿಸುವ ಎಲ್ಲಾ ವಾಹನಗಳು ವೆಲೆನ್ಸಿಯಾ ರಸ್ತೆ ಮೂಲಕ ಕರಾವಳಿ ವೃತ್ತಕ್ಕೆ ಬಂದು ಅಲ್ಲಿಂದ ಬಲಕ್ಕೆ ತಿರುಗಿ ರಾಷ್ಟ್ರೀಯ ಹೆದ್ದಾರಿ-66ನ್ನು ಪ್ರವೇಶಿಸಿ ಮುಂದಕ್ಕೆ ಸಂಚರಿಸಬೇಕು.

ರಾಷ್ಟ್ರೀಯ ಹೆದ್ದಾರಿ-66 ರಿಂದ ಮಹಾಕಾಳಿ ಪಡ್ಡು ಮೂಲಕ ನಗರಕ್ಕೆ ಬರುವ ಎಲ್ಲಾ ವಾಹನಗಳು ಮಹಾವೀರ ವೃತ್ತದಲ್ಲಿ ಎಡಕ್ಕೆ ತಿರುಗಿ ಹಳೆ ಕಂಕನಾಡಿ ರಸ್ತೆ ಮೂಲಕ ನಗರಕ್ಕೆ ಪ್ರವೇಶಿಸಿ ಮುಂದಕ್ಕೆ ವೆಲೆನ್ಸಿಯಾ ರಸ್ತೆಯಲ್ಲಿ ಸಂಚರಿಸಬೇಕು ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ಆದೇಶಿಸಿದ್ದಾರೆ.

Leave A Reply

Your email address will not be published.