ಗ್ರಾಹಕರೇ ಏರ್ ಟೆಲ್ ನೀಡಿದೆ ಧಮಕಾ ಆಫರ್ | ಸಿಗಲಿದೆ ಈ ಹಳೆಯ ಕೊಡುಗೆ

Share the Article

ಟೆಲಿಕಾಂ ಕಂಪನಿಗಳು ಹಲವಾರು ಇವೆ ಆದರೆ
ಭಾರತೀಯ ಟೆಲಿಕಾಂ ವಲಯದಲ್ಲಿ ಎರಡನೇ ಅತಿದೊಡ್ಡ ಟೆಲಿಕಾಂ ಆಪರೇಟರ್ ಆಗಿ ಗುರುತಿಸಿಕೊಂಡಿರುವ ಭಾರ್ತಿ ಏರ್‌ಟೆಲ್‌ ಚಂದಾದಾರರಿಗೆ ಭಿನ್ನ ಶ್ರೇಣಿಯಲ್ಲಿ ಪ್ರೀಪೇಯ್ಡ್‌ ಪ್ಲ್ಯಾನ್‌ ನ್ನು ಪರಿಚಯ ಮಾಡಲಾಗಿದೆ. ಹೌದು ಏರ್‌ಟೆಲ್‌ ಟೆಲಿಕಾಂ ಗ್ರಾಹಕರಿಗೆ ಭಿನ್ನ ಬೆಲೆಯಲ್ಲಿ ಪ್ರೀಪೇಯ್ಡ್‌ ಪ್ಲ್ಯಾನ್‌ಗಳ ಯೋಜನೆ ಒದಗಿಸಿದೆ. ಅವುಗಳಲ್ಲಿ ಕೆಲವು ಯೋಜನೆಗಳು ಡೇಟಾ ಜೊತೆಗೆ ಹೆಚ್ಚುವರಿಯಾಗಿ ಓಟಿಟಿ ಪ್ರಯೋಜನ ಸಹ ಪಡೆದಿವೆ.

ಸದ್ಯ ವಿ ಟೆಲಿಕಾಂನ ಬಹುತೇಕ ಯೋಜನೆಗಳು ಅಧಿಕ ಡೇಟಾ, ಆಕರ್ಷಕ ವ್ಯಾಲಿಡಿಟಿ ಪ್ರಯೋಜನ ಒಳಗೊಂಡಿವೆ. ಅದಾಗ್ಯೂ ಏರ್‌ಟೆಲ್‌ ಟೆಲಿಕಾಂನ ಈ ಎರಡು ಪ್ಲ್ಯಾನ್‌ಗಳಲ್ಲಿ ಸಿಗುವ ಪ್ರಯೋಜನಗಳು ಗ್ರಾಹಕರಿಗೆ ಖಂಡಿತಾ ಉಪಯುಕ್ತ ಆಗಲಿದೆ.

ಆದರೆ ಏರ್‌ಟೆಲ್‌ ತನ್ನ 3359ರೂ. ಮತ್ತು 499ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ಗಳು ಉಚಿತ ಡಿಸ್ನಿ+ ಹಾಟ್‌ಸ್ಟಾರ್ ಚಂದಾದಾರಿಕೆ ಸೌಲಭ್ಯವನ್ನು ಈಗ ಮತ್ತೆ ಪರಿಚಯಿಸಿ ಗಮನ ಸೆಳೆದಿದೆ. ಕಳೆದ ನವೆಂಬರ್‌ನಲ್ಲಿ ಈ ಪ್ಲ್ಯಾನ್‌ಗಳಿಂದ ಡಿಸ್ನಿ+ ಹಾಟ್‌ಸ್ಟಾರ್ ಸೌಲಭ್ಯ ಹಿಂಪಡೆದಿತ್ತು. ಇನ್ನು ಈ ಪ್ಲ್ಯಾನ್‌ಗಳು ಇತರೆ ಕೆಲವು ಪ್ರಯೋಜನಗಳನ್ನು ಪಡೆದಿವೆ. ಹಾಗಾದರೆ ಏರ್‌ಟೆಲ್‌ನ 3359ರೂ. ಮತ್ತು 499ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ಗಳ ಪ್ರಯೋಜನಗಳ ಬಗ್ಗೆ ಇಲ್ಲಿದೆ ಮಾಹಿತಿ.

ಏರ್‌ಟೆಲ್‌ ಟೆಲಿಕಾಂನ 839ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು :

  • ಏರ್‌ಟೆಲ್‌ ಟೆಲಿಕಾಂನ 839ರೂ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಒಳಗೊಂಡಿದೆ.
  • ಇದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ.
  • ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ.
  • ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಡಿಸ್ನಿ+ ಹಾಟ್‌ಸ್ಟಾರ್ ಚಂದಾದಾರಿಕೆ ಸೌಲಭ್ಯ ಲಭ್ಯ ಇದೆ.
  • ಜೊತೆಗೆ ಏರ್‌ಟೆಲ್‌ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.
  • ಹಾಗೆಯೇ ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್, ವೆಂಕ್ ಮ್ಯೂಸಿಕ್ ಲಭ್ಯ.

ಏರ್‌ಟೆಲ್‌ನ 3359ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು :

  • ಏರ್‌ಟೆಲ್‌ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ.
  • ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯ ವಾಗಲಿವೆ.
  • ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.
  • ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.
  • ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಹೆಚ್ಚುವರಿಯಾಗಿ ಮೂರು ತಿಂಗಳ ಡಿಸ್ನಿ+ ಹಾಟ್‌ಸ್ಟಾರ್ ಚಂದಾದಾರಿಕೆ ಹಾಗೂ ಏರ್‌ಟೆಲ್‌ ಆಪ್ಸ್‌ಗಳ ಸೇವೆ ಪಡೆದಿದೆ.

ಏರ್‌ಟೆಲ್‌ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು :

  • ಏರ್‌ಟೆಲ್‌ ಟೆಲಿಕಾಂನ 666 ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 77 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ.
  • ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ.
  • ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ.
  • ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ.
  • ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 126 GB ಡೇಟಾ ಲಭ್ಯ ಆಗುತ್ತದೆ.
  • ಹೆಚ್ಚುವರಿಯಾಗಿ ಏರ್‌ಟೆಲ್‌ ವೆಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್, ಉಚಿತ ಹೆಲೋ ಟ್ಯೂನ್‌ ಸೌಲಭ್ಯ ದೊರೆಯುತ್ತದೆ.

ಏರ್‌ಟೆಲ್‌ ಟೆಲಿಕಾಂನ 699ರೂ, ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು :

  • ಏರ್‌ಟೆಲ್‌ ಟೆಲಿಕಾಂನ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಸಹ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ.
  • ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ಲಭ್ಯವಾಗಲಿದೆ.
  • ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ.
  • ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ.
  • ಹೆಚ್ಚುವರಿಯಾಗಿ ಅಮೆಜಾನ್ ಪ್ರೈಮ್ ಮೆಂಬರ್‌ಶಿಪ್ ಪ್ರಯೋಜನ ಸಿಗಲಿದೆ.
  • ಇದರೊಂದಿಗೆ ಫಾಸ್ಟ್‌ಟ್ಯಾಗ್‌ ರೀಚಾರ್ಜ್‌ನಲ್ಲಿ 100ರೂ. ಕ್ಯಾಶ್‌ಬ್ಯಾಕ್‌ ಲಭ್ಯ ಆಗಲಿದೆ.
  • ಹೆಲೋ ಟ್ಯೂನ್ ಹಾಗೂ ವೆಂಕ್ ಮ್ಯೂಸಿಕ್ ಸೌಲಭ್ಯ ದೊರೆಯಲಿದೆ.

ಈ ಮೇಲಿನ ಏರ್‌ಟೆಲ್‌ ಪ್ರೀಪೇಯ್ಡ್‌ ಪ್ಲ್ಯಾನ್‌ಗಳಿಂದ ಡಿಸ್ನಿ+ ಹಾಟ್‌ಸ್ಟಾರ್ ಸೌಲಭ್ಯ ಮತ್ತು ಈ ಮೇಲಿನಂತೆ ಇತರೆ ಕೆಲವು ಪ್ರಯೋಜನಗಳನ್ನು ನೀವು ಪಡೆಯಬಹುದಾಗಿದೆ.

Leave A Reply