ಪಡಿತರ ಚೀಟಿದಾರರಿಗೆ ಬಂಪರ್‌ ಸಿಹಿ ಸುದ್ದಿ

ಸರ್ಕಾರ ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ರೂಪಿಸಿದ್ದು, ಅದರಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ . ಜನತೆಯ ಆರ್ಥಿಕ ಸ್ಥಿತಿಗತಿಯನ್ನು ಪರಾಮರ್ಶೆ ನಡೆಸಿ ಅದರಂತೆ ಎಪಿಎಲ್ ಹಾಗೂ ಬಿಪಿಎಲ್ ಕುಟುಂಬಗಳಿಗೆ ಉಚಿತ ಅಕ್ಕಿ, ಪಡಿತರ ಚೀಟಿ ವಿತರಣೆ ಮಾಡಿ ನೆರವಾಗುತ್ತಿವೆ. ಇದೀಗ, ಉಚಿತ ಪಡಿತರ ಪಡೆಯುವವರಿಗೆ ಬಂಪರ್ ಆಫರ್ ಇದ್ದು, ಸರ್ಕಾರ ಇಂದು ಸಿಹಿಸುದ್ದಿ ಪ್ರಕಟಿಸಲಿದೆ.

 

ಡಿಸೆಂಬರ್ ನಂತರವೂ ಬಡವರಿಗೆ ಉಚಿತ ಪಡಿತರವನ್ನು ಒದಗಿಸುವ PMGKAY ಯೋಜನೆಯನ್ನು ಕೇಂದ್ರ ಸರ್ಕಾರ ವಿಸ್ತರಿಸಲಿದೆ ಎನ್ನಲಾಗುತ್ತಿದ್ದು, ಈ ಬಗ್ಗೆ ನಡೆಯಲಿರುವ ಕ್ಯಾಬಿನೆಟ್ ಸಭೆಯಲ್ಲಿ ಇಂದು ನಿರ್ಧಾರ ಹೊರ ಬೀಳಲಿದೆ ಎನ್ನಲಾಗುತ್ತಿದೆ.

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ಉಚಿತ ರೇಷನ್ ಪಡೆಯುತ್ತಿದ್ದವರಿಗೆ ಸಂತಸದ ಸುದ್ದಿ ನೀಡಲು ಅಣಿಯಾಗಿದೆ. ಸರ್ಕಾರಕ್ಕೆ ಸಾಕಷ್ಟು ಆಹಾರ ಧಾನ್ಯಗಳು ಪೂರೈಕೆ ಆಗದ ಹಿನ್ನೆಲೆ ಡಿಸೆಂಬರ್ ಬಳಿಕ ಸರ್ಕಾರ ಈ ಯೋಜನೆಯಡಿ ನೀಡುವ ಸೌಲಭ್ಯವನ್ನು ನಿಲ್ಲಿಸಲಿದೆ ಎಂಬ ಊಹಾಪೋಹಗಳು ಹರಿದಾಡುತ್ತಿತ್ತು. ಆದರೆ ಇದೀಗ ಡಿಸೆಂಬರ್ ನಂತರವೂ ಬಡವರಿಗೆ ಉಚಿತ ಪಡಿತರವನ್ನು ಒದಗಿಸುವ PMGKAY ಯೋಜನೆಯನ್ನು ಕೇಂದ್ರ ಸರ್ಕಾರ ವಿಸ್ತರಿಸಲಿದೆ ಎಂದು ಹೇಳಲಾಗುತ್ತಿದೆ.

ಸೆಪ್ಟೆಂಬರ್‌ನಲ್ಲಿ, ಪಡಿತರ ಯೋಜನೆಯ ಗಡುವನ್ನು ಸರ್ಕಾರವು ಮೂರು ತಿಂಗಳವರೆಗೆ ಅಂದರೆ ಡಿಸೆಂಬರ್ 31 ರವರೆಗೆ ವಿಸ್ತರಣೆ ಮಾಡಿತ್ತು. ಇದೀಗ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಈ ಬಗ್ಗೆ ಮಾಹಿತಿ ನೀಡಿದ್ದು , ಸರ್ಕಾರದ ಬಳಿ ಸಾಕಷ್ಟು ಆಹಾರ ಧಾನ್ಯ ದಾಸ್ತಾನು ಇದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ವಿಸ್ತರಿಸುವ ಬಗ್ಗೆ ಕ್ಯಾಬಿನೆಟ್ ನಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ.

ಪ್ರಧಾನ ಮಂತ್ರಿ ಅಧ್ಯಕ್ಷತೆಯಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಇಂದಿನ ಸಭೆಯಲ್ಲಿ ಪಡಿತರ ಯೋಜನೆ ಮುಂದುವರಿಸುವುದು ಸೇರಿದಂತೆ ಹಲವು ನಿರ್ಧಾರಗಳನ್ನು ಕೈಗೊಳ್ಳಬಹುದು ಎಂದು ಅಂದಾಜಿಸಲಾಗಿದೆ. .

ಉಚಿತ ಪಡಿತರ ವಿತರಣೆಗೆ ಸರ್ಕಾರ 1.80 ಲಕ್ಷ ಕೋಟಿ ಖರ್ಚು ಮಾಡಲಾಗಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಅವರು ಮಾಹಿತಿ ನೀಡಿದ್ದಾರೆ. ಈ ನಡುವೆ ಮತ್ತೆ ‘ಕೋವಿಡ್-19 ತನ್ನ ಅಟ್ಟಹಾಸ ಮೆರೆಯುವ ಆತಂಕ ಕೂಡ ಮನೆ ಮಾಡಿದೆ. PMGKAY ಯೋಜನೆಯ ಗಡುವು ಡಿಸೆಂಬರ್ ವರೆಗೆ ಇರಲಿದ್ದು, ಅದನ್ನು ವಿಸ್ತರಿಸುವ ಬಗ್ಗೆ ಪ್ರಧಾನಿ ಮೋದಿ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

ಉತ್ತರ ಪ್ರದೇಶ, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಬರ ಹಾಗೂ ಅಲ್ಲಿನ ಹವಾಮಾನ ಬದಲಾವಣೆಯ ಪರಿಣಾಮಗಳಿಂದಾಗಿ ಅಕ್ಕಿ ಮತ್ತು ಗೋಧಿ ಉತ್ಪಾದನೆಯಲ್ಲಿ ಇಳಿಮುಖವಾಗುವ ಸಾಧ್ಯತೆಯಿದೆ ಎಂದು ಹೆಚ್ಚಿನವರು ಅಂದಾಜಿಸಿದ್ದಾರೆ. ಆದರೆ, ಈ ಗ್ರಹಿಕೆ ಸರಿಯಲ್ಲ ಎಂದು ಶೋಭಾ ಕರಂದ್ಲಾಜೆಯವರು ಸ್ಪಷ್ಟ ಪಡಿಸಿದ್ದಾರೆ.

ಜನವರಿ 1, 2023 ರ ವೇಳೆಗೆ ಸುಮಾರು 159 ಲಕ್ಷ ಟನ್ ಗೋಧಿ ಮತ್ತು 104 ಲಕ್ಷ ಟನ್ ಅಕ್ಕಿ ಲಭ್ಯವಿರಲಿದೆ ಎಂದು ಆಹಾರ ಸಚಿವಾಲಯ ಮಾಹಿತಿ ನೀಡಿದೆ. ಬಫರ್ ನಿಯಮದ ಪ್ರಕಾರ ಜನವರಿ 1 ರಂದು 138 ಲಕ್ಷ ಟನ್ ಗೋಧಿ ಮತ್ತು 76 ಲಕ್ಷ ಟನ್ ಅಕ್ಕಿ ಬೇಕಾಗಿದೆ. ಡಿಸೆಂಬರ್ 15ರವರೆಗೆ ಕೇಂದ್ರ ಸಂಗ್ರಹದಲ್ಲಿ ಸುಮಾರು 180 ಲಕ್ಷ ಟನ್ ಗೋಧಿ ಹಾಗೂ 111 ಲಕ್ಷ ಟನ್ ಅಕ್ಕಿ ಲಭ್ಯವಿದೆ ಎನ್ನಲಾಗಿದೆ.

Leave A Reply

Your email address will not be published.