ಗ್ರಾಮ ಪಂಚಾಯತಿ ಸದಸ್ಯರಿಗೂ ಪಿಂಚಣಿ ಸೌಲಭ್ಯ : ಸಿಎಂ ಬೊಮ್ಮಾಯಿ

ಗ್ರಾಮ ಪಂಚಾಯತ್ ಸದಸ್ಯರಿಗೆ ಬೊಮ್ಮಾಯಿ ಅವರು ಸರಕಾರದ ಪರವಾಗಿ ಸಿಹಿ ಸುದ್ದಿ ನೀಡಿದ್ದಾರೆ. ಹೌದು ಬರುವ ದಿನಗಳಲ್ಲಿ ಆರ್ಥಿಕತೆ ಬೆಳವಣಿಗೆ ಆದರೆ ಗ್ರಾಮ ಪಂಚಾಯತಿ ಸದಸ್ಯರಿಗೂ ಪಿಂಚಣಿ ಸೌಲಭ್ಯ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆಶ್ವಾಸನೆ ನೀಡಿದ್ದಾರೆ .

 

ವಿಧಾನಪರಿಷತ್ ಅಧಿವೇಶನದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಈಗಾಗಲೇ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಗೌರವಧನ ಹೆಚ್ಚಳ ಮಾಡಲಾಗಿದ್ದು ಮುಂದಿನ ದಿನಗಳಲ್ಲಿ ಆರ್ಥಿಕತೆ ಸುಧಾರಿಸಿದರೆ ಗ್ರಾಮ ಪಂಚಾಯತಿ ಸದಸ್ಯರಿಗೂ ಪಿಂಚಣಿ ಸೌಲಭ್ಯ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆಶ್ವಾಸನೆ ನೀಡಿದ್ದಾರೆ.

ರಾಜ್ಯ ಸರ್ಕಾರದಿಂದ ಎಲ್ಲಾ ಗ್ರಾಮ ಪಂಚಾಯತಿಗಳ ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಹೆಚ್ಚಳ ಮಾಡಲಾಗಿದೆ. ಈ ಮೂಲಕ ಗ್ರಾಮ ಪಂಚಾಯಿತಿ fಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಗೌರವಧನ ಹೆಚ್ಚಿಸಿ ಖುಷಿಯ ವಿಚಾರ ತಿಳಿಸಲಾಗಿದೆ. ಅದಲ್ಲದೆ ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ.

ಈ ಮೊದಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ಅಧ್ಯಕ್ಷರುಗಳಿಗೆ ರೂ.3,000, ಉಪಾಧ್ಯಕ್ಷರಿಗೆ ರೂ.2,000 ಹಾಗೂ ಸದಸ್ಯರಿಗೆ ರೂ.1000 ಮಾಸಿಕ ಗೌರವಧನವನ್ನು ನಿಗಧಿಪಡಿಸಲಾಗಿತ್ತು ಎಂದಿದ್ದಾರೆ.

ಪ್ರಸ್ತುತ ಗೌರವಧನವನ್ನು ಪರಿಷ್ಕರಿಸಿ, ಗ್ರಾಮ ಪಂಚಾಯಿತಿಗಳ ಅಧ್ಯಕ್ಷರುಗಳಿಗೆ ರೂ.6,000, ಉಪಾಧ್ಯಕ್ಷರುಗಳಿಗೆ ರೂ.4,000 ಹಾಗೂ ಸದಸ್ಯರುಗಳಿಗೆ ರೂ.2,000 ಮಾಸಿಕ ಗೌರವಧವನ್ನು ಪರಿಷ್ಕರಿಸಿ ನಿಗದಿಗೊಳಿಸಿ ವಿಧಾನಪರಿಷತ್ ಅಧಿವೇಶನದಲ್ಲಿ ಸಿ ಎಂ ಬಸವರಾಜ್ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ .

Leave A Reply

Your email address will not be published.