ಬೆಂಗಳೂರು ವಿಮಾನ ಪ್ರಯಾಣಿಕರ ಗಮನಕ್ಕೆ : ಈ ಕೋವಿಡ್ ಮಾರ್ಗಸೂಚಿ ಪಾಲಿಸಿ

Share the Article

ಹೊರ ರಾಜ್ಯದಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕೋವಿಡ್ ಮಾರ್ಗಸೂಚಿ ಪ್ರಕಟಿಸಲಾಗಿದೆ.

ಹೊಸವರ್ಷಾಚರಣೆ ಹಿನ್ನೆಲೆ ಬೆಂಗಳೂರಿಗೆ ಏರ್‌ಪೋರ್ಟ್‌ಗೆ ಬರುವವರು ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಆ ನಿಟ್ಟಿನಲ್ಲಿ ವಿಮಾನ ನಿಲ್ದಾಣಕ್ಕೆ ಬರುವ ಎಲ್ಲಾ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯವಾಗಿದೆ. ಶೇ. 2ರಷ್ಟು ಪ್ರಯಾಣಿಕರಿಗೆ ರ‍್ಯಾಂಡಮ್ ಕೋವಿಡ್‌ ಟೆಸ್ಟ್ (ಗಂಟಲು ದ್ರವ ನೀಡಿ ಏರ್ಪೋರ್ಟ್‌ನಿಂದ ಹೊರಗೆ ಬರತಕ್ಕದ್ದು) ಮಾಡಲಾಗಿದೆ.

ರೋಗ ಲಕ್ಷಣಗಳು ಕಂಡುಬರುವ ಪ್ರಯಾಣಿಕರು ತಕ್ಷಣ ಐಸೋಲೇಷನ್ ಆಗಬೇಕು. 12 ವರ್ಷದ ಒಳಗಿನ ಮಕ್ಕಳಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಅಲ್ಲ. ರೋಗ ಗುಣ ಲಕ್ಷಣಗಳು ಇದ್ದರೆ ಮಾತ್ರ ಟೆಸ್ಟಿಂಗ್ ಮಾಡಿಸಿಕೊಳ್ಳಬೇಕು. ರೋಗ ಲಕ್ಷಣಗಳಿಲ್ಲದ ಪ್ರಯಾಣಿಕರು ಸ್ವಯಂ ನಿಗಾವಹಿಸಲು ಸೂಚಿಸಲಾಗಿದೆ.

Leave A Reply