Karate Class: ಶಾಲೆಗಳಲ್ಲಿ ಇನ್ಮುಂದೆ ಯೋಗದ ಜೊತೆಗೆ ಕರಾಟೆ ಕೋರ್ಸ್!
ಯೋಗ ವ್ಯಾಯಾಮವು ಆರೋಗ್ಯವನ್ನು ಸಮತೋಲನದಲ್ಲಿ ಇರಿಸುತ್ತದೆ. ಕರ್ನಾಟಕ ಸರ್ಕಾರವು ಇತ್ತೀಚಿಗೆ ಶೈಕ್ಷಣಿಕವಾಗಿ ವಿದ್ಯಾರ್ಥಿಗಳ ಸಾಮರ್ಥ್ಯವನ್ನು ಹೆಚ್ಚಿಸುವ ಸಲುವಾಗಿ ಹಲವಾರು ರೀತಿಯ ಪ್ರಯತ್ನ ಮಾಡುತ್ತಿದೆ ಅದರ ಭಾಗವಾಗಿ ಇಲ್ಲಿ ಹೊಸದೊಂದು ಯೋಜನೆ ತರಲು ಚಿಂತಿಸಿದೆ. ಹೌದು ಇನ್ನುಮುಂದೆ ಪ್ರತಿಯೊಂದು ಶಾಲೆಗಳಲ್ಲಿ ಕರ್ನಾಟಕ ಸರ್ಕಾರವು ಇತ್ತೀಚಿಗೆ ಶೈಕ್ಷಣಿಕವಾಗಿ ವಿದ್ಯಾರ್ಥಿಗಳ ಸಾಮರ್ಥ್ಯವನ್ನು ಹೆಚ್ಚಿಸುವ ಸಲುವಾಗಿ ಯೋಗದ ಜೊತೆಗೆ ಕರಾಟೆಯನ್ನೂ ಸಹ ಕಲಿಸಬೇಕು ಎಂದು ನಿರ್ಧರಿಸಲಾಗಿದೆ.
2023 ರ ಶೈಕ್ಷಣಿಕ ವರ್ಷದಿಂದ ಯೋಗದ ಜೊತೆಗೆ ಹೆಣ್ಣು ಮಕ್ಕಳ ಆತ್ಮರಕ್ಷಣೆಗಾಗಿ ಅಲ್ಪಾವಧಿ ಕೋರ್ಸ್ ಅನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಓಬವ್ವ ಆತ್ಮರಕ್ಷಣಾ ಕರಾಟೆ ಪ್ರದರ್ಶನವನ್ನು ವೀಕ್ಷಿಸಿ ಬೊಮ್ಮಾಯಿ ಅವರು ಮಾತನಾಡುವ ಸಂದರ್ಭದಲ್ಲಿ ಈ ವಿಚಾರ ಉಲ್ಲೇಖ ಮಾಡಿದ್ದಾರೆ. ಹೌದು ಆತ್ಮರಕ್ಷಣೆಗಾಗಿ ಈ ಅಲ್ಪಾವಧಿ ಕೋರ್ಸ್ ಅನ್ನು ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾರಂಭಿಸುವ ಅಗತ್ಯವನ್ನು ಒತ್ತಿ ಹೇಳಿದ ಅವರು ಮುಂದಿನ ಶೈಕ್ಷಣಿಕ ವರ್ಷದಿಂದ ಪಿಯು ಹಂತದವರೆಗೆ ಯೋಗದ ಜೊತೆಗೆ ಕರಾಟೆ ಕಲಿಸಲಾಗುವುದು ಎಂದು ಹೇಳಿದ್ದಾರೆ. ಈ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಪ್ರತಿಯೊಬ್ಬ ನಾಗರಿಕನಿಗೂ ಆತ್ಮರಕ್ಷಣೆ ಅವಶ್ಯ. ಹೆಣ್ಣು ಮಕ್ಕಳ ಆತ್ಮರಕ್ಷಣೆಗಾಗಿ ಕರಾಟೆ ತರಬೇತಿ ಸೇರಿದಂತೆ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗುವುದು ಎಂದು ಸೂಚಿಸಿದ್ದಾರೆ.
ಉದ್ಯೋಗಿ ಮಹಿಳೆಯರು, ವಿದ್ಯಾರ್ಥಿಗಳು ಮತ್ತು ಇತರರಿಗೆ ಬೋಧನೆ ಮಾಡುವುದು ಉತ್ತಮ ಕ್ರಮವಾಗಿದೆ, ಇದನ್ನು ದೊಡ್ಡ ಪ್ರಮಾಣದಲ್ಲಿ ವಿಸ್ತರಿಸಬಹುದು. ಆತ್ಮರಕ್ಷಣೆಯ ತರಬೇತಿಯನ್ನು ಪಡೆಯುವುದು ಹೆಣ್ಣುಮಕ್ಕಳಿಗೆ ಮಾತ್ರವಲ್ಲದೆ ಸಮಾಜಕ್ಕೂ ಒಳ್ಳೆಯದು.
ಸದ್ಯ ವಿದ್ಯಾರ್ಥಿನಿಯರಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಾವು ₹ 700 ಕೋಟಿ ವೆಚ್ಚದಲ್ಲಿ ನಿರ್ಭಯ ಯೋಜನೆಯನ್ನು ಕೈಗೆತ್ತಿಕೊಂಡಿದ್ದೇವೆ ಮತ್ತು ಇದನ್ನು ಎಲ್ಲಾ ನಗರಗಳಿಗೂ ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.
ಈ ಹೊಸ ಯೋಜನೆಯಿಂದ ಹೆಣ್ಣುಮಕ್ಕಳು ಆತ್ಮ ರಕ್ಷಣೆ ಮಾಡಿಕೊಳ್ಳುವ ಜೊತೆಗೆ ಆತ್ಮ ಸ್ಥೈರ್ಯ ಹೊಂದಬಹುದಾಗಿದೆ.