BREAKING NEWS : ಕೋವಿಡ್ ಹೆಚ್ಚಳ ಪ್ರಕರಣ | ಈ 5 ದೇಶಗಳಿಂದ ಬರುವ ಪ್ರಯಾಣಿಕರಿಗೆ ಈ ಪರೀಕ್ಷೆ ಕಡ್ಡಾಯ!!!

ಕೊರೋನಾ ಸೋಂಕು ಸಂಪೂರ್ಣ ಜಗತ್ತನ್ನೇ ತಟಸ್ಥ ಮಾಡಿತ್ತು. ಇನ್ನೇನು ಕೊರೋನ ಭಯದಿಂದ ಚೇತರಿಕೆ ಕಾಣುವಷ್ಟರಲ್ಲಿ ಕೊರೋನ ದ BF.7 ಉಪತಳಿ ಕಂಡು ಬಂದಿದೆ. ಈ ಕುರಿತಾಗಿ ವಿಶ್ವದ ಕೆಲವು ಭಾಗಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ, ಮುಂಜಾಗ್ರತೆಗೆ ಮುಂದಾದ ಕೇಂದ್ರ ಸರ್ಕಾರ, ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಕಾಂಗ್ ಮತ್ತು ಥೈಲ್ಯಾಂಡ್ನಿಂದ ಅಂತರರಾಷ್ಟ್ರೀಯ ಆಗಮನಕ್ಕೆ ಆರ್ಟಿ-ಪಿಸಿಆರ್ ಕಡ್ಡಾಯವಾಗಲಿದೆ ಎಂದು ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಸೂಚನೆ ನೀಡಿದ್ದಾರೆ.

 

ಅದಲ್ಲದೆ ಈ ಮೇಲಿನ ದೇಶಗಳಿಂದ ಬಂದ ಯಾವುದೇ ಪ್ರಯಾಣಿಕರಿಗೆ ರೋಗಲಕ್ಷಣಗಳು ಕಂಡುಬಂದರು ಅಥವಾ ಕೋವಿಡ್ ಪಾಸಿಟಿವ್ ಎಂದು ಕಂಡುಬಂದರೆ ಯಾವುದೇ ಆಕ್ಷೇಪ ಇಲ್ಲದೆ ನಿಯಮನುಸಾರ ಅವರನ್ನು ಕ್ವಾರಂಟೈನ್ಗೆ ಒಳಪಡಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ .

Leave A Reply

Your email address will not be published.