ರಾಜ್ಯ ಸರಕಾರದಿಂದ ಮಹತ್ವದ ಆದೇಶ | ಇನ್ನು ಮುಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಕೆ-ಸೆಟ್ ಪರೀಕ್ಷೆ
ರಾಜ್ಯ ಸರ್ಕಾರದಿಂದ ಮಹತ್ವದ ಆದೇಶವೊಂದನ್ನು ನೀಡಿದೆ. ಹೌದು!! ಇನ್ನು ಮುಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಕೆ-ಸೆಟ್ ಪರೀಕ್ಷೆ ನಡೆಸುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (K-SET)ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಸುವಂತೆ ಸೂಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಆದೇಶದ ಕುರಿತಾಗಿ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡುವಳಿ ಹೊರಡಿಸಿದೆ. ವಿಶ್ವವಿದ್ಯಾಲಯ ಧನಸಹಾಯ ಆಯೋಗವು ದಿನಾಂಕ 19-12-2019 ರಂದು ನಡೆಸಿದ ಸಭೆಯಲ್ಲಿ ಮಾನ್ಯತೆ ಸಮಿತಿಯ ಶಿಫಾರಸ್ಸುಗಳ ಆಧಾರದ ಮೇಲೆ ಕರ್ನಾಟಕ ರಾಜ್ಯದ ಪರವಾಗಿ 03 K-SET ಪರೀಕ್ಷೆಗಳನ್ನು ನಡೆಸಲು ಮೈಸೂರು ವಿಶ್ವವಿದ್ಯಾಲಯಕ್ಕೆ ಮಾನ್ಯತೆಯನ್ನು ನೀಡಲು ತೀರ್ಮಾನ ಕೈಗೊಂಡಿದೆ. ಹೀಗಾಗಿ, ದಿನಾಂಕ 14-01-2020 ಮೂರು ವರ್ಷಗಳವರೆಗೆ 41 ವಿಷಯಗಳಲ್ಲಿ ಪ್ರತಿ ವರ್ಷ ಒಂದು ಸಲ ಕೆ-ಸೆಟ್ ಪರೀಕ್ಷೆಯನ್ನು ನಡೆಸಲು ಮಾನ್ಯತೆ ನೀಡಲಾಗಿದೆ.
2022ನೇ ಶೈಕ್ಷಣಿಕ ಸಾಲಿನಲ್ಲಿ ಆಯಾ ರಾಜ್ಯ ಸರ್ಕಾರಗಳು ಗುರುತಿಸಿದ ರಾಜ್ಯ ನೋಡೆಲ್ ಏಜನ್ಸಿಗಳಿಗೆ ಯುಜಿಸಿ ಯಿಂದ ಮಾನ್ಯತೆ ಅವಶ್ಯವಿರುವ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಯನ್ನು ನಡೆಸಲು ಮೈಸೂರು ವಿಶ್ವವಿದ್ಯಾಲಯಕ್ಕೆ ಅನುಮತಿ ಕೊಡಲಾಗಿದೆ.
ಮೈಸೂರು ವಿಶ್ವವಿದ್ಯಾಲಯದಲ್ಲಿ ಜುಲೈ-2021 ರಲ್ಲಿ ನಡೆದ ಕೆ-ಸೆಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಜೊತೆಗೆ ಇದಕ್ಕೆ ಇತರರು ಸಂಪೂರ್ಣ ಹೊಣೆಗಾರರೆಂದು ಆರೋಪ ಕೇಳಿ ಬಂದ ಹಿನ್ನೆಲೆ ಈ ಬಗ್ಗೆ ಪ್ರತ್ಯೇಕ ತನಿಖೆಗೆ ಸಮಿತಿ ರಚಿಸಿ ಆದೇಶಿಸಲಾಗಿದೆ.
ಯುಜಿಸಿಯಿಂದ ಮಾನ್ಯತೆ ಅಗತ್ಯವಿರುವ ರಾಜ್ಯ ಅರ್ಹತಾ ಪರೀಕ್ಷೆಯನ್ನು ನಡೆಸಲು ಯುಜಿಸಿಯ ಪರಿಕಲ್ಪನೆ ಜೊತೆಗೆ ವ್ಯಾಪ್ತಿಯಡಿ ರಾಜ್ಯ ಸರ್ಕಾರವು ಒಂದು ಏಜನ್ಸಿಯನ್ನು ಗುರುತಿಸಬಹುದಾಗಿದೆ.
ವಿಶ್ವವಿದ್ಯಾನಿಲಯವಾಗಿದ್ದು ಇಲ್ಲವೇ ಪ್ರತಿಷ್ಠಿತ ಪರೀಕ್ಷಾ ಸಂಸ್ಥೆ ಅಥವಾ ಉನ್ನತ ಶಿಕ್ಷಣಕ್ಕಾಗಿ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದ ಪ್ರತಿಷ್ಠಿತ ಸಂಸ್ಥೆಯಾಗಿರಬಹುದೆಂಬ ಅವಕಾಶದಡಿ 2022ನೇ ಸಾಲನ್ನು ಒಳಗೊಂಡಂತೆ ಮುಂದಿನ ಆದೇಶದವರೆಗೆ ಕೆ-ಸೆಟ್ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಸುವಂತೆ ಆದೇಶ ಹೊರಡಿಸಲಾಗಿದೆ.
ಒಂದು ವೇಳೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಅವ್ಯವಹಾರಗಳು ಕಂಡು ಬಂದರೆ, ಅರ್ಹತೆಯಿರುವ/ ಪ್ರತಿಭಾವಂತ ಸಾವಿರಾರು ಅಭ್ಯರ್ಥಿಗಳಿಗೆ ಅನ್ಯಾಯವಾಗುವ ಹಿನ್ನೆಲೆ ಜೊತೆಗೆ ಮುಂಬರುವ ಯುವ ಪೀಳಿಗೆಗೆ ಗುಣಮಟ್ಟದ ಶೈಕ್ಷಣಿಕ ವ್ಯವಸ್ಥೆ ನೀಡಲು ಸಾಧ್ಯವಾಗದೇ ಇರುವ ಸಾಧ್ಯತೆ ದಟ್ಟವಾಗಿದ್ದು , ಹೀಗಾಗಿ, ಪರೀಕ್ಷೆಯಲ್ಲಿ ಪಾರದರ್ಶಕತೆಯನ್ನು ತರುವ ಸಲುವಾಗಿ ಕೆ-ಸೆಟ್ ಪರೀಕ್ಷೆಯನ್ನು ಸ್ವತಂತ್ರ ಸಂಸ್ಥೆ ನಡೆಸುವುದು ಸೂಕ್ತವಾಗಿದೆ.
ಇದರ ಹೊರತು ಯಾವುದೇ ವಿಶ್ವವಿದ್ಯಾಲಯದಿಂದಲ್ಲ ಎಂಬುದನ್ನು ಕಂಡುಕೊಂಡ ಸರ್ಕಾರವು, ಮೈಸೂರು ವಿಶ್ವವಿದ್ಯಾಲಯವು 2021 ಜುಲೈ ನಲ್ಲಿ ನಡೆಸಿದ ಕೆ-ಸೆಟ್ ಪರೀಕ್ಷೆಯಲ್ಲಿ ನಡೆದ ಅವ್ಯವಹಾರಗಳ ಹಿನ್ನಲೆಯಲ್ಲಿ , 2022ನೇ ಸಾಲಿನ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಸಲು ನಿರ್ಧರಿಸಿ, ಅದರಂತೆ ಆದೇಶ ಹೊರಡಿಸಲಾಗಿದೆ.