ಶಾಲಾ ಪ್ರವಾಸಕ್ಕೆಂದು ಹೋದ ಬಸ್‌ ಪಲ್ಟಿ | ಮಕ್ಕಳು ಸೇರಿದಂತೆ ಹಲವರಿಗೆ ಗಾಯ

ಹಾಸನ : ವಿದ್ಯಾರ್ಥಿಗಳನ್ನು ಕರೆದುಕೊಂಡು ಶಾಲಾ ಪ್ರವಾಸಕ್ಕೆಂದು ಹೋದ ಬಸ್‌ ಪಲ್ಟಿಯಾಗಿದ್ದು, ವಿದ್ಯಾರ್ಥಿಗಳು ಸೇರಿದಂತೆ 7 ಜನ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಶಾಲಾ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿಯಾಗಿದ್ದು, ನಾಲ್ವರು ವಿದ್ಯಾರ್ಥಿಗಳು ಸೇರಿದೆಂತೆ 7 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಿಡಗೋಡು ಗ್ರಾಮದ ಬಳಿ ನಡೆದಿದೆ.

ಶಾಲಾ ಪ್ರವಾಸಕ್ಕೆಂದು 2ಬಸ್‌ಗಳಲ್ಲಿ 71 ವಿದ್ಯಾರ್ಥಿಗಳು ಸೇರಿದಂತೆ ಶಿಕ್ಷಕರು ಪ್ರವಾಸಕ್ಕೆಂದು ರಾಮನಗರ ಜಿಲ್ಲೆಯ ಕನಕಪುರದಿಂದ ತೆರಳಿದ್ದ ಸಂದರ್ಭದಲ್ಲಿ ಈ ಅಪಘಾತ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಿಡಗೋಡು ಗ್ರಾಮದ ಬಳಿ ಬಸ್‌ ಪಲ್ಟಿಯಾಗಿದ್ದು, ಈ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ ಮೂವರು ಶಿಕ್ಷಕರು ಗಾಯಗೊಂಡಿದ್ದಾರೆ. ಈ ಘಟನೆ ಬೇಲೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Leave A Reply

Your email address will not be published.