UIADI Recruitment : ಬೆಂಗಳೂರು UIDAIಯಲ್ಲಿ ನೇಮಕಾತಿ | ಹೆಚ್ಚಿನ ಮಾಹಿತಿ ಇಲ್ಲಿದೆ
ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (UIADI) ವಿವಿಧ ಖಾಲಿ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಆಧರಿಸಿ ಅರ್ಜಿ ಸಲ್ಲಿಸಬಹುದು. ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ. ಅರ್ಜಿಗಳನ್ನು ಕಳುಹಿಸಲು ಕೊನೆಯ ದಿನಾಂಕ: 08.01.2023. ಹಾಗಾಗಿ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ
ಹುದ್ದೆಗಳ ವಿವರ : ನಿರ್ದೇಶಕರು – 1
ಉಪ ನಿರ್ದೇಶಕರು – 2
ತಾಂತ್ರಿಕ ಸಹಾಯಕರು – 8
ತಾಂತ್ರಿಕ ಅಧಿಕಾರಿ – 3
ಶೈಕ್ಷಣಿಕ ಅರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಜಿನಿಯರಿಂಗ್ ನಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ತೇರ್ಗಡೆಯಾಗಿರಬೇಕು.
ವಯೋಮಿತಿ : ಆಧಾರ್ ಆಯೋಗದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಗರಿಷ್ಠ 56 ವರ್ಷಕ್ಕಿಂತ ಹೆಚ್ಚಿರಬಾರದು.
ಆಯ್ಕೆಯ ವಿಧಾನ : ಅಭ್ಯರ್ಥಿಗಳನ್ನು ‘ಡೆಪ್ಯುಟೇಶನ್ ಬೇಸಿಸ್’ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆಯ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ.
ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ಸೈಟ್‌ಗೆ ಭೇಟಿ ನೀಡಿ ಅರ್ಜಿ ಡೌನ್ಲೋಡ್ ಮಾಡಿಕೊಂಡು ಅರ್ಜಿ ಸಲ್ಲಿಸಬೇಕು. ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅಂಚೆ ಮೂಲಕ ಈ ಕೆಳಗಿನ ವಿಳಾಸಕ್ಕೆ ಕಳಿಸಬೇಕು.
ಅರ್ಜಿಗಳನ್ನು ಕಳುಹಿಸಬೇಕಾದ ವಿಳಾಸ :
ನಿರ್ದೇಶಕ (HR),
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI),
ಆಧಾರ್ ಕಾಂಪ್ಲೆಕ್ಸ್,
NTI ಲೇಔಟ್, ಟಾಟಾ ನಗರ,
ತಂತ್ರಜ್ಞಾನ ಕೇಂದ್ರ, ಕೊಡಿಗೇಹಳ್ಳಿ,
ಬೆಂಗಳೂರು – 560092
ಅಧಿಸೂಚನೆಯ ಸಂಪೂರ್ಣ ವಿವರಗಳನ್ನು ತಿಳಿಯಲು, ಲಿಂಕ್ https://uidai.gov.in/en/about-uidai/work-with-uidai/current-vacancies.html ಕ್ಲಿಕ್ ಮಾಡಿ.