BIGG NEWS : 5,8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಪರೀಕ್ಷೆ – ಶಿಕ್ಷಣ ಸಚಿವರು ನೀಡಿದ್ದಾರೆ ಗುಡ್‌ ನ್ಯೂಸ್‌

ಇತ್ತೀಚೆಗಷ್ಟೇ ರಾಜ್ಯ ಸರಕಾರ, ರಾಜ್ಯದಲ್ಲಿ 5ನೇ ಹಾಗೂ 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆಯನ್ನು ( Public Exam ) ನಡೆಸಲಾಗುತ್ತಿದೆ ಎಂಬ ಆದೇಶ ನೀಡಿತ್ತು. ಪಬ್ಲಿಕ್‌ ಪರೀಕ್ಷೆ ಎಂದ ಕೂಡಲೇ ಐದಯ ಹಾಗೂ ಎಂಟನೇ ಕ್ಲಾಸ್‌ನ ಮಕ್ಕಳಿಗೆ ಈ ಪರೀಕ್ಷೆಯಲ್ಲಿ ಫೇಲ್ ಆಗುವಂತ ಭಯ ಅನೇಕ ವಿದ್ಯಾರ್ಥಿಗಳಲ್ಲಿ ಕಾಡುತ್ತಿತ್ತು. ಆದ್ರೆ ಯಾವುದೇ ವಿದ್ಯಾರ್ಥಿಗಳನ್ನು ಫೇಲ್ ಮಾಡೋದಿಲ್ಲ ಎಂಬುದಾಗಿ ಶಿಕ್ಷಣ ಸಚಿವರು ಹೇಳಿದ್ದಾರೆ. ಇದೊಂದು ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ ಎಂದೇ ಹೇಳಬಹುದು.

 

5ನೇ ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಮೌಲ್ಯ ಮಾಪನ ಉದ್ದೇಶದಿಂದ ಪಬ್ಲಿಕ್ ಪರೀಕ್ಷೆಯಲ್ಲಿ ಮಾಡಲಾಗುತ್ತಿದೆ. ಈ ಪರೀಕ್ಷೆಯಲ್ಲಿ ಯಾರನ್ನೂ ಅನುತ್ತೀರ್ಣ ಮಾಡುವುದಿಲ್ಲ ಎಂಬುದಾಗಿ ತುಮಕೂರಿನಲ್ಲಿ ರುಪ್ಸಾ ಸಂಘಟನೆಯಿಂದ ಹಮ್ಮಿಕೊಂಡಿದ್ದಂತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದಂತ ಶಾಲಾ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ( Minister BC Nagesh ) ಹೇಳಿದ್ದಾರೆ.

ರಾಜ್ಯದಲ್ಲಿ ಮುಂಬರುವಂತ ದಿನಗಳಲ್ಲಿ ಎನ್‌ಇಪಿ ( NEP) ಆಧಾರದ ಮೇಲೆ ತರಗತಿಗಳನ್ನು ಪ್ರಾರಂಭಿಸಲಾಗುತ್ತದೆ. ಮೊದಲ ಹಂತದಲ್ಲಿ 500 ರಿಂದ 600 ಶಾಲೆಗಳಲ್ಲಿ ಎನ್ಇಪಿ ಶೈಕ್ಷಣಿಕ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತದೆ. ಈ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲಾಗುತ್ತದೆ ಎಂದರು.

Leave A Reply

Your email address will not be published.