ಭೂ ರಹಿತ ಕೃಷಿ ಕಾರ್ಮಿಕ ಮಕ್ಕಳೇ ಗಮನಿಸಿ | ವಿದ್ಯಾನಿಧಿ ಯೋಜನೆ ವಿಸ್ತರಣೆ
ಭೂ ರಹಿತ ಕಾರ್ಮಿಕರ ಮಕ್ಕಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ಒಂದನ್ನು ನೀಡಿದೆ. ಪ್ರಸ್ತುತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿದ್ಯಾನಿಧಿ ಯೋಜನೆ ವಿಸ್ತರಿಸಲು ಸರ್ಕಾರ ಯೋಜನೆ ರೂಪಿಸಿಕೊಂಡಿದೆ.
ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಕೃಷಿ ಕಾರ್ಮಿಕರ ಮಕ್ಕಳಿಗೂ ವಿದ್ಯಾನಿಧಿ ಯೋಜನೆ ವಿಸ್ತರಿಸಲಾಗುವುದು ಎಂದು ಘೋಷಣೆ ಮಾಡಿದ್ದರು. ಈ ಕುರಿತು ಕೃಷಿ ಇಲಾಖೆ ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ವಿಸ್ತರಿಸಲು ಕ್ರಮ ಕೈಗೊಂಡಿದೆ.
ವಿದ್ಯಾನಿಧಿ ಯೋಜನೆ ಅನ್ವಯ ಪ್ರೌಢಶಾಲೆಯ ಹೆಣ್ಣು ಮಕ್ಕಳಿಗೆ ಪಿಯುಸಿ, ಐಟಿಐ, ಪದವಿ ಸೇರಿದಂತೆ ಉನ್ನತ ಪದವಿಯಲ್ಲಿ ಓದುತ್ತಿರುವ ಕೃಷಿ ಭೂಮಿ ಹೊಂದಿರದ ಕೃಷಿ ಕಾರ್ಮಿಕರ ಮಕ್ಕಳಿಗೆ 2000 ರೂ.ನಿಂದ 11,000 ರೂ.ವರೆಗೆ ನೆರವು ನೀಡಲು ನಿರ್ಧರಿಸಲಾಗಿದೆ.
ಸದ್ಯ ಜನವರಿಯಲ್ಲಿ ಮೊದಲ ಹಂತದಲ್ಲಿ 2 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೇರವಾಗಿ ಖಾತೆಗೆ ಜಮಾ ಮಾಡಲು ಕೃಷಿ ಇಲಾಖೆ ಕ್ರಮ ಕೈಗೊಂಡಿದೆ ಎಂದು ಮಾಹಿತಿ ನೀಡಲಾಗಿದೆ.