ಮಂಗಳೂರು : ಡಿ.26 ರಿಂದ ಮೂರು ದಿನಗಳ ಕಾಲ ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ
ಪ್ರಸ್ತುತ ಮೂಡುಬಿದಿರೆ ಆಳ್ವಾಸ್ ವಿದ್ಯಾಗಿರಿ ಆವರಣದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ಈ ಕಾರ್ಯಕ್ರಮವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದ್ದಾರೆ. ಸದ್ಯ ಈಗಾಗಲೇ ಮೂಡುಬಿದಿರೆಯಲ್ಲಿ ಜಾಂಬೂರಿ ಕಾರ್ಯಕ್ರಮ ಅದ್ದೂರಿಯಾಗಿ ನಡೆಯುತ್ತಿದೆ. ಪ್ರಸ್ತುತ ರಾಜ್ಯ, ಹೊರ ರಾಜ್ಯಗಳಿಂದ ಸ್ಕೌಟ್ಸ್ ಆ್ಯಂಡ್ ಗೈಡ್ಸ್‌ನ 50,000ಕ್ಕಿಂತಲೂ ಹೆಚ್ಚಿನ ವಿದ್ಯಾರ್ಥಿಗಳು ಜಾಂಬೂರಿಗೆ ಆಗಮಿಸಿದ್ದಾರೆ. ಅಲ್ಲದೇ ಅವರ ಜೊತೆಗೆ ಪೋಷಕರು, ಶಿಕ್ಷಕರು ಸಹ ಆಗಮಿಸಿದ್ದು ಇವರೆಲ್ಲರೂ ಜಾಂಬೂರಿ ಮುಗಿಸಿ ತಮ್ಮ ಊರುಗಳಿಗೆ ಹಿಂದಿರುಗುವ ವೇಳೆ ಡಿಸೆಂಬರ್ 26ರಿಂದ 28ರವರೆಗೆ ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ ಎನ್ನುವ ಮಾಹಿತಿ ತಿಳಿದು ಬಂದಿದೆ.
ಸದ್ಯ ಜಾಂಬೂರಿ ಕಾರ್ಯಕ್ರಮ ಮುಗಿಸಿ ತಮ್ಮ ಊರುಗಳಿಗೆ ಹಿಂತಿರುಗುವಾಗ ಮೂಡಬಿದಿರೆಯಿಂದ ರಾಜ್ಯದ ವಿವಿಧ ಸ್ಥಳಗಳಿಗೆ, ರೈಲು ನಿಲ್ದಾಣಗಳಿಗೆ ಹೆಚ್ಚುವರಿ ಸಾರಿಗೆಗಳ ವ್ಯವಸ್ಥೆ ಮಾಡಿ ವಾಹನಗಳ ವ್ಯವಸ್ಥೆ ಇರಬೇಕಾಗುತ್ತದೆ. ಈ ಕುರಿತಾಗಿ ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು ವಲಯಗಳಲ್ಲಿ ಚಾಲನೆಯಲ್ಲಿರುವ ಬಸ್‌ಗಳ ಕೊರತೆ ಉಂಟಾಗಲಿದೆ.
ಸದ್ಯ ಈ ನಿಮಿತ್ತ ಸಾರ್ವಜನಿಕರು ಸಹಕರಿಸುವಂತೆ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಈಗಾಗಲೇ ಮೂಡುಬಿದಿರೆ ಆಳ್ವಾಸ್ ವಿದ್ಯಾಗಿರಿ ಆವರಣದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಕಾರ್ಯಕ್ರಮವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದ್ದರು.ನಂತರ ಕಾರ್ಯಕ್ರಮ ಕುರಿತು ‘ಮಹಾಮಾರಿ ಕೊರೊನಾ ಸಂದರ್ಭದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಯೋಧರಾಗಿ ಕೆಲಸ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ದೇಶವು ಅಭಿವೃದ್ಧಿ ಹಾದಿಯಲ್ಲಿ ಸಾಗುತ್ತಿದೆ. ಸ್ವಚ್ಚತಾ ಅಭಿಯಾನ ಬಹುದೊಡ್ಡ ಯೋಗಧಾನ ಆಗಿದೆ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದರು.