ಸುರತ್ಕಲ್​ ಜಲೀಲ್ ಹತ್ಯೆ ಪ್ರಕರಣ ಬಗ್ಗೆ ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ದೇನು ಗೊತ್ತಾ?

ಸುರತ್ಕಲ್​ ಜಲೀಲ್ ಹತ್ಯೆ ಪ್ರಕರಣ “ಕರಾವಳಿಯಲ್ಲಿ ಪೊಲೀಸರು ಸರಿಯಾದ ಕಾನೂನು ಕ್ರಮ ಕೈಗೊಂಡಿಲ್ಲ” ಎಂದು ಮಾಜಿ ಸಚಿವ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ

 

ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮಾಜಿ ಸಚಿವ ಯು.ಟಿ.ಖಾದರ್ ಅವರು, “ಮಂಗಳೂರು ಹೊರವಲಯದ ಸುರತ್ಕಲ್​​ನ ಕಾಟಿಪಳ್ಳ ನಾಲ್ಕನೇ ಬ್ಲಾಕ್​ನಲ್ಲಿ ನಿನ್ನೆ(ಡಿ.24) ಅಬ್ದುಲ್​ ಜಲೀಲ್(45) ಎಂಬುವವರಿಗೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿರುವ ಘಟನೆ ತಿಳಿದು ಬಂದಿದೆ. ಈ ಬಗ್ಗೆ ಪೊಲೀಸರು ನಿಜವಾದ ಆರೋಪಿಗಳನ್ನು ಸೆರೆ ಹಿಡಿಯಬೇಕು. ಕಳೆದ ಎರಡು ತಿಂಗಳಿಂದ ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್​ಗಿರಿ ದಾಳಿಗಳು ಹೆಚ್ಚಾಗಿ ನಡೆಯುತ್ತಲೇ ಇದೆ. ಈ ಬಗ್ಗೆ ಪೊಲೀಸರು ಸರಿಯಾದ ಕ್ರಮ ಕೈಗೊಂಡಿಲ್ಲ. ಈ ಕಾರಣಕ್ಕಾಗಿ ಇಂತಹ ಕೊಲೆ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ. ಈಗಾಗಲೇ ಗೃಹ ಸಚಿವರಲ್ಲಿ ಈ ಬಗ್ಗೆ ಮಾತನಾಡಿದ್ದೇನೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ

Leave A Reply

Your email address will not be published.