ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರ ಕೊಲೆ | ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ

ಕ್ಷುಲ್ಲಕ ಕಾರಣಕ್ಕಾಗಿ ಇಬ್ಬರ ಯುವಕರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಹೌದು, ಈ ಘಟನೆ ಬೆಳಗಾವಿ ತಾಲೂಕಿನ ಶಿಂದೋಳ್ಳಿ ಗ್ರಾಮದಲ್ಲಿ ನಡೆದಿದೆ. ಇಬ್ಬರು ಯುವಕರ ಕಗ್ಗೊಲೆಗೆ ನಿಜಕ್ಕೂ ನಗರ ಬೆಚ್ಚಿ ಬಿದ್ದಿದೆ.

 

ಒಬ್ಬ ಮರಾಠ ಹಾಗೂ ಮತ್ತೊಬ್ಬ ಕುರಬ ಸಮುದಾಯದ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ (Belagavi Double Murder) ಮಾಡಲಾಗಿದ್ದು, ಯುವಕರನ್ನು ದಾಖಲಿಸಿದ್ದ ಬೆಳಗಾವಿ ಜಿಲ್ಲಾಸ್ಪತ್ರೆ ಎದುರು ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಶಿಂದೊಳ್ಳಿ ಗ್ರಾಮದ ಸೆಂಟ್ರಿಂಗ್ ಕೆಲಸಗಾರ ಬಸವರಾಜ್ ಬೆಳಗಾಂವರ್ (22), ಖಾಸಗಿ ಕಂಪನಿ ಉದ್ಯೋಗಿ ಗಿರೀಶ್ ನಾಗಣ್ಣವರ ಮೃತ ಯುವಕರು.

ಈ ಘಟನೆ ಭಾನುವಾರ ರಾತ್ರಿ ನಡೆದಿದೆ. ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾಡಿ, ಎಸಿಪಿ ನಾರಾಯಣ ಭರಮಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಲ್ಲೆ ನಡೆದ ಬಳಿಕ ಯುವಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಯುವಕರು ಮೃತಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆ ಮುಂದೆ ಸಂಬಂಧಿಕರು, ಗ್ರಾಮಸ್ಥರು ಜಮಾಯಿಸಿದ್ದರಿಂದ ಉದ್ವಿಗ್ನ ಸ್ಥಿತಿ ಉಂಟಾಯಿತು. ಹೀಗಾಗಿ ಗ್ರಾಮ ಹಾಗೂ ಜಿಲ್ಲಾಸ್ಪತ್ರೆ ಬಳಿ ಮುನ್ನೆಚ್ಚರಿಕೆ ಕ್ರಮವಾಗಿ ಭದ್ರತೆಗೆ ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜನೆ ಮಾಡಲಾಗಿದೆ.

Leave A Reply

Your email address will not be published.