ಬೆಳ್ತಂಗಡಿ | ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ; ಸವಾರ ಮೃತ್ಯು..!!

Share the Article

ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ತರಕಾರಿ ಸಾಗಾಟದ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ಡಿ.25ರಂದು ರಾತ್ರಿ ರಾಷ್ಟ್ರೀಯ ಹೆದ್ದಾರಿ ಲಾಯಿಲ ಸಮೀಪದ ಕಾಶಿಬೆಟ್ಟು ಎಂಬಲ್ಲಿ ನಡೆದಿದೆ.

ಉಜಿರೆಯಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ, ಚಿಕ್ಕಮಗಳೂರು ಕಡೆಗೆ ಸಾಗಿಸುತ್ತಿದ್ದ ತರಕಾರಿ ಸಾಗಾಟದ ಖಾಲಿ ವಾಹನ ಢಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ಸವಾರ ಗಂಭೀರ ಗಾಯಗೊಂಡಿದ್ದು ತತ್‌ಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತರು ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಬೀಟಿಗೆ ನಿವಾಸಿ ದಿ.ಅಣ್ಣಿ ಪೂಜಾರಿ ಎಂಬುವವರ ಪುತ್ರ ಪುರುಷೋತ್ತಮ ಪೂಜಾರಿ(21).

ಘಟನೆ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply