ಉಜಿರೆ:ತೀವ್ರ ಅನಾರೋಗ್ಯ!! ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಮೃತ್ಯು!!
ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆಯೊಂದು ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ.
ಮೃತ ಯುವತಿಯನ್ನು ಉಜಿರೆ ಗ್ರಾಮದ ಪೆರ್ಲ ದರ್ಖಾಸು ನಿವಾಸಿ ಉಮಾ ನಾಯ್ಕ್ ಎಂದು ಗುರುತಿಸಲಾಗಿದೆ. ಈಕೆಗೆ ಕಳೆದ ಕೆಲ ದಿನಗಳಿಂದ ಅನಾರೋಗ್ಯ ಕಾಡಿದ್ದು, ಈ ಹಿನ್ನೆಲೆಯಲ್ಲಿ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.