Breaking Mangalore । ಮತ್ತೆ ವಕ್ಕರಿಸಿದ ಕೋವಿಡ್ ನಿಯಮಾವಳಿಗಳು ! Guidelines ಜಾರಿ ಮಾಡಿ ಜಿಲ್ಲಾಧಿಕಾರಿ ಆದೇಶ !!!

ಮಂಗಳೂರು : ಕೊರೋನಾ ಮಹಾಮಾರಿಯ ಅಟ್ಟಹಾಸ ಕೊಂಚ ತಗ್ಗಿದೆ ಎಂಬ ನಿಟ್ಟುಸಿರು ಬಿಡುತ್ತಿದ್ದ ಜನತೆಗೆ ಸಂಕಷ್ಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ. ಚೀನಾ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಕೋವಿಡ್‌ ವ್ಯಾಪಕವಾಗಿ ಹರಡುತ್ತಿರುವ ಕಾರಣ ಭಾರತದಲ್ಲಿ ಕೂಡ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಅಣಿಯಾಗಿದೆ. ಇದಕ್ಕೆ ಪೂರಕವಾಗಿ ದಕ್ಷಿಣ ಜಿಲ್ಲೆಯಲ್ಲೂ ಕೋವಿಡ್‌ ನಿಯಮಾವಳಿ ಜಾರಿಗೊಳಿಸಲಾಗಿದೆ.

 

ಮತ್ತೊಮ್ಮೆ ಕೊರೋನಾ ತಾಂಡವವಾಡುವ ಲಕ್ಷಣಗಳು ಕಂಡು ಬರುತ್ತಿರುವ ಹಿನ್ನೆಲೆ ಸರ್ಕಾರ ಮುಂಜಾಗ್ರತ ಕ್ರಮ ಕೈಗೊಳ್ಳಲು ಮುಂದಾಗಿದೆ. ಇದೀಗ, ದಕ್ಷಿಣ ಕನ್ನಡದಲ್ಲಿಯೂ ಕೂಡ ಜಿಲ್ಲಾಧಿಕಾರಿ ಕೋವಿಡ್ ನಿಯಮಾವಳಿ ಜಾರಿಗೊಳಿಸಿದ್ದಾರೆ. ಈ ಕುರಿತ ನಿಬಂಧನೆಗಳು ಹೀಗಿವೆ.

ಪ್ರಸ್ತುತ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಪರಿಸ್ಥಿತಿಯು ನಿಯಂತ್ರಣದಲ್ಲಿದ್ದರು ಕೂಡ ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಮುಂಬರುವ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಎಚ್ಚರ ವಹಿಸುವುದು ಅವಶ್ಯಕವಾಗಿದೆ.

ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ, ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು, ಜಿಲ್ಲೆಯ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ಪೂರ್ವಭಾವಿಯಾಗಿ ಸಾರ್ವಜನಿಕರು ಈ ಕೆಳಗಿನಂತೆ ಕೋವಿಡ್-19 ಗೆ ಸಂಬಂಧಪಟ್ಟ ಕ್ರಮಗಳನ್ನು ಪಾಲಿಸುವುದು ಅತ್ಯವಶ್ಯಕವಾಗಿದೆ.

ಮುಚ್ಚಿದ ಸಂರಕ್ಷಣೆಗಳಾದ (closed spaces) ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್‌ಗಳು, ಶಾಪಿಂಗ್ ಮಾಲ್, ಕಛೇರಿಗಳು ಸೇರಿದಂತೆ ಬಸ್, ರೈಲು, ಮೆಟ್ರೋ, ವಿಮಾನಯಾನ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿರುತ್ತದೆ. ಅದರಲ್ಲಿಯು ವಿಶೇಷವಾಗಿ ವೃದ್ಧರು ಮತ್ತು ಆರೋಗ್ಯ ಸಮಸ್ಯೆಗಳಿಂದ ಆರ್ಹರೆಲ್ಲರೂ ಕೋವಿಡ್-19 ಲಸಿಕೆಯ ಪ್ರಿಕಾಶನರಿ ಡೋಸ್ ಅನ್ನು ಶೀಘ್ರವಾಗಿ ಪಡೆದುಕೊಳ್ಳುವುದು ಸೂಕ್ತ.

ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು, ಒಳಾಂಗಣದಲ್ಲಿದ್ದಾಗಲೂ ಮಾಸ್ಕ್‌ ಧರಿಸುವುದು ಉತ್ತಮವಾಗಿದ್ದು, ಉಸಿರಾಟದ ಸಮಸ್ಯೆ ಹಾಗೂ ಕೋವಿಡ್-19 ಸೋಂಕಿನ ಲಕ್ಷಣಗಳನ್ನು ಹೊಂದಿರುವವರು, ಸ್ವಯಂ ಪ್ರತ್ಯೇಕವಾಗಿ, ಪರೀಕ್ಷೆ ಮಾಡಿಸಿಕೊಳ್ಳುವುದು ಹಾಗೂ ಫಲಿತಾಂಶದ ಆಧಾರದ ಮೇಲೆ ಚಾಲ್ತಿಯಲ್ಲಿರುವ ಪ್ರಮಾಣೀಕೃತ ಶಿಷ್ಟಾಚಾರದ ಅನ್ವಯ ಕ್ರಮಗಳನ್ನು ಪಾಲಿಸುವುದು.

ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಮಧ್ಯಮ ಪ್ರಮಾಣದ ವ್ಯಾಯಾಮ, ಉಸಿರಾಟದ ವ್ಯಾಯಾಮಗಳು ಹಾಗೂ ಧ್ಯಾನವನ್ನು ಮಾಡಬಹುದಾಗಿದೆ. ಮುಂದುವರೆದು, ಸಭೆ ಹಾಗೂ ಸಮಾರಂಭಗಳ ಆಯೋಜಕರು ಈ ಕೆಳಗಿನ ಮಾರ್ಗಸೂಚಿಯನ್ನು ಪಾಲಿಸುವಂತೆ ನಿರೀಕ್ಷಿಸಲಾಗಿದೆ.

ಸಾರ್ವಜನಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆ ದಷ್ಟೂ ಹೊರಾಂಗಣದಲ್ಲಿ ಮತ್ತು ಒಳ್ಳೆಯ ಗಾಳಿ- ಬೆಳಕಿನ ವ್ಯವಸ್ಥೆ ಇರುವ ಸ್ಥಳಗಳಲ್ಲಿ ಹಗಲು ಹೊತ್ತಿನಲ್ಲಿ ನಡೆಸುವುದರಿಂದ ಆರೋಗ್ಯದ ಮೇಲೆ ಮುಂಜಾಗ್ರತಾ ಕ್ರಮವಾಗಿ ಹಾಗೂ ಸಂಜೆಯ ಶೀತ ಗಾಳಿಯ ಪರಿಣಾಮವನ್ನು ತಡೆಗಟ್ಟಬಹುದು.

ಕಡ್ಡಾಯವಾಗಿ ದೈಹಿಕ ಅಂತರ ಮತ್ತು ಮಾಸ್ಕ್ ಧರಿಸುವುದು. ಹೆಚ್ಚಿನ ಜನರು ಗುಂಪುಗೂಡುವಿಕೆಯನ್ನು, ವಿಶೇಷವಾಗಿ ಒಳಾಂಗಣಗಳಲ್ಲಿ ಕಟ್ಟುನಿಟ್ಟಾಗಿ ತಡೆಗಟ್ಟಬೇಕು.

ಕೈಗಾರಿಕಾ ಸಂಸ್ಥೆಗಳಲ್ಲಿ, ಗಾರ್ಮೆಂಟ್ಸ್ ಇತರೆ ಕಾರ್ಖಾನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದ್ದು, ದೈಹಿಕ ಅಂತರವನ್ನು ಪಾಲಿಸುವುದು ಅಗತ್ಯವಾಗಿರುತ್ತದೆ.

ಕೋವಿಡ್-19 ಮುನ್ನೆಚ್ಚರಿಕಾ ಹಾಗೂ ನಿಯಂತ್ರಣದಲ್ಲಿ ಈವರೆಗೆ ಸಾಧಿಸಲಾಗಿರುವ ಉತ್ತಮ ಅಂಶಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮೇಲೆ ತಿಳಿಸಿರುವ ಸಲಹೆಗಳನ್ನು ಪಾಲಿಸಲು ಸಾರ್ವಜನಿಕರು ಹಾಗೂ ಸಭೆ/ಸಮಾರಂಭಗಳ ಅಯೋಜಕರಿಗೆ ಈ ಮಾಹಿತಿಯನ್ನು ನಿಖರವಾಗಿ ಸ್ಪಷ್ಟಪಡಿಸುವುದು ಹಾಗೂ ಪಾಲನೆಯನ್ನು ಖಚಿತಪಡಿಸಿಕೊಳ್ಳುವಂತೆ ಜಿಲ್ಲೆಯ ಆರೋಗ್ಯ ಪ್ರಾಧಿಕಾರಗಳಿಗೆ ಈ ಮೂಲಕ ಸೂಚಿಸಿದೆ. ಇದರ ಜೊತೆಗೆ ಮುಂಬರುವ ದಿನಗಳಲ್ಲಿ ಕೋವಿಡ್-19 ಗೆ ಸಂಬಂಧಿಸಿದಂತ ಸರ್ಕಾರ ಹೊರಡಿಸುವ ಎಲ್ಲಾ ಅದೇಶಗಳನ್ನು ಕಡ್ಡಾಯವಾಗಿ ಪಾಲಿಸುವುದು ಅವಶ್ಯಕ

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ

Leave A Reply

Your email address will not be published.