Rain Alert : ವರುಣಾರ್ಭಟ ಇನ್ನು ನಾಲ್ಕು ದಿನ ಮುಂದುವರಿಕೆ – ಹವಾಮಾನ ಇಲಾಖೆ ಮುನ್ಸೂಚನೆ
ದಿನ ಮುಂಜಾನೆಯ ಚಳಿಗೆ ಬೆಚ್ಚಗೆ ಮಲಗುವವರು ಒಮ್ಮೆ ಚಳಿಗಾಲ ಹೋದರೆ ಸಾಕು ಎಂದುಕೊಳ್ಳೋದು ಸಾಮಾನ್ಯ. ಇತ್ತೀಚಿನ ದಿನಗಳಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ಕೆಲವೆಡೆ ವರುಣ ದರ್ಶನ ಕೊಟ್ಟಿದ್ದು ಇದೆ. ಒಮ್ಮೆ ಬಿಸಿಲನ್ನು ಕಂಡರೆ ಸಾಕು ಎಂದು ಎಷ್ಟೋ ಜನ ಅಂದುಕೊಂಡಿದ್ದು ಸುಳ್ಳಲ್ಲ. ಇದೀಗ ಮತ್ತೊಮ್ಮೆ ಮಳೆರಾಯ ಪ್ರತ್ಯಕ್ಷ ಆಗಲಿದ್ದಾನೆ ಎಂದು ಹವಾಮಾನ ಇಲಾಖೆಯ ಎಚ್ಚರಿಕೆಯ ಸಂದೇಶ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಹಾಗಾಗಿ, ಮುಂದಿನ 4 ದಿನ ಕರ್ನಾಟಕದ ಹಲವೆಡೆ ಮಳೆಮಳೆಯಾಗುವ ನಿರೀಕ್ಷೆಯಿದೆ. ಇದೇ ಡಿಸೆಂಬರ್ ತಿಂಗಳ ಆರಂಭದಲ್ಲಿ ಕರ್ನಾಟಕದಾದ್ಯಂತ ಒಂದು ವಾರ ಕಾಲ ಮೋಡಕವಿದ ವಾತಾವರಣದ ಜೊತೆಗೆ ತುಂತುರು ಮಳೆಯಾದ ಬಳಿಕ ಇದೀಗ, ಮತ್ತೆ ಮಳೆರಾಯ ಪ್ರತ್ಯಕ್ಷ ಆಗುವ ಸಾಧ್ಯತೆ ದಟ್ಟವಾಗಿದೆ. ಮಳೆ ಸಾಧ್ಯತೆ ಹಿನ್ನೆಲೆ ಸಿಲಿಕಾನ್ ಸಿಟಿಯಲ್ಲಿ ತಂಪು ತಂಪು ಕೂಲ್ ಕೂಲ್ ಹವಾಮಾನ ಮುಂದುವರೆಯಲಿದೆ ಎನ್ನಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಮುಂದಿನ 4 ದಿನ ಕರ್ನಾಟಕದ (Karnataka) ಹಲವೆಡೆ ಮಳೆ (Rain) ಸಾಧ್ಯತೆ ಇರುವ ಕುರಿತು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ(Bengaluru Weather)) (ಡಿಸೆಂಬರ್ 25) ಬೆಳಗ್ಗೆಯಿಂದಲೂ ಮೋಡಕವಿದ ವಾತಾವರಣವಿದ್ದು, ಇದು ಇಂದು ಕೂಡ ಮುಂದುವರಿಯುವ ಸಾಧ್ಯತೆ ದಟ್ಟವಾಗಿದೆ.
ಡಿಸೆಂಬರ್ 27 ಮತ್ತು 28 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ ಕೊಡಗು, ತುಮಕೂರು ಜಿಲ್ಲೆಗಳಲ್ಲಿ ವರುಣ ದರ್ಶನ ನೀಡಲಿದ್ದಾನೆ ಎನ್ನಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಮುಂದಿನ 4 ದಿನ ಅಂದರೆ ಡಿಸೆಂಬರ್ 29ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡಿನ ಹಲವು ಭಾಗಗಳಾದ ಬೆಂಗಳೂರು, ಮಂಡ್ಯ, ಮೈಸೂರು, ಕೋಲಾರ, ರಾಮನಗರದಲ್ಲಿ ಮಳೆಯ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗಿದೆ.