Air India Recruitment 2023: ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ
ಪೈಲೆಟ್ ಆಗುವ ಕನಸು ಕಾಣುವವರಿಗೆ ಒಂದು ಒಳ್ಳೆಯ ಅವಕಾಶ. ಏರ್ ಇಂಡಿಯಾ ನಿಮಗಾಗಿ ಈ ಆಫರ್ ನೀಡುತ್ತಿದೆ. ಈ ಅವಕಾಶವನ್ನು ಮಿಸ್ ಮಾಡದೇ ಉಪಯೋಗಿಸಿ. ಏರ್ ಇಂಡಿಯಾ ಲಿಮಿಟೆಡ್‌ನಲ್ಲಿ ಹಲವು ಹಿರಿಯ ಟ್ರೈನಿ ಪೈಲಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೆಳಗೆ ನೀಡಿರುವ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ 2023ರ ಜನವರಿ 1ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು, ಮುಂಬೈ ಹಾಗೂ ನವದೆಹಲಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ ಕಂಪನಿ ತಿಳಿಸಿದೆ.
ಹುದ್ದೆ : ಹಿರಿಯ ಟ್ರೈನಿ ಪೈಲೆಟ್
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ಡಿಸೆಂಬರ್ 12
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 01
ಲಿಖಿತ ಪರೀಕ್ಷೆ ನಡೆಯುವ ದಿನಾಂಕ: ಜನವರಿ 08
ಸಂದರ್ಶನ ಆರಂಭದ ದಿನಾಂಕ: ಜನವರಿ 2ನೇ ವಾರ
ವಿದ್ಯಾರ್ಹತೆ : ಏರ್ ಇಂಡಿಯಾ ಲಿಮಿಟೆಡ್ ಹೊರಡಿಸಿರುವ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥಾವ ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ ಪಾಸಾಗಿರಬೇಕು.
ವಯೋಮಿತಿ : ಏರ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ : ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ಇರುವುದಿಲ್ಲ.
ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಇಲ್ಲವೇ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.