ಮಿಕ್ಸಿ ಬ್ಲಾಸ್ಟ್‌ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ | ಈ ಕೃತ್ಯದ ಹಿಂದಿತ್ತು ಆಂಟಿ ಪ್ರೀತ್ಸೇ ಎಂಬ ಪ್ರೇಮ್‌ ಕಹಾನಿ ?

ಹಾಸನದ ಕೊರಿಯರ್ ಶಾಪ್‌ನಲ್ಲಿ ಮಿಕ್ಸಿ ಬ್ಲಾಸ್ಟ್ ಪ್ರಕರಣ ನಿಜಕ್ಕೂ ಜನರಿಗೆ ಮತ್ತೊಂದು ಆಘಾತ ಕೊಟ್ಟಿತ್ತು. ಮಂಗಳೂರಿನ ಕುಕ್ಕರ್‌ ಬ್ಲಾಸ್ಟ್‌ ಪ್ರಕರಣ ಮಾಸೋ ಮುನ್ನವೇ ಈ ಘಟನೆ ನಡೆದಿದ್ದು, ಜನ ನಿಜಕ್ಕೂ ಭಯಭೀತರಾಗಿದ್ದರು. ಈಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ವೊಂದು ಸಿಕ್ಕಿದೆ. ಇಲ್ಲೊಂದು ಸ್ಯಾಡ್‌ ಪ್ರೇಮ್‌ ಕಹಾನಿಯ ಕಥೆ ಇದೆ. ಹೌದು, ವಿಚ್ಛೇದಿತ ಮಹಿಳೆಯೊಬ್ಬರ ಹಿಂದೆ ಬಿದ್ದಿದ್ದ ಪಾಗಲ್ ಪ್ರೇಮಿ, ತನ್ನ ಪ್ರೀತಿಯನ್ನು ನಿರಾಕರಿಸಿದಳು ಎಂಬ ಕಾರಣಕ್ಕೆ ಆಕೆಯನ್ನು ಮುಗಿಸಲು ಸ್ಕೆಚ್ ಹಾಕಿ ಮಿಕ್ಸಿ ಬಾಂಬ್ ಕಳಿಸಿದ್ದನೇ ? ಎಂದು ವರದಿಯಾಗಿದೆ. ಇದು ತನಿಖೆಯಿಂದ ಬಯಲಾಗಬೇಕಿದೆ.

ನಗರದ ಕೆ.ಆರ್.ಪುರಂ ಸಬ್ ರಿಜಿಸ್ಟ್ರಾರ್ ಕಚೇರಿ ರಸ್ತೆಯಲ್ಲಿನ ಅಂಗಡಿಯಲ್ಲಿ ಸೋಮವಾರ (ಡಿ. 26) ಸಂಜೆ ಮಿಕ್ಸಿ ಸ್ಫೋಟಗೊಂಡು ಆತಂಕಕ್ಕೆ ಕಾರಣವಾಗಿತ್ತು. ಇದು ಉಗ್ರ ಕೃತ್ಯ ಇರಬಹುದೇ ಎಂಬ ಶಂಕೆಯೂ ವ್ಯಕ್ತವಾಗಿತ್ತು.

ಈ ಮಧ್ಯೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುದ್ದಿಗೋಷ್ಠಿ ನಡೆಸಿ ಉಗ್ರ ಕೃತ್ಯವಲ್ಲ, ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ನಡೆಸಿರುವ ಸ್ಪೋಟ ಎಂಬ ಮಾಹಿತಿ ನೀಡಿದ್ದರು. ಈಗ ಸಂಪೂರ್ಣ ತನಿಖೆ ನಡೆಸಿರುವ ಪೊಲೀಸರು ಇದು ಪಾಗಲ್ ಪ್ರೇಮಿಯೊಬ್ಬನ ಕೃತ್ಯ ಎಂದು ಹೇಳಿದ್ದಾರೆ.

Leave A Reply

Your email address will not be published.