ಇಯರ್ ಎಂಡ್ ಸೇಲ್ ಪ್ರಾರಂಭ | ಫ್ಲಿಪ್‌ಕಾರ್ಟ್‌ನಲ್ಲಿ ಈ ಐದು ಸ್ಮಾರ್ಟ್‌ಫೋನ್‌ಗಳ ಬೆಲೆಯ ಮೇಲೆ ಭರ್ಜರಿ ರಿಯಾಯಿತಿ
ಜನಪ್ರಿಯ ಇ-ಕಾಮರ್ಸ್ ಕಂಪನಿಯಾಗಿರುವ ಫ್ಲಿಪ್ಕಾರ್ಟ್ ಇದೀಗ ಇಯರ್ ಎಂಡ್ ಸೇಲ್ ಅನ್ನು ಆರಂಭಿಸಿದ್ದು, ಸ್ಮಾರ್ಟ್‌ಫೋನ್‌ಗಳ ಬೆಲೆಯ ಮೇಲೆ ಭರ್ಜರಿ ರಿಯಾಯಿತಿ ನೀಡುತ್ತಿದೆ. ಇದಂತು ಗ್ರಾಹಕರಿಗೆ ಉತ್ತಮ ಅವಕಾಶವಾಗಿದ್ದು, ಅತಿ ಕಡಿಮೆ ಬೆಲೆಗೆ ಈ ಐದು ಸ್ಮಾರ್ಟ್ ಫೋನ್ ಗಳನ್ನು ನಿಮ್ಮದಾಗಿಸಬಹುದು. ಇನ್ನೂ ರಿಯಾಯಿತಿ ದರದಲ್ಲಿ ಲಭ್ಯವಾಗುವ ಐದು ಸ್ಮಾರ್ಟ್ ಫೋನ್ ಯಾವುದು ಎಂಬುದನ್ನು ನೋಡೋಣ. ಹಾಗೇ ಬೆಲೆ ಎಷ್ಟು? ಫೀಚರ್ಸ್ ಹೇಗಿದೆ? ಎಂಬ ಮಾಹಿತಿ ಇಲ್ಲಿದೆ.
ಐಫೋನ್ 13 : ಐಫೋನ್ 13 5G ಸ್ಮಾರ್ಟ್ಫೋನ್ ಭರ್ಜರಿ ರಿಯಾಯಿತಿ ದರದಲ್ಲಿ ಲಭ್ಯವಾಗಲಿದೆ. 128GB ಸ್ಟೋರೇಜ್ ಹೊಂದಿರುವುದಾಗಿದೆ. ಈ ಸ್ಮಾರ್ಟ್ಫೋನ್ ಮೇಲೆ 7,991ರೂ. ರಿಯಾಯಿತಿ ನೀಡಿದ್ದು, ನೀವು ಇದನ್ನು ಕೇವಲ 61,999 ರೂ.ಗಳ ಆರಂಭಿಕ ಬೆಲೆಯಲ್ಲಿ ಖರೀದಿಸಬಹುದು. ಈ ಸ್ಮಾರ್ಟ್ ಫೋನ್ ನ ವೈಶಿಷ್ಟ್ಯತೆ ಹೀಗಿದೆ. ಐಫೋನ್ 13 ಸ್ಮಾರ್ಟ್ಫೋನ್ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸೆಲ್ ರೆಸಲ್ಯೂಶನ್ ಪಡೆದಿದೆ. ಈ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್ ಹೊಂದಿದೆ. ಹಾಗೂ 1200 ನಿಟ್ಸ್ ಬ್ರೈಟ್‌ನೆಸ್ ಇದ್ದು, ಇದು A15 ಬಯೋನಿಕ್ ಸೋಕ್ ಕ್ವಾಡ್ ಕೋರ್ ಪ್ರೊಸೆಸರ್ ನೀ ಜೊತೆಗೆ ಕಾರ್ಯನಿರ್ವಹಿಸಲಿದೆ.
ಸ್ಯಾಮ್ಸಂಗ್ ಗ್ಯಾಲಕ್ಸಿ ಎಫ್23 5G : ಈ ಸ್ಮಾರ್ಟ್ಫೋನ್ ನ ಮೂಲಬೆಲೆ 14,999ರೂ. ಆಗಿದ್ದು, ನೀವು ಇದನ್ನು ಆಫರ್ ಮೇಲೆ ಕಡಿಮೆ ಬೆಲೆಗೆ ಖರೀದಿಸಬಹುದು. ಅಲ್ಲದೆ, ಫೆಡರಲ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಕೆದಾರರು ಕೇವಲ 13,499ರೂ. ಬೆಲೆಯಲ್ಲಿ ಈ ಸ್ಮಾರ್ಟ್ ಫೋನ್ ಅನ್ನು ಖರೀದಿಸಬಹುದಾಗಿದೆ. ಇನ್ನೂ, ಇದರ ವೈಶಿಷ್ಟ್ಯತೆ, ಈ ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ + ಇನ್ಫಿನಿಟಿ ಡಿಸ್‌ಪ್ಲೇ ಹೊಂದಿದ್ದು, ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದೆ. ಹಾಗೂ ಆಂಡ್ರಾಯ್ಡ್ 12 ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸುತ್ತದೆ.
ಮೊಟೊ ಎಡ್ಜ್ 30 : ಈ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್‌ನಲ್ಲಿ ರಿಯಾಯಿತಿ ದರದಲ್ಲಿ ಕೇವಲ 22,999ರೂ. ಗೆ ಲಭ್ಯವಾಗಲಿದೆ. ಮೊಟೊ ಎಡ್ಜ್ 30 ಸ್ಮಾರ್ಟ್ ಫೋನ್ 6.7-ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಪೋಲ್ಡ್ 10-ಬಿಟ್ ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸುತ್ತದೆ. ಹಾಗೇ ಇದು 360Hz ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಅಲ್ಲದೆ ಈ ಸ್ಮಾರ್ಟ್ ಫೋನ್ ಸ್ನಾಪ್‌ಡ್ರಾಗನ್ 778G+ SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದ್ದು, ಆಂಡ್ರಾಯ್ಡ್ 12 OS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
ಸ್ಯಾಮ್ಸಂಗ್ ಗ್ಯಾಲಕ್ಸಿ ಎಸ್22 ಪ್ಲಸ್ : ಈ ಸ್ಮಾರ್ಟ್ ಫೋನ್ ಫ್ಲಿಪ್‌ಕಾರ್ಟ್‌ನಲ್ಲಿ 69,999 ರೂ.ಗಳ ಆರಂಭಿಕ ಬೆಲೆಯಲ್ಲಿ ಲಭ್ಯವಾಗಲಿದೆ. ನೀವು ಫೆಡರಲ್ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳ ಮೂಲಕ ಖರೀದಿ ಮಾಡುವುದಾದರೆ 10 % ಡಿಸ್ಕೌಂಟ್ ಲಭ್ಯವಾಗಲಿದೆ. ಇದು 6.6 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡೈನಾಮಿಕ್ ಅಮೋಲ್ಡ್ 2X ಡಿಸ್‌ಪ್ಲೇಯನ್ನು ಹೊಂದಿದ್ದು, ಆಕ್ಟಾ ಕೋರ್ 4nm SoC ಪ್ರೊಸೆಸರ್ ಬೆಂಬಲವನ್ನು ಪಡೆದಿದೆ. ಜೊತೆಗೆ ಆಂಡ್ರಾಯ್ಡ್ 12 ಓಎಸ್‌ನಲ್ಲಿ ಕಾರ್ಯನಿರ್ವಹಿಸಲಿದೆ.
ಗೂಗಲ್ ಪಿಕ್ಸೆಲ್ 6ಎ : ಗೂಗಲ್ ಪಿಕ್ಸೆಲ್ 6ಎ ಸ್ಮಾರ್ಟ್ ಫೋನ್ ಭರ್ಜರಿ ಆಫರ್ ನಿಂದಾಗಿ ನಿಮಗೆ ಕೇವಲ 29,999ರೂ. ಬೆಲೆಗೆ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ 6.1 ಇಂಚಿನ ಫುಲ್ ಹೆಚ್‌ಡಿ ಪ್ಲಸ್ OLED ಡಿಸ್‌ಪ್ಲೇ ಹೊಂದಿದ್ದು, ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಹಾಗೇ ಈ ಸ್ಮಾರ್ಟ್ಫೋನ್ ಆಕ್ಟಾ-ಕೋರ್ ಗೂಗಲ್ ಟೆನ್ಸರ್ SoC ಮತ್ತು ಟೈಟಾನ್ ಎಮ್2 ಸೆಕ್ಯುರಿಟಿ ಕೋ ಪ್ರೊಸೆಸರ್ ಅನ್ನು ಹೊಂದಿದೆ.