SC-ST ಮೀಸಲಾತಿ ಹೆಚ್ಚಳ ಮಸೂದೆ ಪಾಸ್
ಪರಿಶಿಷ್ಟ ಜಾತಿ (SC) ಮತ್ತು ಪಂಗಡ(ST) ಗಳಿಗೆ ಶೈಕ್ಷಣಿಕ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ ಹೆಚ್ಚಿಸುವ ಮಸೂದೆಯನ್ನು ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಯಿತು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿಧೇಯಕ-2022 ನ್ನು ಸರ್ಕಾರ ಮಂಡಿಸಿತ್ತು. ಈ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಿದ ಬಳಿಕ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ವಿಧೇಯಕ ಕುರಿತು ವಿವರಣೆ ನೀಡಿದರು. ಬಳಿಕ ಧ್ವನಿಮತದಿಂದ ಅಂಗೀಕರಿಸಲಾಗಿದೆ. ಈ ಮೂಲಕ ಎಸ್ ಸಿ ಗೆ ಪ್ರಸ್ತುತ ಶೇ. 15 ರಷ್ಟು ಇದ್ದ ಮೀಸಲು 17 ಕ್ಕೆ ಹಾಗೂ ಎಸ್ ಟಿ ಗೆ ಇದ್ದ 3 ರಷ್ಟು ಮೀಸಲು ಶೇ. 7 ಕ್ಕೆ ಹೆಚ್ಚಾಗಲಿದೆ.
ಇದೀಗ ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿ ಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಮಸೂದೆಯನ್ನು ಕೇಂದ್ರ ಸರಕಾರಕ್ಕೆ ಕಳುಹಿಸಿಕೊಟ್ಟು ಶೆಡ್ಯೂಲ್-9ಕ್ಕೆ ಸೇರಿಸುವ ನಿಟ್ಟಿನಲ್ಲಿ ಪ್ರಯತ್ನವನ್ನು ಮಾಡಲಿದೆ. ಸಂಸತ್ ನಲ್ಲಿ ಇದು ಅಂಗೀಕಾರವಾದ ಬಳಿಕ ಅಧಿಕೃತ ಕಾನೂನಾಗಿ ರಾಜ್ಯದಲ್ಲಿ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಅಂಗೀಕಾರವಾದ ಬಳಿಕ ತರ ವಿಧಾನ ಪರಿಷತ್ ನಲ್ಲಿ ವಿಧೇಯಕ ಮಂಡಿಸಲಾಗುತ್ತಿದೆ. ರಾಜ್ಯ ಸರ್ಕಾರ ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳವನ್ನು ಮಾಡಿದೆ ಎಂದು ನಾಗಮೋಹನ್ ದಾಸ್ ಅವರು ನೀಡಿದ್ದ ವರದಿಯಿಂದ ತಿಳಿದು ಬಂದಿದೆ.