ಅನ್ನದಾತರೇ ನಿಮಗೊಂದು ಕೇಂದ್ರದಿಂದ ಗುಡ್ ನ್ಯೂಸ್!!!
ಸರ್ಕಾರ ರೈತರಿಗೆ ನೆರವಾಗಲು ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಆರ್ಥಿಕ ಸಂಕಷ್ಟ ಎದುರಿಸಲು ಸಾಲ ಸೌಲಭ್ಯ, ಉಳಿತಾಯ ಯೋಜನೆ , ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅನೇಕ ಕ್ರಮಗಳನ್ನು ಕೈಗೊಂಡು ನೆರವಾಗುತ್ತಿದೆ.
ಕೇಂದ್ರ ಸರ್ಕಾರವು ಜಾರಿಗೆ ತಂದ ಹಲವಾರು ಯೋಜನೆಗಳಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಕೂಡ ಒಂದಾಗಿದ್ದು, ರೈತರಿಗೆ ಅತೀ ಕಡಿಮೆ ಬಡ್ಡಿದರದಲ್ಲಿ ಸಾಲ ಒದಗಿಸುವ ಉದ್ದೇಶದಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಕೂಡ ಆರಂಭಿಸಿದೆ. ಇದೀಗ, ಕೇಂದ್ರ ಸರ್ಕಾರ ರೈತರಿಗೆ ಸಿಹಿ ಸುದ್ದಿ ನೀಡಲು ಅಣಿಯಾಗಿದೆ.
ಕೃಷಿಯನ್ನು ನೆಚ್ಚಿಕೊಂಡಿರುವ ರೈತರಿಗೆ ಅತೀ ಕಡಿಮೆ ಬಡ್ಡಿದರದಲ್ಲಿ ಸಾಲ ಒದಗಿಸುವ ಉದ್ದೇಶದಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಪ್ರಾರಂಭಿಸಿದೆ. ಎಲ್ಲಾ ವಾಣಿಜ್ಯ ಬ್ಯಾಂಕ್‌ಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳು ಮತ್ತು ಸಹಕಾರಿ ಬ್ಯಾಂಕ್‌ಗಳು ಇಂತಹ ಕ್ರೆಡಿಟ್ ಕಾರ್ಡ್‌ಗಳನ್ನು ನೀಡುತ್ತವೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರೈತರ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ PSU ಬ್ಯಾಂಕ್ಗಳಿಗೆ ಮತ್ತೊಂದು ನಿರ್ದೇಶನವನ್ನು ನೀಡಿದ್ದು, ರೈತರ ಆದಾಯವನ್ನು ಹೆಚ್ಚಿಸುವ ಸಲುವಾಗಿ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಹೊಂದಿರುವವರಿಗೆ ಸುಲಭವಾದ ಸಾಲವನ್ನು ನೀಡುವಂತೆ ನಿರ್ಮಲ್ ಸೀತಾರಾಮನ್ ಸಾರ್ವಜನಿಕ ವಲಯದ ಬ್ಯಾಂಕ್ ಗಳಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಕೃಷಿಯನ್ನು ನಂಬಿ ಜೀವಿಸುವ ರೈತಾಪಿ ವರ್ಗದ ಆದಾಯ ಹೆಚ್ಚಿಸಲು ಕೇಂದ್ರ ಸರ್ಕಾರ ನವೀನ ಯೋಜನೆಗಳನ್ನು ಜಾರಿಗೆ ತಂದಿದೆ. ಕಿಸಾನ್ ಯೋಜನೆ ಅಡಿಯಲ್ಲಿ ರೈತರು ವರ್ಷಕ್ಕೆ 6 ಸಾವಿರ ಆರ್ಥಿಕ ನೆರವು ಪಡೆಯುತ್ತಿದ್ದಾರೆ. ಇದರ ಜೊತೆಗೆ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಬೆಳೆ ಯೋಜನೆಯ ಮೂಲಕ ರಸಗೊಬ್ಬರಗಳ ಮೇಲೆ ಸಹಾಯಧನವನ್ನು ಕೂಡ ನೀಡಿ ರೈತರಿಗೆ ನೆರವಾಗುತ್ತಿವೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವೆ ನಿರ್ಮಲ್ ಸೀತಾರಾಮನ್ ಅವರು ತಂತ್ರಜ್ಞಾನವನ್ನು ನವೀಕರಿಸುವಲ್ಲಿ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳಿಗೆ ಸಹಾಯ ಮಾಡುವ ಅವಶ್ಯಕತೆ ಇರುವ ಬಗ್ಗೆ ಪ್ರಸ್ತಾಪ ಮಾಡಿದ್ದು ಸಾರ್ವಜನಿಕ ವಲಯದ ಬ್ಯಾಂಕ್ಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಈ ಬಗ್ಗೆ ಮಾತನಾಡಿದ್ದಾರೆ.
ಪ್ರಸ್ತುತ ದೇಶದಲ್ಲಿ ಒಟ್ಟು 43 ಆರ್ ಅರ್ ಬಿ (Reigonal Rural Banks) ಗಳಿದ್ದು,ಈ RRB ಗಳಲ್ಲಿ ಮೂರನೇ ಒಂದು ಭಾಗ, ವಿಶೇಷವಾಗಿ ಈಶಾನ್ಯ ಮತ್ತು ಪೂರ್ವ ಪ್ರದೇಶಗಳಲ್ಲಿ, ನಷ್ಟ ಸಂಭವಿಸುತ್ತಿದೆ. ಇದರ ಜೊತೆಗೆ 9% ನಿಯಂತ್ರಕ ಬಂಡವಾಳದ ಅವಶ್ಯಕತೆಗಳನ್ನು ಪೂರೈಸಲು ನಿಧಿಯ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ.
ಈ ಬ್ಯಾಂಕ್ಗಳನ್ನು RRB ಕಾಯಿದೆ, 1976 ರ ಅಡಿಯಲ್ಲಿ ಸ್ಥಾಪಿಸಲಾಗಿದ್ದು, ಗ್ರಾಮೀಣ ಪ್ರದೇಶದ ಸಣ್ಣ ರೈತರು, ಕೃಷಿ ಕಾರ್ಮಿಕರು ಮತ್ತು ಕುಶಲಕರ್ಮಿಗಳಿಗೆ ಸಾಲ ಮತ್ತು ಇತರ ಸೌಲಭ್ಯಗಳು ದೊರೆಯುವಂತೆ ಮಾಡುವುದು ಇದರ ಧ್ಯೇಯವಾಗಿದೆ.
ಪ್ರಾಯೋಜಕ ಬ್ಯಾಂಕ್ಗಳು ಡಿಜಿಟಲೀಕರಣ ಮತ್ತು ತಂತ್ರಜ್ಞಾನ ಸುಧಾರಣೆಗೆ ನೆರವಾಗಬೇಕಾಗಿದ್ದು, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳ ಕುರಿತು ನಿರ್ಧರಿಸಲಾಗಿದೆ ಎನ್ನಲಾಗಿದೆ. ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು ಕೃಷಿ ಸಾಲದಲ್ಲಿ ಮಹತ್ತರ ಪಾತ್ರ ವಹಿಸುತ್ತವೆ. ಇದರ ಪ್ರಾಯೋಜಕ ಬ್ಯಾಂಕ್ಗಳು ಸಾರ್ವಜನಿಕ ವಲಯದ ಬ್ಯಾಂಕುಗಳು (PSB ಗಳು) ಮತ್ತು ರಾಜ್ಯ ಸರ್ಕಾರಗಳು ಕೂಡ ಆಗಿವೆ.
ರಾಜ್ಯ ಹಣಕಾಸು ಸಚಿವ ಭಗತ್ ಕರದ್ ಈ ವೇಳೆ ಹಣಕಾಸು ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, ಮೀನುಗಾರಿಕೆ ಮತ್ತು ಹೈನುಗಾರಿಕೆ ಕ್ಷೇತ್ರದಲ್ಲಿ ತೊಡಗಿರುವ ಎಲ್ಲರಿಗೂ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ನೀಡುವ ಕುರಿತು ಚರ್ಚಿಸಲಾಗಿರುವ ಕುರಿತು ಮಾಹಿತಿ ನೀಡಿದ್ದಾರೆ.