KSRTC Recruitment 2023: ಭರ್ಜರಿ 2000 ಚಾಲಕ ಹುದ್ದೆಗಳ ನೇಮಕ, 10ನೇ ತರಗತಿ ಪಾಸಾದವರಿಗೆ ಆದ್ಯತೆ
KSRTC Recruitment 2023: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(Karnataka State Road Transport Corporation) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅತಿ ಶೀಘ್ರದಲ್ಲೇ ನೇಮಕಾತಿ ಮಾಡಲಿದೆ. ಈ ಬಗ್ಗೆ ಶ್ರೀರಾಮುಲು ಘೋಷಣೆ ಮಾಡಿದ್ದಾರೆ. ರಾಜ್ಯದ ವಿವಿಧ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಖಾಲಿ ಇರುವ ಚಾಲಕ ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರದಲ್ಲೇ 2000 ಚಾಲಕರನ್ನು ನೇಮಿಸಿಕೊಳ್ಳಲಾಗುತ್ತದೆ.
ಒಟ್ಟು 2000 ಚಾಲಕರ ಹುದ್ದೆಗಳನ್ನು ಭರ್ತಿ ಮಾಡಲು ಕೆಎಸ್ಆರ್ಟಿಸಿ ಅಧಿಕೃತ ನೋಟಿಫಿಕೇಶನ್ ಬಿಡುಗಡೆ ಮಾಡಲಿದೆ. ಹೆಚ್ಚಿನ ಮಾಹಿತಿಗಾಗಿ ksrtc.inಗೆ ಭೇಟಿ ನೀಡಿ, ನೋಟಿಫಿಕೇಶನ್ ಬಿಡುಗಡೆಯಾದ ಕೂಡಲೇ ಅರ್ಜಿ ಸಲ್ಲಿಸಬಹುದು.
ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ/ SSLC ಪಾಸಾಗಿರಬೇಕು.
ವಯೋಮಿತಿ: ಅಭ್ಯರ್ಥಿಗಳ ವಯಸ್ಸು ಎಷ್ಟಿರಬೇಕು ಎಂಬುದನ್ನು ನಿಗದಿಪಡಿಸಿಲ್ಲ. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳಿಗೆ ಡ್ರೈವಿಂಗ್ ಟೆಸ್ಟ್ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೇತನ: ಡ್ರೈವಿಂಗ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 10,000-20,000 ವೇತನ ಕೊಡಲಾಗುತ್ತದೆ.