ಕರ್ನಾಟಕದಲ್ಲಿ ನಿರ್ಮಾಣ ಆಗುತ್ತದೆಯಾ ದಕ್ಷಿಣದ ಅಯೋಧ್ಯೆ? ಅಶ್ವಥ್ ನಾರಾಯಣ್ ಹೇಳಿದ್ದೇನು?
ಉತ್ತರ ಭಾರತದ ಅಯೋಧ್ಯೆ ರಾಮ ಜನ್ಮ ಭೂಮಿಯಲ್ಲಿ ರಾಮಮಂದಿರ ನಿರ್ಮಾಣದ ಕಾರ್ಯ ಭರದಿಂದ ಸಾಗುತ್ತಿದೆ. ಅಂತೆಯೇ ನಮ್ಮ ಕರ್ನಾಟಕದಲ್ಲಿಯೂ ಕೂಡ ರಾಮ ಮಂದಿರ ನಿರ್ಮಾಣದ ಕನಸನ್ನು ನಮ್ಮ ರಾಜಕೀಯ ನಾಯಕರು ಗಳು ಕಾಣುತ್ತಿದ್ದಾರೆ. ಹೌದು ಕರ್ನಾಟಕದಲ್ಲಿಯೂ ಕೂಡ ಮುಂದಿನ ದಿನಗಳಲ್ಲಿ ಭವ್ಯವಾದ ರಾಮ ಮಂದಿರ ತಲೆ ಎತ್ತಲಿದೆ. ಎಲ್ಲಿ ಇದರ ನಿರ್ಮಾಣ, ಯಾವಾಗ ಆರಂಭ ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಕರ್ನಾಟಕದ ರಾಮನಗರದ ರಾಮ ದೇವರ ಬೆಟ್ಟದಲ್ಲಿ ದಕ್ಷಿಣ ಅಯೋಧ್ಯೆಯನ್ನು ನಿರ್ಮಾಣ ಮಾಡಲು ಯೋಜನೆ ಸಿದ್ಧವಾಗಿದೆ. ದೇವಸ್ಥಾನ ಅಭಿವೃದ್ಧಿಗೆ ಯೋಜನೆ ರೂಪಿಸಲು ಸಿಎಂ ಬೊಮ್ಮಾಯಿ ಕೂಡ ಸೂಚನೆ ನೀಡಿದ್ದಾರೆ ಎಂದು ಸುವರ್ಣಸೌಧದಲ್ಲಿ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಅಶ್ವಥ್ ನಾರಾಯಣ್ ಸುದ್ದಿಗಾರರೊಂದಿಗೆ ಮಾತನಾಡುತ್ತ ಹೇಳಿದರು
ನಮ್ಮ ರಾಮನಗರ, ರಾಮನಗರ ಎಂದು ಪ್ರತೀತಿ ಇದೆ. ರಾಮನ ಅಭಿವೃದ್ಧಿ ಇಲ್ಲಿಯೂ ಮಾಡಬೇಕು. ದಕ್ಷಿಣ ಭಾರತದಲ್ಲಿಯೂ ರಾಮನ ಭಕ್ತರು ಅನೇಕ ಮಂದಿ ಇದ್ದಾರೆ. ಉತ್ತರ ಭಾರತದಂತೆ ದಕ್ಷಿಣ ಭಾರತದಲ್ಲೂ ರಾಮ ಮಂದಿರ
ನಿರ್ಮಾಣ ಆಗುವ ವಿಶ್ವಾಸ ಇದೆ. ಇದಕ್ಕೆ ಎಲ್ಲಾ ರಾಮಭಕ್ತರ ಸಹಕಾರ ಬೇಕು. ಬರುವಂತಹ ಬಜೆಟ್ ನಲ್ಲಿ ಸಿಎಂ ಬಜೆಟ್ ಘೋಷಣೆ ಮಾಡಬಹುದು. ಈಗಾಗಲೇ ಅದರ ಕುರಿತು ಸಮಾಲೋಚನೆ ನಡೆಸುತ್ತಿದ್ದೇವೆ ಎಂದರು.
ರಾಮನಗರದ ರಾಮದೇವರ ಬೆಟ್ಟವನ್ನು ದಕ್ಷಿಣ ಅಯೋಧ್ಯೆ ಕೇಂದ್ರವನ್ನಾಗಿ ಮಾಡುತ್ತೇವೆ. ದೇವಸ್ಥಾನ ಅಭಿವೃದ್ಧಿಗೆ ಯೋಜನೆ ರೂಪಿಸಲು ಮುಖ್ಯಮಂತ್ರಿಗಳು ಈಗಾಗಲೇ ಸೂಚನೆ ನೀಡಿದ್ದಾರೆ. ಅಲ್ಲಿರುವ ರಾಮನ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಿ, ದಕ್ಷಿಣ ಅಯೋಧ್ಯೆ ಕೇಂದ್ರವನ್ನಾಗಿ ಮಾಡುತ್ತೇವೆ. ಜೀರ್ಣೋದ್ಧಾರದ ಬಳಿಕ ನಡೆಯುವ ಕಾರ್ಯಕ್ರಮಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಆಹ್ವಾನಿಸಿದ್ದೇವೆ. ಇದರ ಮೂಲಕ ರಾಮನಗರದ ರಾಮದೇವರ ಬೆಟ್ಟವನ್ನು ಹಿಂದೂ ಧಾರ್ಮಿಕ ಕೇಂದ್ರವನ್ನಾಗಿ ಮಾಡುತ್ತೇವೆ ಎಂದರು.