ಶಿವಮೊಗ್ಗ : ಯುವಕನ ಮೇಲೆ ತೀವ್ರ ಹಲ್ಲೆ!

ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ (Shivamogga Attack) ನಡೆಸಿದ್ದರಿಂದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

 

ಶಿವಮೊಗ್ಗ ನಗರದಲ್ಲಿ ನಿನ್ನೆ ತಡರಾತ್ರಿ ಯುವಕನೊಬ್ಬನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಲಾರಿ ಚಾಲಕರಾಗಿರುವ ಬಷೀರ್‌ ಎಂಬವರ ಮೇಲೆ ನಾಲ್ಕು ಜನರ ಗುಂಪಿನಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ದುಷ್ಕರ್ಮಿಗಳು ಎರಡು ಆಟೋಗಳಲ್ಲಿ ಬಂದು ಹಲ್ಲೆ ನಡೆಸಿ ಆಟೋದಲ್ಲಿ ಪರಾರಿಯಾಗಿರುವ ಪ್ರಕರಣ ರಾಗಿಗುಡ್ಡದಲ್ಲಿ ನಡೆದಿದೆ. ಸ್ನೇಹಿತರ ಗುಂಪಿನವರೇ ಹಲ್ಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಗಾಯಾಳು ಬಷೀರ್ ತಲೆಗೆ ಗಂಭೀರ ಗಾಯಗಳಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

Leave A Reply

Your email address will not be published.