ಮಂಡ್ಯದಲ್ಲಿ ನೂತನ ಹಾಲಿನ ಮೆಗಾ ಡೈರಿ ಉದ್ಘಾಟಿಸಿದ ಅಮಿತ್ ಶಾ

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಹಾಲಿನ ಡೈರಿ ಉದ್ಘಾಟನೆಯನ್ನು ಸನ್ಮಾನ್ಯ ಕೇಂದ್ರ ಗೃಹಸಚಿವ ಹಾಗೂ ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ನೆರವೇರಿಸಿದರು.

 

ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮಿಜಿ, ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅಬಕಾರಿ ಸಚಿವರು ಹಾಗೂ ಮಂಡ್ಯ ಮತ್ತು ಹಾಸನ ಜಿಲ್ಲೆ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ರೇಷ್ಮೆ ಯುವ ಸಬಲೀಕರಣ ಕ್ರೀಡೆ ಇಲಾಖೆ ಸಚಿವ ಕೆ.ಸಿ ನಾರಾಯಣಗೌಡ, ಸಹಕಾರ ಸಚಿವ ಎಸ್.ಟಿ ಸೋಮಶೇಖರ್, ವಿಧಾನಪರಿಷತ್ ಸದಸ್ಯ ಮಧು ಮಾದೇಗೌಡ,ವಿಧಾನಸಭಾ ಕ್ಷೇತ್ರದ ಶಾಸಕರುಗಳಾದ ಸಿ.ಎಸ್ ಪುಟ್ಟರಾಜು, ಡಾ. ಕೆ ಅನುದಾನಿ, ಸುರೇಶ್ ಗೌಡ, ಡಿ.ಸಿ ತಮ್ಮಣ್ಣ, ರವೀಂದ್ರ ಶ್ರೀಕಂಠಯ್ಯ ಎಂ ಶ್ರೀನಿವಾಸ್ ಸೇರಿದಂತೆ ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು.

Leave A Reply

Your email address will not be published.