BREAKING NEWS: ಭೀಕರ ರಸ್ತೆ ಅಪಘಾತ, ಕ್ರಿಕೆಟಿಗ ರಿಷಭ್ ಪಂತ್‌ಗೆ ಗಂಭೀರ ಗಾಯ !

Share the Article

ಭಾರತ ಕ್ರಿಕೆಟ್ ತಂಡದ ಆಟಗಾರ ರಿಷಬ್ ಪಂತ್ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ. ರಿಷಬ್ ಪಂತ್ ಅವರು ದೆಹಲಿಯಿಂದ ಮನೆಗೆ ಮರಳುತ್ತಿದ್ದಾಗ ಭಾರಿ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ. ರೂರ್ಕಿಯ ನರ್ಸನ್ ಗಡಿಯಲ್ಲಿರುವ ಹಮ್ಮದ್ಭುರ್ ಝಾಲ್ ಬಳಿ ಈ ಭೀಕರ ಅಪಘಾತ ಉಂಟಾಗಿದೆ ಎಂದು ತಿಳಿದು ಬಂದಿದೆ.

ಈ ಅಪಘಾತದಲ್ಲಿ ಗಂಭಿರವಾಗಿ ಗಾಯಗೊಂಡಿದ್ದ ರಿಷಭ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಗೆ ಕಳುಹಿಸಲಾಗಿದೆ ಅಂತ ತಿಳಿದು ಬಂದಿದೆ.

ರಿಷಬ್ ಪಂತ್ ಅವರ ಹಣೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ. ಸದ್ಯ ರಿಷಬ್ ಪಂತ್ ಅವರ ಆರೋಗ್ಯ ಸ್ಥಿರವಾಗಿದ್ದು, ಅವರನ್ನು ರೂರ್ಕಿಯಿಂದ ದೆಹಲಿಗೆ ಕಳುಹಿಸಲಾಗುತ್ತಿದೆ ಎಂದು ಸಕ್ಷಮ್ ಆಸ್ಪತ್ರೆಯ ಅಧ್ಯಕ್ಷ ಡಾ.ಸುಶೀಲ್ ನಗರ್ ಹೇಳಿದ್ದಾರೆ.

Leave A Reply