Scholarship : Phd ವಿದ್ಯಾರ್ಥಿಗಳಿಗೆ ಉಚಿತ ಫೆಲೋಶಿಪ್! ಈ ರೀತಿ ಅಪ್ಲೈ ಮಾಡಿ!!!
ಈಗಾಗಲೇ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2022-23ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಎಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ ನೀಡಲಾಗಿದೆ . ಪ್ರಸ್ತುತ ಆರ್ಥಿಕವಾಗಿ ಹಿಂದುಳಿದಿದ್ದು ಕಲಿಕೆಗಾಗಿ ಹಣದ ಅವಶ್ಯಕಥೆ ಇದ್ದರೆ ಈ ಸ್ಕಾಲರ್ಶಿಪ್ಗೆ ಅರ್ಜಿ ಸಲ್ಲಿಸಲು ಪ್ರಕಟಣೆ ಹೊರಡಿಸಲಾಗಿದೆ.
ಸದ್ಯ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಫೆಲೋಶಿಪ್‌ಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ 2022-23ನೇ ಸಾಲಿನಲ್ಲಿ ಕರ್ನಾಟಕದ ಶಾಸನಬದ್ಧ ವಿಶ್ವ ವಿದ್ಯಾಲಯಗಳ ಅಧೀನಕ್ಕೆ ಒಳಪಡುವ ವಿದ್ಯಾರ್ಥಿಗಳು ಮಾತ್ರ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.
ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ.44,500/-ರ ಒಳಗೆ ಇರಬೇಕು. ಹಾಗಿದ್ದರೆ ಮಾತ್ರ ನೀವು ಈ ವಿದ್ಯಾರ್ಥಿ ವೇತನಕ್ಕೆ ಅಪ್ಲೈ ಮಾಡಬಹುದು.
ಅರ್ಜಿ ಸಲ್ಲಿಸಲು 2023ರ ಜನವರಿ 13 ಸಂಜೆ 5 ಗಂಟೆ ಕೊನೆಯ ದಿನಾಂಕ ಆಗಿರುತ್ತದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಹಮೂದ್ ತಿಳಿಸಿದ್ದಾರೆ.
ಶರತ್ತು ಅನ್ವಯವಾಗಿ ಅರ್ಹ ಅಭ್ಯರ್ಥಿಗಳು ಈ ಮೇಲಿನ ವಿದ್ಯಾರ್ಥಿ ವೇತನ ಪಡೆದುಕೊಳ್ಳಬಹುದಾಗಿದೆ.