ವಿದ್ಯಾನಿಧಿ ಸ್ಕಾಲರ್ ಶಿಪ್ ಕುರಿತು ಮಹತ್ವದ ಘೋಷಣೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ!
ಸಿಎಂ ಬೊಮ್ಮಾಯಿ ಮಹತ್ವದ ಘೋಷಣೆ ನೀಡಿದ್ದು, 11 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ಸ್ಕಾಲರ್ ಶಿಪ್ ನೀಡುವ ಕುರಿತು ಮಾಹಿತಿ ನೀಡಿದ್ದಾರೆ. ಇಂದು ಪುಸ್ತಕ ಹಿಡಿಯ ಬೇಕಿದ್ದ ಅದೆಷ್ಟೊ ಕೈಗಳು ಆರ್ಥಿಕ ಮುಗ್ಗಟ್ಟಿನ ಜೊತೆಗೆ ಮನೆಯ ಸ್ಥಿತಿಗತಿಯ ಅನುಸಾರ ಓದಿಗೆ ವಿರಾಮ ಹೇಳಿ ಕೂಲಿ ಮಾಡುವತ್ತ ಮುಖ ಮಾಡುತ್ತಿರುವ ಪ್ರಸಂಗಗಳು ನಡೆಯುತ್ತಿವೆ. ಹೀಗಾಗಿ, ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ನಿಟ್ಟಿನಲ್ಲಿ ಎಸ್ ಬಿಐ, ಹೆಚ್‌ಡಿಎಫ್‌ಸಿ ಬ್ಯಾಂಕ್ ಗಳು ಹಾಗೆ ಇನ್ನೂ ಕೆಲವು ಶಿಕ್ಷಣ ಸಂಸ್ಥೆಗಳು ಸ್ಕಾಲರ್‌ಶಿಪ್ ಮೂಲಕ ಮಕ್ಕಳ ಓದುವ ಕನಸಿಗೆ ಆಸರೆಯಾಗುತ್ತಿದೆ.
ಇದೇ ರೀತಿ ವಿದ್ಯಾ ನಿಧಿ ಸ್ಕಾಲರ್‌ಶಿಪ್ (Scholarship) 2023 ಅನ್ನು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನದ ರೂಪದಲ್ಲಿ ನೀಡಲಾಗುತ್ತಿದೆ. ಪ್ರತಿ ವರ್ಷವೂ ಸಹ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ಸ್ಕಾಲರ್ ಶಿಪ್ ನೀಡಲಾಗುತ್ತಿದ್ದು, ಅದೆ ರೀತಿ, ಈ ವರ್ಷವೂ ಕೂಡ ಅತಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡುವುದಾಗಿ ಬಸವರಾಜ್ ಬೊಮ್ಮಾಯಿ ಹೇಳಿದ್ದು, ಮುಂದಿನ ದಿನಗಳಲ್ಲಿ ಹಲವಾರು ಮಕ್ಕಳು ಇದರ ಫಲಾನುಭವಿಗಳಾಗಲಿದ್ದಾರೆ.
ವಿದ್ಯಾನಿಧಿ ಎಂಬ ಹೆಸರಿನಲ್ಲಿ ಈ ಸ್ಕಾಲರ್ ಶಿಪ್ ನೀಡಲಾಗುತ್ತಿದ್ದು ಅರ್ಹ ಅಭ್ಯರ್ಥಿಗಳು ಅವಧಿಗೂ ಮುನ್ನ ಅಪ್ಲೈ ಮಾಡಿ ಈ ವಿದ್ಯಾರ್ಥಿ ವೇತನದ ಪ್ರಯೋಜನ ಪಡೆಯಬಹುದು. ರೈತ ಮತ್ತು ದುಡಿಯುವ ವರ್ಗ ಆರ್ಥಿಕವಾಗಿ ಸದೃಢರಾಗಬೇಕು ಎನ್ನುವ ನಿಟ್ಟಿನಲ್ಲಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ.
ಮುಂದಿನ ದಿನಗಳಲ್ಲಿ ಮೀನುಗಾರರ ಮಕ್ಕಳಿಗೂ ವಿಶೇಷ ವಿದ್ಯಾರ್ಥಿ ವೇತನ ನೀಡಲಾಗುವ ಜೊತೆಗೆ, ಕುಂಬಾರರು ಸೇರಿದಂತೆ ಹಲವರಿಗೆ 50 ಸಾವಿರ ರೂ. ಕಾಯಕ ಯೋಜನೆಯಡಿ ಈಗಾಲೇ ನೀಡಲಾಗಿರುವ ಕುರಿತು ಮಾಹಿತಿ ನೀಡಿದ್ದಾರೆ. ಈಗಾಗಲೇ 11 ಲಕ್ಷ ಮಕ್ಕಳಿಗೆ ವಿದ್ಯಾನಿಧಿ ಪ್ರಯೋಜನ ನೀಡಲಾಗಿದ್ದು, ಇನ್ನು ಮುಂದಿನ ದಿನಗಳಲ್ಲೂ ಕೂಡ ಪ್ರತಿಯೊಬ್ಬರಿಗೂ ಪ್ರಯೋಜನ ಆಗುವಂತೆ ಎಲ್ಲಾ ಕಾರ್ಮಿಕರ ಮಕ್ಕಳಿಗೂ ಸಹ ವಿದ್ಯಾರ್ಥಿ ವೇತನ ನೀಡುವ ಭರವಸೆ ನೀಡಿದ್ದಾರೆ. ಗ್ರಾಮೀಣ ಭಾಗದಲ್ಲಿ ವಾಸಿಸುವ ಮತ್ತು ಗ್ರಾಮೀಣ ಭಾಗದ ಶಾಲೆಗಳ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನ ತುಂಬಾ ಸಹಕಾರಿಯಾಗಲಿದೆ.
ಇದರಿಂದ ಹಲವು ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರೆಸಲು ಸಹಾಯವಾಗುತ್ತದೆ. ಮೀನುಗಾರರ ಮಕ್ಕಳಿಗೆ ವಿಶೇಷ ಆದ್ಯತೆ ದೊರೆಯಲಿದ್ದು, ಯಾವುದೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಕೂಡ ಅವರಿಗೆ ಅನುಕೂಲವಾಗುವಂತೆ ಶಿಕ್ಷಣ ನೀಡಲಾಗುವ ಕುರಿತು ಸಿ ಎಂ ಬಸವರಾಜ ಬೊಮ್ಮಾಯಿಯವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹಲವಾರು ಕ್ಷೇತ್ರದಲ್ಲಿ ತೊಡಗಿಸಿಕೊಂಡು ಉದ್ಯೋಗವನ್ನು ಮಾಡುತ್ತಿರುವ ಯುವಕರ ಸಂಖ್ಯೆ ಏರಿಕೆ ಕಂಡಿದೆ. ಆದರೆ ಕುಂಬಾರರ ಸಂಖ್ಯೆ ಕ್ಷೀಣಿಸುತ್ತಿರುವ ಹಿನ್ನೆಲೆ ಕುಂಬಾರರ ಮಕ್ಕಳಿಗೂ ಕೂಡ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಅರ್ಹ ಫಲಾನುಭವಿಗಳು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬಹುದು.