ಅಂಗನವಾಡಿ ಕಾರ್ಯಕರ್ತೆಯರಿಗೆ : ಪಿಯುಸಿ : ಸಹಾಯಕಿಯರಿಗೆ ಎಸ್ ಎಸ್ ಎಲ್ ಸಿ ಕಡ್ಡಾಯಗೊಳಿಸಿ ಸೂಚನೆ!

Share the Article

ರಾಜ್ಯ ಸರ್ಕಾರ ಶಿಕ್ಷಣವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ, ರಾಜ್ಯ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಅಂಗನವಾಡಿ ನೇಮಕಾತಿಗೆ ಮಾನದಂಡ ಬದಲಾವಣೆ ತರಲು ಮುಂದಾಗಿದೆ.

ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಸಿಬ್ಬಂದಿಗಳಿಗೆ ಬಡ್ತಿಗೆ ನಿಯಮ ಬದಲಾವಣೆ ಮಾಡಲಾಗಲಿದ್ದು, ಹೊಸ ಕಾರ್ಯಕರ್ತೆಯರ ಆಯ್ಕೆ ಮಾಡುವ ಸಂದರ್ಭದಲ್ಲಿ ಅಂಗನವಾಡಿ ಚಟುವಟಿಕೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಕೋರ್ಸ್ ಪೂರ್ಣಗೊಳಿಸಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ಈ ಹಿಂದೆ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಎಸ್‌ಎಸ್‌ಎಲ್ ಸಿ ಮತ್ತು ಸಹಾಯಕಿಯರ ಹುದ್ದೆಗಳಿಗೆ ಏಳನೇ ತರಗತಿ ಮಾನದಂಡ ನಿಗದಿ ಮಾಡಲಾಗಿತ್ತು.

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗುತ್ತಿರುವ ಹಿನ್ನೆಲೆ ಹೆಚ್ಚಿನ ಶೈಕ್ಷಣಿಕ ಅರ್ಹತೆ ನಿಗದಿಪಡಿಸಲಾಗಿದ್ದು ಅಂಗನವಾಡಿ ಚಟುವಟಿಕೆಗಳಿಗೆ ಸಂಬಂಧಿಸಿದ ಕೋರ್ಸ್ ಗಳನ್ನು ಪೂರ್ಣಗೊಳಿಸಿದವರಿಗೆ ಆದ್ಯತೆ ನೀಡಲಾಗುವ ಕುರಿತು ಸೂಚನೆ ನೀಡಲಾಗಿದೆ ಎನ್ನಲಾಗುತ್ತಿದೆ. ಹೀಗಾಗಿ, ಅಂಗನವಾಡಿ ಕಾರ್ಯಕರ್ತೆಯರಿಗೆ ಪಿಯುಸಿ ಮತ್ತು ಸಹಾಯಕರ ಹುದ್ದೆಗಳಿಗೆ ಎಸ್‌ಎಸ್‌ಎಲ್ ಸಿ ಕಡ್ಡಾಯಗೊಳಿಸಲು ಹೇಳಲಾಗಿದೆ.

Leave A Reply