BIG NEWS: ಪಡಿತರ ಚೀಟಿದಾರರೇ ಇತ್ತ ಗಮನಿಸಿ : ರಾಜ್ಯ ಸರ್ಕಾರದಿಂದ ಹೊಸ ವರ್ಷಕ್ಕೆ ಬಿಗ್ ಗಿಫ್ಟ್: ಹೆಚ್ಚುವರಿ ಅಕ್ಕಿ ವಿತರಣೆಗೆ ಆದೇಶ

ಹೊಸ ವರ್ಷಕ್ಕೆ ಪಡಿತರ ಚೀಟಿದಾರರಿಗೆ ಗುಡ್‌ನ್ಯೂಸ್‌ವೊಂದು ಬಂದಿದೆ. ಅದೇನೆಂದರೆ ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಣೆ ಮಾಡುತ್ತಿತ್ತು. ಇದೀಗ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ. ಈ ಕುರಿತು ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆಹಾರ ಇಲಾಖೆಯ ಈ ಆದೇಶದ ಹಿನ್ನಲೆಯಲ್ಲಿ, ಈ ತಿಂಗಳಿನಿಂದಲೇ ಪಡಿತರ ಚೀಟಿದಾರರ ಪ್ರತಿ ವ್ಯಕ್ತಿಗೆ ಐದು ಕೆಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಣೆ ಆರಂಭವಾಗಲಿದೆ.

 

ಈ ಆದೇಶದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಡಿಸೆಂಬರ್ 2022ಕ್ಕೆ ಅಂತ್ಯಗೊಂಡ ಹಿನ್ನಲೆಯಲ್ಲಿ, ರಾಜ್ಯದಲ್ಲಿರುವ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲಾಗುತ್ತಿರುವ ಐದು ಕೆಜಿ ಆಹಾರ ಧಾನ್ಯದೊಂದಿಗೆ ಪ್ರತಿ ತಿಂಗಳು 1 ಕೆಜಿ ಅಕ್ಕಿಯನ್ನು ಹೆಚ್ಚುವರಿಯಾಗಿ ವಿತರಿಸಲು ಉದ್ದೇಶಿಸಿದೆ ಎಂದಿದ್ದಾರೆ.

ಈ ಹಿನ್ನಲೆಯಲ್ಲಿ ಜನವರಿ 2023ರಿಂದ ಜಾರಿಗೆ ಬರುವಂತೆ ರಾಜ್ಯದಲ್ಲಿರುವ ಆದ್ಯತಾ ಪಡಿತರ ಚೀಟಿಗಳ ( Ration Card ) ಪ್ರತಿ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲಾಗುತ್ತಿರುವ ಐದು ಕೆಜಿ ಆಹಾರ ಧಾನ್ಯದೊಂದಿಗೆ ಹೆಚ್ಚುವರಿಯಾಗಿ ಪ್ರತಿ ತಿಂಗಳು 1 ಕೆಜಿ ಅಕ್ಕಿಯನ್ನು ಹೆಚ್ಚುವರಿಯಾಗಿ ವಿತರಿಸಲು ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

Leave A Reply

Your email address will not be published.