Multiple Bank Accounts: ಒಂದಕ್ಕಿಂತ ಹೆಚ್ಚು ಬ್ಯಾಂಕ್ಗಳಲ್ಲಿ ಖಾತೆ ತೆರೆತೀರಾ?- ಆರ್ಬಿಐ ಹೊಸ ಮಾರ್ಗಸೂಚಿ
ಹೇಳಿ ಕೇಳಿ ಡಿಜಿಟಲ್ ಯುಗ.. ಎಲ್ಲದರಲ್ಲೂ ಬದಲಾವಣೆಯಾಗಿ ಹಿಂದಿನಂತೆ ಬ್ಯಾಂಕ್ಗಳ ಮುಂದೆ ಗಂಟೆಗಟ್ಟಲೆ ನಿಲ್ಲಬೇಕಾದ ಅನಿವಾರ್ಯತೆ ಈಗಿಲ್ಲ. ಮೊಬೈಲ್ ಎಂಬ ಮಾಯಾವಿ ಅನ್ವೇಷಣೆಯ ಬಳಿಕ ಎಲ್ಲ ಕೆಲಸಗಳು ಕ್ಷಣ ಮಾತ್ರದಲ್ಲಿ ನಡೆಯುತ್ತವೆ. ಇಂದಿನ ಡಿಜಿಟಲ್ ಯುಗದಲ್ಲಿ ನಮ್ಮ ವ್ಯವಹಾರಗಳನ್ನು ನಡೆಸಲು ಬ್ಯಾಂಕ್ಗಳು ಅತ್ಯವಶ್ಯಕವಾಗಿದೆ. ಮೊಬೈಲ್ ಎಂಬ ಮಾಯಾವಿಯ ಮೂಲಕ ಕ್ಷಣ ಮಾತ್ರದಲ್ಲಿ ಕೆಲಸವನ್ನು ಸಲೀಸಾಗಿ ಮಾಡಲು ಅನುವು ಮಾಡಿಕೊಟ್ಟಿದೆ. ಇದೀಗ, ಆರ್ಬಿಐ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಹೌದು!!!ಆರ್ಬಿಐ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಒಂದಕ್ಕಿಂತ ಹೆಚ್ಚು ಬ್ಯಾಂಕ್ಗಳಲ್ಲಿ ಖಾತೆ ತೆರೆದರೆ ಭಾರೀ ನಷ್ಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ. ಪ್ರಸ್ತುತ, ಆರ್ಬಿಐ ಬ್ಯಾಂಕ್ ಖಾತೆ ತೆರೆಯಲು ಯಾವುದೇ ಮಿತಿಯನ್ನು ನಿಗದಿ ಮಾಡಿಲ್ಲ, ಆದರೂ ಕೂಡ ಒಂದಕ್ಕಿಂತ ಹೆಚ್ಚು ಬ್ಯಾಂಕ್ಗಳಲ್ಲಿ ಖಾತೆಗಳನ್ನು ಹೊಂದಿರುವುದರಿಂದ ಗ್ರಾಹಕರು ಅನೇಕ ತೊಂದರೆಗಳನ್ನು ಎದುರಿಸುವ ಸಾಧ್ಯತೆ ಇದೆ.
ಬ್ಯಾಂಕ್ ಖಾತೆಗಳಲ್ಲಿ ಮಿನಿಮಂ ಬ್ಯಾಲೆನ್ಸ್ ಕಾಯ್ದುಕೊಳ್ಳುವ ಕ್ರಮ ಅನುಸರಿಸುವುದು ಉತ್ತಮ. ಹಲವು ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಶುಲ್ಕಗಳು, ಸೇವಾ ಶುಲ್ಕಗಳು ಸೇರಿದಂತೆ ವಿವಿಧ ರೀತಿಯ ಪಾವತಿಗಳನ್ನು ಮಾಡಬೇಕಾಗಿದ್ದು, ನೀವು ಕೇವಲ ಒಂದು ಬ್ಯಾಂಕ್ನ ಸೌಲಭ್ಯಗಳ ಲಾಭವನ್ನು ಪಡೆದರೆ, ನೀವು ಕೇವಲ ಒಂದು ಬ್ಯಾಂಕ್ನಲ್ಲಿ ಶುಲ್ಕವನ್ನು ಪಾವತಿ ಮಾಡಿದರೆ ಸಾಕು. ಆದರೆ, ನೀವು ಒಂದಕ್ಕಿಂತ ಹೆಚ್ಚು ಬ್ಯಾಂಕ್ಗಳಲ್ಲಿ ಖಾತೆ ಹೊಂದಿದ್ದ ಸಂದರ್ಭದಲ್ಲಿ ನೀವು ಖಾತೆ ಹೊಂದಿರುವ ಎಲ್ಲಾ ಬ್ಯಾಂಕ್ಗಳಲ್ಲಿಯೂ ಈ ಎಲ್ಲಾ ಶುಲ್ಕಗಳ ಪಾವತಿ ಮಾಡಬೇಕಾದ ಅವಶ್ಯಕತೆ ಇದೆ.
ಅನಗತ್ಯ ಶುಲ್ಕಗಳನ್ನು ಪಾವತಿ ಮಾಡುವುದನ್ನು ತಡೆಯುವ ನಿಟ್ಟಿನಲ್ಲಿ ಅಲ್ಲದೆ ಉತ್ತಮ ಸಿಬಿಲ್ ಸ್ಕೋರ್ ಕಾಯ್ದುಕೊಳ್ಳಲು ನಿಮ್ಮ ಎಲ್ಲಾ ಬಳಕೆಯಾಗದ ಖಾತೆಗಳನ್ನು ಮುಚ್ಚುವುದು ಒಳ್ಳೆಯದು ಎಂದು ಆರ್ಬಿಐ ಸಲಹೆ ನೀಡಿದೆ. ಹೀಗಾಗಿ, ಬ್ಯಾಂಕ್ ಖಾತೆಯನ್ನು ಮುಚ್ಚಲು ಚಿಂತನೆ ನಡೆಸುವ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ಅಕೌಂಟ್ ಕ್ಲೋಸ್ ಫಾರ್ಮ್ ಪಡೆದು ಅದನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ನಿಮ್ಮ ಖಾತೆಯನ್ನು ಸುಲಭವಾಗಿ ಕ್ಲೋಸ್ ಮಾಡಬಹುದಾಗಿದೆ.
ಗ್ರಾಹಕರು ಒಂದಕ್ಕಿಂತ ಹೆಚ್ಚು ಬ್ಯಾಂಕ್ಗಳಲ್ಲಿ ಖಾತೆ ಹೊಂದಿದ್ದರೂ ಕೂಡ ಎಲ್ಲಾ ಬ್ಯಾಂಕ್ಗಳಲ್ಲಿ ಮಿನಿಮಂ ಬ್ಯಾಲೆನ್ಸ್ ನಿರ್ವಹಣೆ ಮಾಡಬೇಕಾಗುತ್ತದೆ. ಇದರ ಜೊತೆಗೆ, ಚೆಕ್ಬುಕ್ನಿಂದ ಕಾರ್ಡ್ವರೆಗೆ ಎಲ್ಲಾ ಶುಲ್ಕಗಳನ್ನು ಕೂಡ ನಿರ್ವಹಣೆ ಮಾಡಬೇಕಾಗುತ್ತದೆ.
ನೀವು ನಿಮ್ಮ ಬ್ಯಾಂಕ್ ಖಾತೆಯಲ್ಲಿ ಮಿನಿಮಂ ಬ್ಯಾಲೆನ್ಸ್ ಕಾಯ್ದುಕೊಳ್ಳಲು ಆಗದೇ ಇದ್ದರೆ, 5000 ರೂ. ಕೆಲವು ಬ್ಯಾಂಕ್ಗಳಲ್ಲಿ 10,000 ರೂ.ವರೆಗೆ ದಂಡವನ್ನು ಪಾವತಿಸಬೇಕಾಗುತ್ತದೆ. ಇಷ್ಟೇ ಅಲ್ಲದೆ, ಇದು ನಿಮ್ಮ CIBIL ಸ್ಕೋರ್ ಮೇಲೆಯೂ ಪ್ರಭಾವ ಬೀರುತ್ತದೆ. ಹೀಗಾಗಿ, ಬ್ಯಾಂಕ್ ಗ್ರಾಹಕರು ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ತೆರೆದಿದ್ದರೆ ಮೇಲೆ ತಿಳಿಸಿದ ಮಾಹಿತಿ ತಿಳಿದುಕೊಳ್ಳುವುದು ಅವಶ್ಯಕ.