ಜನವರಿ 6 ರಿಂದ ಈ ಜಿಲ್ಲೆಯ ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ

ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ. ವಸತಿ ವ್ಯವಸ್ಥೆ ಮಾಡಿರುವ ಶಾಲಾ-ಕಾಲೇಜು, ವಸತಿ ನಿಲಯಗಳಿಗೆ ಜ.4 ರಿಂದ 7ರವರಗೆ ರಜೆ ಘೋಷಣೆ ಮಾಡಲಾಗಿದೆ.

 

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿ ನಗರದಲ್ಲಿ ಜನವರಿ 6,7 ಮತ್ತು 8 ರಂದು ನಡೆಯಲಿದ್ದು, ಹೀಗಾಗಿ, ಹಿನ್ನಲೆಯಲ್ಲಿ ಜನವರಿ 6 ಮತ್ತು 7ರಂದು ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದರ ಜೊತೆಗೆ ವಸತಿ ವ್ಯವಸ್ಥೆ ಮಾಡಿರುವ ಶಾಲಾ-ಕಾಲೇಜು ಹಾಗೂ ವಸತಿ ನಿಲಯಗಳಿಗೆ ಜನವರಿ 4 ರಿಂದ 7ರವರಗೆ ರಜೆ ಘೋಷಿಸಲಾಗಿದೆ ಎಂದು ಹಾವೇರಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಅವರು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ವಸತಿ ವ್ಯವಸ್ಥೆ ಮಾಡಿರುವ ಹಾವೇರಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಗುದ್ಲೆಪ್ಪ ಹಳ್ಳಿಕೇರಿ ಪದವಿ ಪೂರ್ವ ಕಾಲೇಜ್, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಎಸ್‌.ಎಂ.ಎಸ್. ಪದವಿ ಪೂರ್ವ ಕಾಲೇಜು , ಎಸ್‌.ಜೆ.ಎಂ. ಪದವಿ ಪೂರ್ವ ಕಾಲೇಜುಗಳಿಗೆ ಜನವರಿ 4 ರಿಂದ 8 ರವರೆಗೆ ಪದವಿ ಪೂರ್ವ ಶಿಕ್ಷಣ ಜಂಟಿ ನಿರ್ದೇಶಕರು ರಜೆ ಘೋಷಣೆ ಮಾಡಿದ್ದಾರೆ.

ಸಮ್ಮೇಳನದಲ್ಲಿ ಭಾಗವಹಿಸುವವರಿಗೆ ವಸತಿ ವ್ಯವಸ್ಥೆ ಮಾಡಿರುವ ಶಾಲಾ-ಕಾಲೇಜುಗಳಿಗೆ ಜನವರಿ 4 ಮತ್ತು 5 ರಂದು ಹೆಚ್ಚುವರಿ ರಜೆ ಘೋಷಿಸಲಾಗಿದ್ದು, ಐದು ಪದವಿ ಪೂರ್ವ ಕಾಲೇಜುಗಳು ಹಾಗು ಶಾಲೆಗಳು ಹಾಗೂ ವಿವಿಧ ವಸತಿ ಶಾಲೆಗಳು ಸೇರಿ ಒಟ್ಟು 67 ಶಾಲೆಗಳಿಗೆ ಜನವರಿ 4 ರಿಂದ 7ರವರಗೆ ರಜೆ ಘೋಷಣೆ ಮಾಡಲಾಗಿದೆ.ಜನವರಿ 8 ಭಾನುವಾರ ಆಗಿರುವುದರಿಂದ ಸಾರ್ವತ್ರಿಕ ರಜೆ ದೊರೆಯಲಿದೆ.

ಶಾಲಾ ಶಿಕ್ಷಣ ಇಲಾಖೆಯ ಅಪರ ನಿರ್ದೇಶಕರು, ಸದರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು, ಹಾಗೂ ಮುಖ್ಯ ಶಿಕ್ಷಕರು ಸಮ್ಮೇಳನದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಜನವರಿ 6 ಮತ್ತು 7 ರಂದು ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಸದರಿ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು, ಇತರ ಸಿಬ್ಬಂದಿಗಳು ಈ ಸಮ್ಮೇಳನದಲ್ಲಿ ಭಾಗವಹಿಸುವುದನ್ನು ಅನ್ಯಕಾರ್ಯದ ನಿಮಿತ್ತ ಎಂದು ಪರಿಗಣಿಸಲಾಗುತ್ತದೆ ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ಪದವಿ ಪೂರ್ವ ಕಾಲೇಜು ಉಪನ್ಯಾಸಕರು ಕೂಡ ಸಮ್ಮೇಳನದಲ್ಲಿ ಭಾಗವಹಿಸಲು ನೆರವಾಗುವ ನಿಟ್ಟಿನಲ್ಲಿ ಹಾವೇರಿ ಜಿಲ್ಲೆಯ ಎಲ್ಲ ಪದವಿ ಕಾಲೇಜುಗಳಿಗೆ ಜನವರಿ 6 ಮತ್ತು 7 ರಂದು ರಜೆ ಘೋಷಿಸಲಾಗಿದೆ.

Leave A Reply

Your email address will not be published.