ಕೋವಿಡ್ ನ 2ನೇ ಬೂಸ್ಟರ್ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ಮಾಹಿತಿ..!!

ದೇಶದಲ್ಲಿ ಮತ್ತೊಮ್ಮೆ ವ್ಯಾಪಿಸುತ್ತಿರುವ ಕೋವಿಡ್ 19ರ ಕುರಿತಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ಮಾಹಿತಿಯೊಂದನ್ನು ಹೊರಡಿಸಿದೆ.

ದೇಶದಲ್ಲಿ ಪ್ರಸ್ತುತ ಕೋವಿಡ್ -19 ಪರಿಸ್ಥಿತಿಯನ್ನು ಆಧರಿಸಿ, ಎರಡನೇ ಬೂಸ್ಟರ್ ಡೋಸ್ ಅನ್ನು ನೀಡುವ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ.

ದೇಶದಾದ್ಯಂತ ಕೇವಲ 134 ಹೊಸ ಕರೋನ ವೈರಸ್ ಪ್ರಕರಣಗಳು ಕಳೆದ 24 ಗಂಟೆಗಳಲ್ಲಿ ದಾಖಲಾಗಿದ್ದು, ದೈನಂದಿನ ಧನಾತ್ಮಕ ಪ್ರಮಾಣವು ಶೇಕಡಾ 0.09 ರಷ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯವು ಒದಗಿಸಿದ ಮಾಹಿತಿಯ ಪ್ರಕಾರ, ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಇದುವರೆಗೆ ಒಟ್ಟು 220.11 ಕೋಟಿ ಲಸಿಕೆ ಡೋಸ್‌ಗಳನ್ನು ನೀಡಲಾಗಿದ್ದು, ಕಳೆದ 24 ಗಂಟೆಗಳಲ್ಲಿ ಒಟ್ಟು 45,769 ಡೋಸ್‌ಗಳನ್ನು ನೀಡಲಾಗಿದೆ.

Leave A Reply

Your email address will not be published.