ಕಟ್ಟಡ ಕಾರ್ಮಿಕರ ಮಕ್ಕಳಿಗೆ ಟ್ಯಾಬ್ ವಿತರಣೆ, ಅರ್ಜಿ ಆಹ್ವಾನ!!!
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ.
ಹೌದು!!! ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಟ್ಯಾಬ್ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಯೊಂದಿಗೆ ನೋಂದಾಯಿತ ಕಾರ್ಮಿಕರ ಗುರುತಿನ ಚೀಟಿಯ ಪ್ರತಿ ಜೊತೆಗೆ ನವೀಕರಣ ಗುರುತಿನ ಚೀಟಿಯ ಪ್ರತಿ, ಫಲಾನುಭವಿ ಹಾಗೂ ಮಗುವಿನ ಆಧಾರ್ ಕಾರ್ಡ್ ಪ್ರತಿ, ವಿದ್ಯಾರ್ಥಿ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ಮೂಲ ವ್ಯಾಸಂಗ ಪ್ರಮಾಣ ಪತ್ರ, ಸರ್ಕಾರದ ಯಾವುದಾದರೂ ಯೋಜನೆಯಲ್ಲಿ ಇದುವರೆಗೂ ಟ್ಯಾಬ್ ಪಡೆಯದಿರುವ ಬಗ್ಗೆ ಅಫಿಡವಿಟ್ ಸಲ್ಲಿಸಬೇಕಾಗುತ್ತದೆ.
ಈ ಕುರಿತಂತೆ ಹೆಚ್ಚಿನ ಮಾಹಿತಿಗೆ ಕಾರ್ಮಿಕ ಅಧಿಕಾರಿಯವರ ಕಚೇರಿ ಹಾಗೂ ಹಿರಿಯ ಕಾರ್ಮಿಕ ನಿರೀಕ್ಷಕರು, ಮಡಿಕೇರಿ ವೃತ್ತ, ಸೋಮವಾರಪೇಟೆ ವೃತ್ತ, ವಿರಾಜಪೇಟೆ ವೃತ್ತರವರ ಕಚೇರಿಯನ್ನು ಸಂಪರ್ಕಿಸಬಹುದಾಗಿದ್ದು ಈ ಬಗ್ಗೆ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ ಅವರು ಮಾಹಿತಿ ನೀಡಿದ್ದಾರೆ.
ಅರ್ಜಿ ಸಲ್ಲಿಸಲು ಜನವರಿ 15 ಕೊನೆಯ ದಿನವಾಗಿದ್ದು, ಮಂಡಳಿಯ ಅರ್ಹ ಕಾರ್ಮಿಕರು ಅರ್ಜಿ ಸಲ್ಲಿಸಿ ಇದರ ಸದುಪಯೋಗ ಪಡಿಸಿಕೊಳ್ಳಬಹುದು. ನೋಂದಣಿ ಪ್ರಕ್ರಿಯೆ ಹಿರಿತನದ ಅಧಾರದಲ್ಲಿ ಟ್ಯಾಬ್ ವಿತರಿಸಲಾಗುತ್ತದೆ. 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಫಲಾನುಭವಿಯ ಒಂದು ಮಗುವಿಗೆ ಮೊದಲ ಪ್ರಾಶಸ್ತ್ಯ ದೊರೆಯಲಿದ್ದು,ಕೊನೆಯ ದಿನಾಂಕ ಮುಗಿದ ನಂತರ ಬರುವ ಅರ್ಜಿ ಸ್ವೀಕಾರ ವಾಗುವುದಿಲ್ಲ ಎಂಬುದನ್ನು ಗಮನಿಸಬೇಕು.