ಪಡಿತರದಾರರಿಗೆ ಬಿಗ್ ಶಾಕ್: ಪಡಿತರದಾರರಿಗೆ 4 ಕೆಜಿ ಅಕ್ಕಿ ಕಡಿತ

ಬಡತನ ರೇಖೆಗಿಂತ ಕೆಳಗಿರುವ ಜನರ ಜೀವನ ಬಹಳ ಕಷ್ಟಕರ ಆಗಿರುತ್ತದೆ ಮತ್ತು ಮೂಲಭೂತ ಸೌಕರ್ಯ ಪಡೆದುಕೊಳ್ಳುವಲ್ಲಿ ಆರ್ಥಿಕವಾಗಿ ಅಶಕ್ತರಾಗಿರುತ್ತಾರೆ. ಹಾಗಾಗಿ ಬಡವರ ಜೀವನ ಸುಧಾರಿಸಿಕೊಳ್ಳಲು ಸರ್ಕಾರ ಹೆಚ್ಚಿನ ಪ್ರಯತ್ನ ಮಾಡುತ್ತಿದೆ ಅದಲ್ಲದೆ ಕೆಲವು ಸೌಲಭ್ಯಗಳನ್ನು ನೀಡಿ ಬಡವರನ್ನು ಪ್ರೋತ್ಸಾಹಿಸುತ್ತಿದೆ.
ಈಗಾಗಲೇ ನ್ಯಾಯಬೆಲೆ ಅಂಗಡಿ ಮತ್ತು ಸಹಕಾರ ಸಂಘಗಳಲ್ಲಿ ಬಿಪಿಎಲ್ ಪಡಿತರ ಚೀಟಿದಾರರಿಗೆ ಉಚಿತ ಅಕ್ಕಿ ವಿತರಿಸಲಾಗುತ್ತಿದೆ.

ಅದಲ್ಲದೆ ಈಗಾಗಲೇ ಕಳೆದ 2 ವರ್ಷಗಳಿಂದ 10 ಕೆಜಿ ಉಚಿತ ಅಕ್ಕಿ ನೀಡಲಾಗುತ್ತಿತ್ತು. ಮುಂದಿನ ತಿಂಗಳಿನಿಂದ ಪಡಿತರದಾರರಿಗೆ 4 ಕೆಜಿ ಅಕ್ಕಿ ಕಡಿತ ಮಾಡಲಾಗುತ್ತದೆ. ಹೌದು ಪಡಿತರದಾರರಿಗೆ 10 ಕೆಜಿ ಬದಲು 6 ಕೆಜಿ ಮಾತ್ರ ಅಕ್ಕಿ ವಿತರಣೆ ಮಾಡಲಾಗುತ್ತದೆ ಎಂದು ಆಹಾರ, ನಾಗರಿಕ ಸರಬರಾಜು & ಗ್ರಾಹಕರ ವ್ಯವಹಾರ ಇಲಾಖೆಯ ಜಂಟಿ ನಿರ್ದೇಶಕ ವಿಜಯ್ ಕುಮಾರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಪ್ರಸ್ತುತ 10,91,508 ಅಂತ್ಯೋದಯ ಕಾರ್ಡುಗಳಿದ್ದು 44,83,745 ಮಂದಿ ಫಲಾನುಭವಿಗಳಿದ್ದಾರೆ. ಹಾಗೆಯೇ 1,15,93,227 ಬಿಪಿಎಲ್‌ ಕಾರ್ಡುಗಳಿದ್ದು 3,87,79,975 ಮಂದಿ ಫಲಾನುಭವಿಗಳಿದ್ದಾರೆ. ಹೀಗೆ ಒಟ್ಟು 4,32,63,720 ಮಂದಿ ಫಲಾನುಭವಿಗಳು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅನ್ವಯ ಪ್ರತಿ ತಿಂಗಳು ತಲಾ 6 ಕೆಜಿ ಅಕ್ಕಿಯನ್ನು ಪಡೆಯಲಿದ್ದಾರೆ. ಕೇಂದ್ರ ಸರ್ಕಾರವೇ ರಾಜ್ಯದ 4.32 ಕೋಟಿಗೂ ಅಧಿಕ ಜನರಿಗೆ ಪ್ರತಿ ಯೂನಿಟ್‌ಗೆ ತಲಾ 5 ಕೆಜಿ ಅಕ್ಕಿ ಉಚಿತವಾಗಿ ಹಂಚಿಕೆ ಮಾಡಲಿದ್ದು ಇದರಿಂದ ರಾಜ್ಯಕ್ಕೆ ಪ್ರತಿ ತಿಂಗಳು ಸುಮಾರು 12.90 ಕೋಟಿ ರೂ.ನಂತೆ ವರ್ಷಕ್ಕೆ 150ರಿಂದ 200 ಕೋಟಿ ರೂ ಉಳಿತಾಯವಾಗಲಿದೆ ಎಂದು ಮಾಹಿತಿ ನೀಡಲಾಗಿದೆ .

ವರದಿ ಪ್ರಕಾರ ಈಗಾಗಲೇ ರಾಜ್ಯದಲ್ಲಿ ಕೇಂದ್ರದ 1.2 ಕೋಟಿ BPL ಕಾರ್ಡ್​ದಾರರಿದ್ದಾರೆ. ಪ್ರಸ್ತುತ ಕೇಂದ್ರವೇ ನೇರವಾಗಿ 5 ಕೆಜಿ ಅಕ್ಕಿ ಉಚಿತವಾಗಿ ನೀಡುತ್ತಿದೆ. ರಾಜ್ಯ ಸರ್ಕಾರ 1 ಕೆಜಿ ಅಕ್ಕಿ ಖರೀದಿಸಿ ಉಚಿತವಾಗಿ ನೀಡಲಿದೆ. ಈ ಹಿಂದೆ ರಾಜ್ಯ ಸರ್ಕಾರ ಕೇಂದ್ರದಿಂದ ಅಕ್ಕಿ ಖರೀದಿಸುತ್ತಿತ್ತು. ಪ್ರತಿ ಕೆಜಿಗೆ 3 ರೂ. ಕೊಟ್ಟು ಖರೀದಿಸಿ ಉಚಿತವಾಗಿ ನೀಡುತ್ತಿತ್ತು ಎಂದು ವರದಿ ಮೂಲಕ ತಿಳಿದಿದೆ .

ಈ ಮೊದಲು ಕೊವಿಡ್‌ ಹಿನ್ನೆಲೆ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಯೋನೆಯಡಿ ಪ್ರತಿ ಫಲಾನುಭವಿಗಳಿಗೆ ತಲಾ 5 ಕೆಜಿ ಅಕ್ಕಿಯನ್ನು ವಿತರಿಸುತ್ತಿತ್ತು. ಇದರೊಂದಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅನ್ವಯ ರಾಜ್ಯ ಸರ್ಕಾರವೂ ಪ್ರತಿ ಫಲಾನುಭವಿಗೆ ತಲಾ 5 ಕೆಜಿ ಅಕ್ಕಿ ಹಂಚಿಕೆ ಮಾಡುತ್ತಿತ್ತು.

ಇನ್ನು ಮುಂದೆ ಹತ್ತು ಕೆಜಿ ಅಕ್ಕಿ ವಿತರಣೆ ನಿಲ್ಲಿಸಿ ಮಾಡಿ ಕೇವಲ 6 ಕೆಜಿ ಅಕ್ಕಿ ನೀಡಲಾಗುತ್ತೆ. ಕೇಂದ್ರ ಸರ್ಕಾರವೇ 5 ಕೆಜಿ ಉಚಿತವಾಗಿ ಅಕ್ಕಿ ವಿತರಣೆ ಮಾಡಲಿದ್ದು ರಾಜ್ಯ ಸರ್ಕಾರ ಒಂದು ಕೆಜಿ ಅಕ್ಕಿ, ಖರೀದಿ ಮಾಡಿ ಉಚಿವಾಗಿ ವಿತರಣೆ ಮಾಡಲಿದೆ ಎಂದು ಆಹಾರ, ನಾಗರಿಕ ಸರಬರಾಜು & ಗ್ರಾಹಕರ ವ್ಯವಹಾರ ಇಲಾಖೆಯ ಜಂಟಿ ನಿರ್ದೇಶಕ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.

Leave A Reply

Your email address will not be published.