BSNL Recruitment 2023: 11 ಸಾವಿರ ಹುದ್ದೆ, BSNL ನಿಂದ ಭರ್ಜರಿ ಉದ್ಯೋಗವಕಾಶ | ಮಾಸಿಕ 40,000 ಸಂಬಳ

BSNL Recruitment 2023: ಭಾರತ್ ಸಂಚಾರ ನಿಗಮ ಲಿಮಿಟೆಡ್(Bharat Sanchar Nigam Limited -BSNL) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿ ಇಲ್ಲಿದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಸುವರ್ಣಾವಕಾಶ.

 

ಸಂಸ್ಥೆ : ಭಾರತ್ ಸಂಚಾರ ನಿಗಮ ಲಿಮಿಟೆಡ್
ಹುದ್ದೆ : ಜೂನಿಯರ್ ಟೆಲಿಕಾಂ ಆಫೀಸರ್
ಒಟ್ಟು ಹುದ್ದೆ : 11,705
ವೇತನ ಮಾಸಿಕ : 16,400-40,500 ರೂ.
ಉದ್ಯೋಗದ ಸ್ಥಳ : ಭಾರತ
ಅರ್ಜಿ ಸಲ್ಲಿಕೆ ಬಗೆ : ಆನ್​ಲೈನ್​/ಆಫ್​ಲೈನ್
ಕೊನೆಯ ದಿನಾಂಕ : ಜನವರಿ 31, 2023

ವಯೋಮಿತಿ : ಜನವರಿ 31, 2023ಕ್ಕೆ ಕನಿಷ್ಠ 20 ವರ್ಷ ಮತ್ತು ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು-3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PWD(ಜನರಲ್) ಅಭ್ಯರ್ಥಿಗಳು-10 ವರ್ಷ
PWD (OBC) ಅಭ್ಯರ್ಥಿಗಳು- 13 ವರ್ಷ
PWD (SC/ST) ಅಭ್ಯರ್ಥಿಗಳು- 15 ವರ್ಷ

ವಿದ್ಯಾರ್ಹತೆ : ಅಭ್ಯರ್ಥಿಗಳು ಕಡ್ಡಾಯವಾಗಿ ದೂರಸಂಪರ್ಕ/ಎಲೆಕ್ಟ್ರಾನಿಕ್ಸ್/ರೇಡಿಯೊ/ಕಂಪ್ಯೂಟರ್/ಎಲೆಕ್ಟ್ರಿಕಲ್/ಐಟಿ/ಇನ್‌ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್‌ನಲ್ಲಿ ಬಿ.ಇ ಅಥವಾ ಬಿ.ಟೆಕ್, ಎಲೆಕ್ಟ್ರಾನಿಕ್ಸ್/ಸಿಎಸ್‌ಇಯಲ್ಲಿ ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.

ವೇತನ : ಜೂನಿಯರ್ ಟೆಲಿಕಾಂ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 16,400-40,500 ರೂ. ಸಂಬಳ ಕೊಡಲಾಗುತ್ತದೆ.

ಅರ್ಜಿ ಶುಲ್ಕ : ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ. ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ ಕೊಡಲಾಗುತ್ತದೆ. ಅದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಶಾರ್ಟ್​​ಲಿಸ್ಟ್​ ಮಾಡಿ, ಸಂದರ್ಶನಕ್ಕೆ ಕರೆಯಲಾಗುತ್ತದೆ.

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಜನವರಿ 31ರೊಳಗೆ ಕಳುಹಿಸಬೇಕು. ಜನವರಿ 31, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್​/ಆಫ್​ಲೈನ್(Online/Offline) ಎರಡರ ಮೂಲಕವೂ ಅರ್ಜಿ ಹಾಕಬಹುದು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಬಿಎಸ್​ಎನ್​ಎಲ್(BSNL)​ನ ಅಧಿಕೃತ ವೆಬ್​ಸೈಟ್​​ bsnl.co.inಗೆ ಭೇಟಿ ನೀಡಬಹುದು. ಡಿಸೆಂಬರ್ 31, 2022ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ.

ವಿಳಾಸ : ನೋಂದಾಯಿತ ಕಚೇರಿ BSNL
ನವದೆಹಲಿ

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್‌ ಕ್ಲಿಕ್‌ ಮಾಡಿ

Leave A Reply

Your email address will not be published.