ಚಿತ್ರದುರ್ಗ ಮುರುಘಾ ಶರಣರ ಕೇಸ್ ಗೆ ಮೇಜರ್ ಟ್ವಿಸ್ಟ್ ! ಅಚ್ಚರಿ ಮೂಡಿಸಿದ ಜಿಲ್ಲಾಸ್ಪತ್ರೆ ವೈದ್ಯರ ವರದಿ!

ಚಿತ್ರದುರ್ಗದ ಮುರುಘಾ ಮಠದ ಪೀಠಾಧ್ಯಕ್ಷರಾಗಿದ್ದ ಶಿವಮೂರ್ತಿ ಮುರುಘಾ ಶರಣರು ತಮ್ಮದೇ ಮಠದ ಹಾಸ್ಟೆಲ್ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ್ದಾರೆಂಬ ಆರೋಪದ ಮೇಲೆ ಅವರ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಸದ್ಯ ಅವರು ಜೈಲು ಸೇರಿ ತನಿಖೆ ನಡೆಯುತ್ತಿರುವುದು ಎಲ್ಲರಿಗೂ ತಿಳಿದ ಸಂಗತಿ. ಆದರೆ ಇದೀಗ ಜಿಲ್ಲಾಸ್ಪತ್ರೆಯ ವೈದ್ಯರು ನೀಡಿರುವ ವರದಿ ಅಚ್ಚರಿ ಮೂಡಿಸಿದೆ.

ಹೌದು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ವೈದ್ಯರು ನೀಡಿರುವ ವರದಿಯಿಂದ ಮುರುಘಾ ಶರಣರ ಈ ಕೇಸ್ ಗೆ ಮೇಜರ್ ಟ್ವೀಸ್ಟ್ ಸಿಗುವ ಸಾಧ್ಯತೆ ಇದೆ. ಪೋಕ್ಸೋ ಪ್ರಕರಣದ ಇಬ್ಬರು ಸಂತ್ರಸ್ತೆ ಬಾಲಕಿಯರ ಮೆಡಿಕಲ್ ರಿಪೋರ್ಟ್​​​ನಲ್ಲಿ ಅತ್ಯಾಚಾರ ಆಗಿಲ್ಲ, ವಿದ್ಯಾರ್ಥಿನಿಯರ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ ಎಂಬ ವರದಿ ಬಂದಿರುವುದಾಗಿ ವೈದ್ಯರು ಹೇಳುತ್ತಿರುವುದು ಇದಕ್ಕೆ ಕಾರಣವಾಗಿದೆ.

ಸದ್ಯ ವೈದ್ಯರು ಕೋರ್ಟ್​​​ಗೆ ಸಂತ್ರಸ್ತ ಬಾಲಕಿಯರ ಮೆಡಿಕಲ್ ರಿಪೋರ್ಟ್ ಸಲ್ಲಿಸಿದ್ದಾರೆ. ಈಗಾಗಲೇ ಪೊಲೀಸರು ಸಲ್ಲಿಸಿದ ಚಾರ್ಜ್ ಶೀಟ್​ನಲ್ಲಿಯೂ ಮೆಡಿಕಲ್ ರಿಪೋರ್ಟ್ ಬಗ್ಗೆ ಉಲ್ಲೇಖಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮುರುಘಾಶ್ರೀ ವಿರುದ್ದದ ಫೋಕ್ಸೋ ಕೇಸ್ ಗೆ ಟ್ವಿಸ್ಟ್ ಸಿಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ

ಗೃಹ ಸಚಿವ ಆರಗ ಜ್ಞಾನೇಂದ್ರ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ಚಿತ್ರದುರ್ಗ‌ ಜಿಲ್ಲಾಸ್ಪತ್ರೆ ವೈದ್ಯರ ವರದಿ ಬಗ್ಗೆ ಮಾಹಿತಿ ಇಲ್ಲ. ಮುರುಘಾಶ್ರೀ ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ. ತನಿಖೆಯೂ ನಡೆಯುತ್ತಿದೆ. ಪ್ರಕರಣದ ತನಿಖೆ ವೇಳೆ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ. ತನಿಖೆ ನಡೆಸಲು ಪೊಲೀಸರಿಗೆ ಮುಕ್ತ ಅವಕಾಶ ನೀಡಲಾಗಿದೆ. ಅಂತೆ ಕಂತೆ ವಿಚಾರಗಳಿಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದಿದ್ದಾರೆ

Leave A Reply

Your email address will not be published.