PM Kisan : ರೈತ ಸಮುದಾಯಕ್ಕೆ ಮುಖ್ಯವಾದ ಮಾಹಿತಿ

ರೈತರಿಗೆ ಕೃಷಿಯಲ್ಲಿ ನಷ್ಠಗಳು ಪ್ರತಿಯೊಂದು ವರ್ಷವೂ ಒಂದಲ್ಲಾ ಒಂದು ಕಾರಣದಿಂದ ನಡೆಯುತ್ತಲೇ ಇದೆ. ಹಾಗಾಗಿ ರೈತರು ಸಂಕಷ್ಟದಲ್ಲಿದ್ದಾಗ ಆರ್ಥಿಕ ನೆರವು ನೀಡುವ ಯೋಜನೆಗಳನ್ನ ಜಾರಿಗೆ ತರುತ್ತಿದ್ದು, ರೈತರ ಸಮಸ್ಯೆ ಪರಿಹರಿಸಲು ಕೆಲಸ ಮಾಡುತ್ತಿದೆ.

ಇದೀಗ ಪಿ.ಎಂ.ಕಿಸಾನ್ ಯೋಜನೆಯಡಿ ಲಾಭ ಪಡೆಯದೆ ವಂಚಿತರಾಗಿರುವ ಅರ್ಹ ಹೊಸ ಫಲಾನುಭವಿಗಳು ಈ ಯೋಜನೆಯಡಿ ಇ-ಕೆವೈಸಿ ಹಾಗೂ ನೋಂದಣಿ ಮಾಡಿಸಿಕೊಳ್ಳುವಂತೆ ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೌದು ಜಂಟಿ ಖಾತೆದಾರರು, ಪೌತಿ ಕಾರಣದಿಂದಾಗಿ ಖಾತೆ ವರ್ಗಾವಣೆಯಾಗಿರುವ ಫಲಾನುಭವಿಗಳು, ಒಂದೇ ಕುಟುಂಬದ ಸದಸ್ಯರೆಂದು ಭೂಹಿಡುವಳಿ ಹೊಂದಿರುವ ವಯಸ್ಕ ಮಕ್ಕಳು, ಹಿರಿಯ ನಾಗರೀಕರು ಹಾಗೂ ಮಾಹಿತಿಯ ಕೊರತೆಯಿಂದ ಈ ಎಲ್ಲಾ ಅರ್ಹ ಕಾರಣಗಳಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತ ಕುಟುಂಬಗಳು ಹಾಗೂ ಇತರೆ ಬಾಕಿ ಉಳಿದಿರುವ ಅರ್ಹ ಫಲಾನುಭವಿಗಳ ನೊಂದಣಿ ಮಾಡಿಸಲು ಹಾಗೂ ಇ-ಕೆವೈಸಿ ಮಾಡಿಸುವಂತೆ ರೈತ ಬಾಂಧವರಿಗೆ ಈ ಮೂಲಕ ಮಾಹಿತಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂದಿಸಿದ ರೈತ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನಮ್ಮ ವಾಟ್ಸಾಪ್ ಗ್ರೂಪ್ ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ : https://chat.whatsapp.com/J4dNyzsaxZ54FlSgJ1ezLO

Leave A Reply

Your email address will not be published.