ಪ್ರವೀಣ್ ನೆಟ್ಟಾರ್ ಹತ್ಯೆ | ತಲೆಮರೆಸಿಕೊಂಡ ಆರೋಪಿಗಳ ಮಾಹಿತಿ ನೀಡುವವರಿಗೆ ತಲಾ 5 ಲಕ್ಷ ಘೋಷಣೆ !

ಮಂಗಳೂರು : ಪ್ರವೀಣ್‌ ನೆಟ್ಟಾರು ಹತ್ಯೆ ರಾಜ್ಯದಾದ್ಯಂತ ಸಂಚಲನ ಮೂಡಿಸಿದ ಘಟನೆ ಎಂದೇ ಹೇಳಬಹುದು. ಓರ್ವ ಹಿಂದೂ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಿದ್ದು, ಎಲ್ಲಾ ಹಿಂದೂ ಕಾರ್ಯಕರ್ತರನ್ನು ಕೆರಳಿಸಿತ್ತು. ಅನಂತರ ನಡೆದ ಘಟನೆಗಳಿಂದ ರಾಜಕೀಯ ಧುರೀಣರು ಕೂಡಾ ಭಯಗೊಂಡಿದ್ದು ಸುಳ್ಳಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ನಿವಾಸಿ ಪ್ರವೀಣ್‌ ನೆಟ್ಟಾರು ಹತ್ಯೆ ನಂತರ ಅನೇಕ ರಾಜಕೀಯ ವ್ಯಕ್ತಿಗಳು ಸಿಎಂ ಎಲ್ಲರೂ ಬಂದು ಮನೆಮಂದಿಗೆ ಸಾಂತ್ವಾನ ಹೇಳಿ, ಆರೋಪಿಗಳನ್ನು ಪತ್ತೆ ಹಚ್ಚುವ ಭರವಸೆ ನೀಡಿದ್ದರು. ಆದರೆ ಈ ಪ್ರಕರಣದಲ್ಲಿ ಇಲ್ಲಿಯವರೆಗೂ ಇನ್ನೂ ಕೂಡಾ ಕೆಲವೊಂದು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಕಳೆದ ವರ್ಷ ಜುಲೈ 26ರಂದು ರಾತ್ರಿ ಪ್ರವೀಣ್‌ ನೆಟ್ಟಾರು ಅವರನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಎನ್ಐಎ ತಂಡ ತನಿಖೆ ನಡೆಸುತ್ತಿದೆ.

ಪ್ರವೀಣ್‌ ನೆಟ್ಟಾರು ಅವರ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ನಾಲ್ವರು ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯ ಕಾರ್ಯಕರ್ತರನ್ನು ಪತ್ತೆಹಚ್ಚಲು ಸಹಾಯ ನೀಡುವವರಿಗೆ ರಾಷ್ಟ್ರೀಯ ತನಿಖಾ ಏಜೆನ್ಸಿ (ಎನ್‌ಐಎ) ಪಾರಿತೋಷಕ ಘೋಷಿಸಿದೆ ಎಂದು ತಿಳಿದು ಬಂದಿದೆ.

ಸುಳ್ಯ ಬುದು ಹೌಸ್‌ನ ಎಸ್‌. ಮುಹಮ್ಮದ್‌ ಮುಸ್ತಫ ಯಾನೆ ಮುಸ್ತಫ ಪೈಚಾರ್‌ ಮತ್ತು ಮಡಿಕೇರಿಯ ಎಂ.ಎಚ್‌. ತೌಫಲ್‌ ಕುರಿತು ಮಾಹಿತಿ ನೀಡುವವರಿಗೆ ತಲಾ 5 ಲಕ್ಷ ರೂ. ನೀಡಲಾಗುವುದು. ದಕ್ಷಿಣ ಕನ್ನಡದ ಕಲ್ಲುಮುಟ್ಟಲು ವೀಟಿಲ್‌ ಎಂ.ಆರ್‌. ಉಮ್ಮರ್‌ ಫಾರೂಕ್‌ ಯಾನೆ ಉಮ್ಮರ್‌, ಸಿದ್ದಿಕ್‌ ಯಾನೆ ಪೈಂಟರ್‌ ಸಿದ್ದಿಕ್‌ ಯಾನೆ ಗುಜರಿ ಸಿದ್ದಿಕ್‌ ಕುರಿತು ಮಾಹಿತಿ ನೀಡುವವರಿಗೆ ತಲಾ 2 ಲಕ್ಷ ರೂ. ಪಾರಿತೋಷಕ ನೀಡಲಾಗುವುದು ಎಂದು ನೊಟೀಸ್‌ನಲ್ಲಿ ತಿಳಿಸಿದೆ.

ಅಂದ ಹಾಗೆ ಪ್ರವೀಣ್‌ ನೆಟ್ಟಾರು ಆರೋಪಿಗಳು ಕೇರಳದಲ್ಲಿ ತಲೆಮರೆಸಿಕೊಂಡಿರುವ ಶಂಕೆಯ ಹಿನ್ನೆಲೆಯಲ್ಲಿ ನೋಟಿಸಿನ ಪ್ರತಿಗಳನ್ನು ಕಲ್ಲಿಕೋಟೆ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಲಗತ್ತಿಸಲಾಗಿದೆ.

Leave A Reply

Your email address will not be published.