PSI ನೇಮಕಾತಿ ಹಗರಣ ಪ್ರಕರಣ : ದಿವ್ಯಾಹಾಗರಗಿ ಸೇರಿ 26 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು
ಬೆಂಗಳೂರು : 2021 ರ ಅಕ್ಟೋಬರ್ ತಿಂಗಳಲ್ಲಿ 545 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ನಡೆದಿತ್ತು. ಈ ಅವಧಿಯಲ್ಲಿ ಹಗರಣದಲ್ಲಿ ದಿವ್ಯಾ ಹಾಗರಗಿ ಸೇರಿದಂತೆ 26 ಆರೋಪಿಗಳಿಗೆ ನ್ಯಾಯಾಲಯದಿಂದ ಜಾಮೀನು ನೀಡಲಾಗಿದೆ.
ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಹಗರಣದ 26 ಆರೋಪಿಗಳಿಗೆ ನ್ಯಾಯಾಲಯದಿಂದ ಜಾಮೀನು ಸಿಕ್ಕಿದ್ದು ಈ ಪೈಕಿ ದಿವ್ಯಾ ಹಾಗರಗಿ ಅವರೂ ಸೇರಿದ್ದಾರೆ. ರಾಜ್ಯದಲ್ಲಿ ತೀವ್ರ ಚರ್ಚೆಯಲ್ಲಿದ್ದ ಪಿಎಸ್ಐ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿದ್ದ 26 ಆರೋಪಿಗಳಿಗೆ ಗುರುವಾರ ಷರತ್ತುಬದ್ಧ ಜಾಮೀನು ಮಂಜೂರಾಗಿದೆ. ಕಲಬುರಗಿ ಸೆಷನ್ಸ್ ಕೋರ್ಟ್ ಜಡ್ಜ್ ಕೆ.ಬಿ.ಪಾಟೀಲ್ ಅವರು ಪ್ರಕರಣದ ಆರೋಪಿಗಳಿಗೆ ಜಾಮೀನು ನೀಡಿದ್ದಾರೆ.
ಕಿಂಗ್ಪಿನ್ ದಿವ್ಯಾ ಹಾಗರಗಿ, ಮಂಜುನಾಥ ಮೇಳಕುಂದಿ, ಡಿವೈಎಸ್ಪಿ ಮಲ್ಲಿಕಾರ್ಜುನ ಸೇರಿದ್ದಾರೆ. ಪಿಎಸ್ಐ ನೇಮಕಾತಿ ಹಗರಣದಲ್ಲಿ ಈವರೆಗೆ 36 ಜನರಿಗೆ ಜಾಮೀನು ಸಿಕ್ಕಿದೆ. 8 ಅಭ್ಯರ್ಥಿಗಳು, 5 ಪರೀಕ್ಷಾ ಮೇಲ್ವಿಚಾರಕಿಯರು, 3 ಪೊಲೀಸ್ ಇಲಾಖೆ ಅಧಿಕಾರಿಗಳು, ಮಧ್ಯವರ್ತಿಗಳು ಸೇರಿ 26 ಜನರಿಗೆ ಜಾಮೀನು ನೀಡಲಾಗಿದೆ.