ಮಹಿಳೆಯರೇ ಉಚಿತ ಹೊಲಿಗೆಯಂತ್ರಕ್ಕಾಗಿ ಇಲ್ಲಿ ಅಪ್ಲೈ ಮಾಡಿ |

ಸ್ವಂತ ಉದ್ಯೋಗ ಮಾಡಿ ಸ್ವಾವಲಂಬಿಯಾಗಿ ಬದುಕಬೇಕೆನ್ನುವ ಆಸೆ ಎಲ್ಲಾ ಮಹಿಳೆಯರಿಗೆ ಇದೆ. ತಾವೂ ಆರ್ಥಿಕವಾಗಿ ಸದೃಢವಾಗಬೇಕೆಂಬ ಬಯಕೆ ಇರುತ್ತದೆ. ಬಹುತೇಕ ಮಹಿಳೆಯರು ಒಂದಲ್ಲ ಒಂದು ಸಮಯದಲ್ಲಿ ಹೊಲಿಗೆ ಕಲಿತಿರುತ್ತಾರೆ. ಏನೂ ಗೊತ್ತಿಲ್ಲದಿದ್ದರೂ ಹರಿದ ಬಟ್ಟೆಗೆ ಹೊಲಿಗೆ ಹಾಕುವಷ್ಟು ಕಲಿತಿದ್ದೇನೆ ಎನ್ನುವ ಮಹಿಳೆಯರು ತುಂಬಾ ಮಂದಿ ಇದ್ದಾರೆ.

ಹೊಲಿಗೆ ಎಂದೂ ಬೇಡಿಕೆ ಕಳೆದುಕೊಳ್ಳದ ಉದ್ಯೋಗ. ಎಲ್ಲ ಕಾಲದಲ್ಲೂ ಇದಕ್ಕೆ ಬೇಡಿಕೆಯಿದೆ. ಕೆಲ ಮಹಿಳೆಯರಿಗೆ ಸಂಪೂರ್ಣ ಹೊಲಿಗೆ ತಿಳಿದಿದ್ದರೂ ಮನೆಯಲ್ಲಿ ಮಶಿನ್ ಇರುವುದಿಲ್ಲ. ಅದಕ್ಕೆ ಹೂಡಿಕೆ ಮಾಡಿ ಉದ್ಯೋಗ ಶುರು ಮಾಡುವಷ್ಟು ಹಣವಿರುವುದಿಲ್ಲ. ನೀವೂ ಅಂಥವರಾಗಿದ್ದರೆ ನಿಮಗೊಂದು ಖುಷಿ ಸುದ್ದಿಯಿದೆ. ನೀವೂ ಕೂಡ ಹೊಲಿಗೆ ಮಶಿನ್ ಖರೀದಿ ಮಾಡಿ, ನಿಮ್ಮ ಸ್ವಂತ ಉದ್ಯೋಗ ಆರಂಭಿಸಬಹುದು. ಕೇಂದ್ರ ಸರ್ಕಾರ ಅದಕ್ಕೆ ನೆರವು ನೀಡುತ್ತದೆ.

ಪಿಎಂ ಉಚಿತ ಹೊಲಿಗೆ ಯಂತ್ರ ಯೋಜನೆ 2022 ಅಡಿಯಲ್ಲಿ ಮಹಿಳೆಯರು ಹೊಲಿಗೆ ಮಶಿನ್ ಪಡೆಯಬಹುದು.

ಮಹಿಳೆಯರು ಈ ಯೋಜನೆಯಡಿ ಅರ್ಜಿ ಸಲ್ಲಿಸಿದ್ರೆ ಸಾಕು. ಪ್ರತಿ ರಾಜ್ಯದ 50,000 ಮಹಿಳೆಯರ ಅನುಕೂಲಕ್ಕಾಗಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಪ್ರಧಾನಮಂತ್ರಿ ಉಚಿತ ಹೊಲಿಗೆ ಯಂತ್ರ ಯೋಜನೆಯು ದೇಶದ ಮಹಿಳೆಯರಿಗೆ ಆರ್ಥಿಕವಾಗಿ ಸ್ವತಂತ್ರರಾಗಲು ಅವಕಾಶ ನೀಡುತ್ತದೆ. ಇದು ಭಾರತದ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಉತ್ತಮ ಹೆಜ್ಜೆಯಾಗಿದೆ. ಪ್ರಧಾನ ಮಂತ್ರಿ ಉಚಿತ ಹೊಲಿಗೆ ಯಂತ್ರ ಯೋಜನೆ 2022 ರ ಅಡಿಯಲ್ಲಿ 20ರಿಂದ 40 ವರ್ಷ ವಯಸ್ಸಿನ ಮಹಿಳೆಯರು ಹೊಲಿಗೆ ಯಂತ್ರವನ್ನು ಪಡೆಯಲು ಅರ್ಹರು. ಇದಕ್ಕೆ ಮಹಿಳೆಯರು ಒಂದು ರೂಪಾಯಿ ಖರ್ಚು ಕೂಡ ಮಾಡಬೇಕಾಗಿಲ್ಲ.

ಟೈಲರಿಂಗ್‌ನಲ್ಲಿ ಪ್ರತಿಭೆಯನ್ನು ಹೊಂದಿರುವ ಅನೇಕ ಮಂದಿ ಮಹಿಳೆಯರು ನಮ್ಮ ನಡುವೆ ಇದ್ದಾರೆ. ಆದರೆ ಒಂದಲ್ಲೊಂದು ಆರ್ಥಿಕ ಸಮಸ್ಯೆಯಿಂದ ಯಂತ್ರಗಳನ್ನು ಖರೀದಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಸರ್ಕಾರವು ಉಚಿತ ಹೋಲಿಗೆ ಯಂತ್ರಗಳನ್ನ ವಿತರಿಸುವ ಮೂಲಕ ಬಡ ಮಹಿಳೆಯರಿಗೆ ನೆರವು ನೀಡುವ ಉದ್ದೇಶವನ್ನು ಹೊಂದಿದೆ. ಅದರಂತೆ, ನೀವು ಕೂಡ ಕರ್ನಾಟಕ ಸರ್ಕಾರ ನೀಡುವ ಉಚಿತ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಉಚಿತ ಹೊಲಿಗೆ ಯಂತ್ರ ಪಡೆಯಲು ಅಗತ್ಯವಿರುವ ದಾಖಲೆ : ಗ್ರಾಮೀಣ ಪ್ರದೇಶದ ಹಾಗೂ ನಗರ ಪ್ರದೇಶದ ಮಹಿಳೆಯರೆಲ್ಲರೂ ಈ ಯೋಜನೆಯಡಿ ಉಚಿತ ಹೊಲಿಗೆ ಯಂತ್ರವನ್ನು ಪಡೆಯಬಹುದು. ಈ ಯೋಜನೆಯ ಲಾಭ ಪಡೆಯಲು ಆಧಾರ್ ಕಾರ್ಡ್, ಜನ್ಮ ದಿನಾಂಕ ದಾಖಲೆ, ಆದಾಯ ಪ್ರಮಾಣಪತ್ರ, ಮೊಬೈಲ್ ಸಂಖ್ಯೆ, ಪಾಸ್‌ಪೋರ್ಟ್ ಗಾತ್ರದ ಫೋಟೋ, ಅಂಗವಿಕಲರಿಗೆ ವಿಶಿಷ್ಟ ಅಂಗವಿಕಲ ಐಡಿ ಮತ್ತು ವಿಧವೆಯರಿಗೆ ವಿಧವೆ ಪ್ರಮಾಣಪತ್ರದ ಅಗತ್ಯವಿದೆ.

ಉಚಿತ ಹೊಲಿಗೆ ಯಂತ್ರ ಪಡೆಯಲು ಬೇಕಾದ ಅರ್ಹತೆಗಳು

* ಮಹಿಳೆಯರು ಮಾತ್ರ ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದು
* ಅರ್ಜಿದಾರರು ಕರ್ನಾಟಕದ ಖಾಯಂ ಪ್ರಜೆಯಾಗಿರಬೇಕು.
* ಅಭ್ಯರ್ಥಿಯು ಬಡತನ ರೇಖೆಗಿಂತ ಕೆಳಗಿರಬೇಕು.
* ಕುಟುಂಬದ ಆದಾಯವು 12,000 ರೂಪಾಯಿಕ್ಕಿಂತ ಕಡಿಮೆ ಇರಬೇಕು.
* ಮಹಿಳೆಯರು ದುಡಿಯುವ ವರ್ಗದಲ್ಲಿ ಕೆಲಸ ಮಾಡಲು ಸಮರ್ಥರಾಗಿದ್ದರೆ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
* ಈ ಯೋಜನೆಯಡಿಯಲ್ಲಿ ಮಹಿಳೆಯರ ಕನಿಷ್ಠ ವಯಸ್ಸು 20 ಇರಬೇಕು. ಇನ್ನು ಗರಿಷ್ಠ ವಯಸ್ಸು 49.
* ಅಭ್ಯರ್ಥಿಯು ಟೈಲರಿಂಗ್‌ನಲ್ಲಿ ಪ್ರತಿಭೆಯನ್ನು ಹೊಂದಿರಬೇಕು.

ಈ ಯೋಜನೆಯ ಲಾಭ ಪಡೆಯಲು, ಮೊದಲು ಯೋಜನೆಯ ಅಧಿಕೃತ ವೆಬ್‌ಸೈಟ್‌ National Portal of India ಗೆ ಭೇಟಿ ನೀಡಿ. https://www.india.gov.in/  ಪುಟವನ್ನ ತೆರೆಯಿರಿ. ಈಗ ಉಚಿತ ಹೊಲಿಗೆ ಯಂತ್ರ ಯೋಜನೆ ಕರ್ನಾಟಕದ ಲಿಂಕ್ ಆನ್ ಲೈನ್ ಅರ್ಜಿ ನಮೂನೆ ಇರುತ್ತದೆ. ಆ ಲಿಂಕ್ ಕ್ಲಿಕ್ ಮಾಡಿ. ಅದರ ನಂತರ ಅರ್ಜಿ ನಮೂನೆ ಪರದೆಯ ಮೇಲೆ ತೆರೆಯುತ್ತದೆ. ಅರ್ಜಿ ನಮೂನೆಯ ಕೆಳಗಿರುವ ಡೌನ್ ಲೋಡ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಮತ್ತು ಎಲ್ಲಾ ಫಾರ್ಮ್‌ಗಳನ್ನು ಭರ್ತಿ ಮಾಡಿ. ಹೆಸರು, ವಯಸ್ಸು, ಮೊಬೈಲ್ ಸಂಖ್ಯೆ, ವಿಳಾಸ, ಆಧಾರ್ ಸಂಖ್ಯೆ ಮತ್ತು ಇತರ ಅಗತ್ಯ ಮಾಹಿತಿಯಂತಹ ನಿಮ್ಮ ಎಲ್ಲಾ ವೈಯಕ್ತಿಕ ವಿವರಗಳನ್ನು ಇಲ್ಲಿ ನಮೂದಿಸಬೇಕು. ಅರ್ಜಿ ನಮೂನೆಯನ್ನು ಪೂರ್ಣಗೊಳಿಸಿದ ನಂತರ ಎಲ್ಲಾ ದಾಖಲೆಗಳನ್ನು ಅರ್ಜಿ ನಮೂನೆಯೊಂದಿಗೆ ಲಗತ್ತಿಸಿಬೇಕು.

ಅಧಿಕೃತ ವೆಬ್‌ಸೈಟ್ www.india.gov.in ಗೆ ಹೋಗಿ ಅರ್ಜಿ ಸಲ್ಲಿಸಬೇಕು. ವೆಬ್‌ಸೈಟ್‌ನ ಉಚಿತ ಹೊಲಿಗೆ ಪೂರೈಕೆಗಾಗಿ ಅರ್ಜಿ ನಮೂನೆಯ ಲಿಂಕ್ ಕ್ಲಿಕ್ ಮಾಡಿ. ಅರ್ಜಿ ನಮೂನೆಯ ಪಿಡಿಎಫ್ ನ ಪ್ರಿಂಟ್ ಔಟ್ ತೆಗೆದುಕೊಂಡು, ಅದರ ನಂತರ ನಿಮ್ಮ ವಿವರಗಳನ್ನು ಅದರಲ್ಲಿ ನಮೂದಿಸಿ. ಕೊನೆಯದಾಗಿ ನಿಮ್ಮ ದಾಖಲೆಗಳನ್ನು ಲಗತ್ತಿಸಿ. ಅರ್ಜಿ ಭರ್ತಿ ಮಾಡಿದ ನಂತ್ರ ಮತ್ತೊಮ್ಮೆ ಪರಿಶೀಲನೆ ನಡೆಸಿ ಅದನ್ನು ಸಲ್ಲಿಸಬೇಕಾಗುತ್ತದೆ. ನಿಮ್ಮ ಅರ್ಜಿಯನ್ನು ಕಚೇರಿ ಅಧಿಕಾರಿಗಳು ಪರಿಶೀಲಿಸುತ್ತಾರೆ. ಪರಿಶೀಲಿಸಿದ ನಂತರ ಹೊಲಿಗೆ ಯಂತ್ರ ನೀಡಲಾಗುತ್ತದೆ. ಅದಕ್ಕೆ ನೀವು ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ.

Leave A Reply